Honda: ನಂ.1 ಸ್ಕೂಟರ್.. ಅದೇಕೋ 'ಹೋಂಡಾ ಆಕ್ಟಿವಾ' ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ, ಕಾರಣವೇನು?

ಹೋಂಡಾ ಆಕ್ಟಿವಾ (Honda Activa) ಜನಮೆಚ್ಚಿದ ಸ್ಕೂಟರ್ ಆಗಿದ್ದು, ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಹಿನ್ನೆಲೆ ಪ್ರತಿ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸ್ಕೂಟರ್‌ಗಳ ಪಟ್ಟಿಯಲ್ಲಿಯೂ ಇದೇ 'ಹೋಂಡಾ ಆಕ್ಟಿವಾ' ಮೊದಲ ಸ್ಥಾನದಲ್ಲಿದೆ. ಅದರ ಹೊರತಾಗಿ ಫೆಬ್ರವರಿ ತಿಂಗಳ ಆಕ್ಟಿವಾ ಮಾರಾಟ ಅಂಕಿಸಂಖ್ಯೆಯಲ್ಲಿ ಕುಸಿತವನ್ನು ದಾಖಲಿಸಲಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಫೆಬ್ರವರಿ-2025) ಹೋಂಡಾ ಕಂಪನಿಯು ಸರಿ ಸುಮಾರು 1,74,009 ಯುನಿಟ್‌ 'ಆಕ್ಟಿವಾ' ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 2,00134 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಮಾರಾಟ ಪ್ರಮಾಣ ಶೇಕಡ -13.05% ಇಳಿಕೆಯಾಗಿದೆ. ಒಟ್ಟಾರೆ ಮಾರಾಟದಲ್ಲಿ ಕುಸಿತ ಕಂಡಿದ್ದರೂ ಸ್ಕೂಟರ್ ವಿಭಾಗದಲ್ಲಿ 'ಆಕ್ಟಿವಾ' ಶೇಕಡ 37.95% ಮಾರುಕಟ್ಟೆ ಪಾಲನ್ನು ಹೊಂದಿದೆ.

Honda Activa February 2025 Sales Details

ಪ್ರಖ್ಯಾತ ಸ್ಕೂಟರ್ ಆಗಿದ್ದರೂ ಆಕ್ಟಿವಾ ಮಾರಾಟ ಪ್ರಮಾಣ ಇಳಿಮುಖವಾಗಿರವ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸಿಲ್ಲ. ಈ ಮಾರ್ಚ್‌ನಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬಗಳು ಜೊತೆಯಲ್ಲಿಯೇ ಬರುತ್ತಿರುವುದರಿಂದ ಮಾರಾಟ ಅಂಕಿಸಂಖ್ಯೆ ಸುಧಾರಣೆಯಾಗುವ ನಿರೀಕ್ಷೆಯಿದೆ. ಇತರೆ ಕಂಪನಿಗಳ ಪೈಪೋಟಿ ಹಾಗೂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯಿಂದ 'ಆಕ್ಟಿವಾ' ಮಾರಾಟ ಕುಸಿತವಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Honda Activa February 2025 Sales Details

ಸದ್ಯ, ದೇಶೀಯವಾಗಿ ಹೋಂಡಾ ಆಕ್ಟಿವಾ ಸ್ಕೂಟರ್ ಹಲವು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಈ ಸ್ಕೂಟರ್‌ಗೆ ಟಿವಿಎಸ್ ಜುಪಿಟರ್, ಸುಜುಕಿ ಆಕ್ಸೆಸ್ ಹಾಗೂ ಹೀರೋ ಡೆಸ್ಟಿನಿ ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಆಕ್ಟಿವಾ ಸ್ಕೂಟರ್ ವಿಧಗಳಿವು..

ಹೋಂಡಾ ಆಕ್ಟಿವಾ 125 (Honda Activa 125): ಈ ಸ್ಕೂಟರ್ ಕನಿಷ್ಠ ರೂ.99,000 ಹಾಗೂ ಗರಿಷ್ಠ ರೂ.1.03 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

Honda Activa February 2025 Sales Details

ಹೋಂಡಾ ಆಕ್ಟಿವಾ 110 (Honda Activa 110): ಇದು ರೂ.81,625 ರಿಂದ ರೂ.86,625 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಹಾಗೂ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Take a Poll

ಹೋಂಡಾ ಆಕ್ಟಿವಾ ಇ ಕೂಡ ಲಭ್ಯ: ಈ ಎಲೆಕ್ಟ್ರಿಕ್ ಸ್ಕೂಟರ್ ಕನಿಷ್ಠ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದು 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 24, 2025, 10:58 [IST]
English summary
Honda activa february 2025 sales details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+