Honda Activa: ಹೋಂಡಾ ಆಕ್ಟಿವಾಗಾಗಿ ಶೋರೂಂ ಮುಂದೆ ಕ್ಯೂ ನಿಂತ ಗ್ರಾಹಕರು.. ಬಿಸಿ ಜಿಲೇಬಿಯಂತೆ ಸೇಲ್ಸ್!

ದೇಶೀಯ ದ್ವಿಚಕ್ರ ವಾಹನ (Two Wheeler) ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ (Honda Activa) ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸ್ಕೂಟರ್ ಆಗಿ ಹೊರಹೊಮ್ಮಿದೆ. ಇದು ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಪವರ್‌ಟ್ರೇನ್‌ ಆಯ್ಕೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ 'ಆಕ್ಟಿವಾ' ಸ್ಕೂಟರ್ ಈ ಜುಲೈ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಒಟ್ಟು 2,37,413 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 21.37% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 1,95,604 ಯುನಿಟ್‌ಗಳನ್ನು ಮಾರಲಾಗಿತ್ತು.

ಹೋಂಡಾ ಆಕ್ಟಿವಾ ಸ್ಕೂಟರ್ ಈ ಪರಿಪ್ರಮಾಣದಲ್ಲಿ ಮಾರಾಟವಾಗಲು ನಾನಾ ಕಾರಣಗಳಿವೆ. ಇದು ವಿಶ್ವಾಸಾರ್ಹತೆ, ಸುಲಭ ಚಾಲನೆ ಹಾಗೂ ಉತ್ತಮ ಇಂಧನ ದಕ್ಷತೆಯಿಂದಲೂ ಹೆಸರುವಾಸಿಯಾಗಿದೆ. ಆರಾಮದಾಯಕ ಸಂಚಾರ ಮತ್ತು ನಗರ ಪ್ರಯಾಣಕ್ಕೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Honda Activa July 2025 Sales 2 37 413 Units Sold Details

ಹೋಂಡಾ ಆಕ್ಟಿವಾ 110 (Honda Activa 110) ವಿಶೇಷತೆಗಳೇನು:

ಈ ಸ್ಕೂಟರ್ ರೂ.80,000 (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಸೆಳೆಯುವಂತಿದೆ. ಡಿಸೆಂಟ್ ಬ್ಲೂ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 109.51 ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್, 8000 ಆರ್‌ಪಿಎಂನಲ್ಲಿ 7.9 ಬಿಹೆಚ್‌ಪಿ (ಅಶ್ವ ಶಕ್ತಿ) ಮತ್ತು 5500 ಆರ್‌ಪಿಎಂನಲ್ಲಿ 9.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 59 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

Honda Activa July 2025 Sales 2 37 413 Units Sold Details

ನೂತನ ಆಕ್ಟಿವಾ 110 ಸ್ಕೂಟರ್ 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಬರೋಬ್ಬರಿ 106 ಕೆಜಿ ತೂಕವು ಇದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಆಕ್ಟಿವಾ 125 (Honda Activa 125) ಹೇಗಿದೆ:

ಈ ಸ್ಕೂಟರ್ ರೂ.94,000 ರಿಂದ ರೂ.97,000 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅದ್ಭುತವಾದ ವಿನ್ಯಾಸವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Honda Activa July 2025 Sales 2 37 413 Units Sold Details

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6500 ಆರ್‌ಪಿಎಂನಲ್ಲಿ 8.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5000 ಆರ್‌ಪಿಎಂನಲ್ಲಿ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 47 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5.3 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಹೊಸ ಆಕ್ಟಿವಾ 125 ಸ್ಕೂಟರ್ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಸೈಡೆಡ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ ಇ (Honda Activa e) ಸಹ ಖರೀದಿಗೆ ಲಭ್ಯ:

ಈ ಸ್ಕೂಟರ್ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Article Published On: Monday, August 25, 2025, 13:31 [IST]
English summary
Honda activa july 2025 sales 237413 units sold details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+