Honda Activa e vs Suzuki e Access: ಇವೆರೆಡು ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಯಾವುದು ಬೆಸ್ಟ್.. ನೀವೇ ಹೇಳಿ!
ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ ಮತ್ತು ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಗಳು ಹೊಸ ಕ್ರಾಂತಿ ಸೃಷ್ಟಿಸಲು ಮುಂದಾಗಿವೆ. ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೋಂಡಾ ಕಂಪನಿಯು 'ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಬಿಡುಗಡಗೊಳಿಸಿದೆ. ಅದೇ ರೀತಿಯಲ್ಲಿ ಸುಜುಕಿ ಕಂಪನಿಯು ಇ-ಆಕ್ಸೆಸ್ ' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅನಾವರಣಗೊಳಿಸಿದೆ. ನಾವಿಲ್ಲಿ ಇವೆರೆಡು ಇ-ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ತ್ವರಿತ ಹೋಲಿಕೆ ಮಾಡಿದ್ದೇವೆ.
ಬೆಲೆ: ನೂತನ ಹೋಂಡಾ ಆಕ್ಟಿವಾ ಇ (Honda Activa e) ಎಲೆಕ್ಟ್ರಿಕ್ ಸ್ಕೂಟರ್, ಸ್ಟ್ಯಾಂಡರ್ಡ್ & ರೋಡ್‌ಸಿಂಕ್ ಡ್ಯುಯೊ ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ರೂ.1.17 ಲಕ್ಷದಿಂದ ರೂ.1.52 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಸುಜುಕಿ ಇ-ಆಕ್ಸೆಸ್ (Suzuki e-Access) ಮುಂಬರುವ ತಿಂಗಳಲ್ಲಿ ಮಾರಾಟಕ್ಕೆ ಬರಲಿದ್ದು, ರೂ.1 ಲಕ್ಷದಿಂದ ರೂ.1,20 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಬಣ್ಣಗಳು: 'ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರಿನಿಟಿ ಬ್ಲೂ, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್ ಹಾಗೂ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ 5 ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. 'ಇ-ಆಕ್ಸೆಸ್' ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್ ಮತ್ತು ಪರ್ಲ್ ಜೇಡ್ ಗ್ರೀನ್ ಎಂಬ 3 ಬಣ್ಣಗಳನ್ನು ಒಳಗೊಂಡಿದೆ. ಇ-ಆಕ್ಸೆಸ್‌ಗೆ ಹೋಲಿಕೆ ಮಾಡಿದರೆ, ಆಕ್ಟಿವಾ ಇ ಹೆಚ್ಚುವರಿಯಾಗಿ ಎರಡು ಬಣ್ಣಗಳೊಂದಿಗೆ ದೊರೆಯುತ್ತದೆ.
ಕಾರ್ಯಕ್ಷಮತೆ: ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್, 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಇಕಾನ್, ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟ್ ಎಂಬ 3 ಆಕರ್ಷಕ ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಕೊಂಡಿದೆ.
ಸುಜುಕಿ ಇ-ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್, 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇಕೋ, ರೈಡ್ ಎ ಮತ್ತು ರೈಡ್ ಬಿ ಎಂಬ ಮೂರು ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ನೂತನ ಇ-ಆಕ್ಸೆಸ್‌ಗೆ ಹೋಲಿಸಿದರೆ, ಆಕ್ಟಿವಾ ಇ ಸ್ವಲ್ಪ ಹೆಚ್ಚಿನ ರೇಂಜ್ ನೀಡುತ್ತದೆ.
ವೈಶಿಷ್ಟ್ಯಗಳು: ನೂತನ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್, 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಹೆಚ್-ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳು ಮತ್ತು ಟೈಲ್‌ಲ್ಯಾಂಪ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಸುಜುಕಿ ಇ-ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಟಿಎಫ್‌ಟಿ ಡ್ಯಾಶ್‌ಬೋರ್ಡ್, ಸ್ಮಾರ್ಟ್ ಕೀ, ನ್ಯಾವಿಗೇಷನ್ ಸಿಸ್ಟಮ್, ಸೈಡ್-ಸ್ಟ್ಯಾಂಡ್ ಅಲರ್ಟ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ನ್ನು ಒಳಗೊಂಡಿದೆ. ಇನ್ನು ಬಹುತೇಕ ಎರಡು ಸ್ಕೂಟರ್‌ಗಳು ಒಂದೇ ರೀತಿಯ ವೈಶಿಷ್ಟ್ಯವನ್ನು ಪಡೆದಿವೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications