Honda Activa: ಕಿಂಗ್ ಆಫ್ ದಿ ಸ್ಕೂಟರ್, ಅಗ್ಗದ ಹೋಂಡಾ ಆಕ್ಟಿವಾಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!

ಹೋಂಡಾ ಆಕ್ಟಿವಾ (Honda Activa) ನಂಬರ್ 1 ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲಿ 'ಆಕ್ಟಿವಾ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,26,551 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,66,806 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯಲ್ಲಿ ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 22.39 ಪ್ರಗತಿಯಾಗಿದೆ.

ಇದೇ ಅಕ್ಟೋಬರ್‌ನಲ್ಲಿ 'ಹೋಂಡಾ ಆಕ್ಟಿವಾ' ಮಾರಾಟ ಪ್ರಮಾಣವು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಸ್ಕೂಟರ್‌ನ ಬೆಲೆಯೂ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬವಿದ್ದರಿಂದ 'ಆಕ್ಟಿವಾ' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

Honda Activa October 2025 Sales Report

ಹೊಸ 'ಹೋಂಡಾ ಆಕ್ಟಿವಾ' ಸ್ಕೂಟರ್ ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ, ಆಕ್ಟಿವಾ 110 ಹಾಗೂ ಆಕ್ಟಿವಾ 125 ಎಂದು. ಇವುಗಳು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಹಾಗೆಯೇ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುತ್ತವೆ.

ಹೋಂಡಾ ಆಕ್ಟಿವಾ 125 (Honda Activa 125) ವಿಶೇಷತೆಗಳೇನು:

ಇದನ್ನು ಎಲ್ಲ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಕನಿಷ್ಠ ರೂ 86,085 ಹಾಗೂ ಗರಿಷ್ಠ ರೂ.95,744 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಹಾಗೂ ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಸ್ಕೂಟರ್, ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 47 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಿಯಲಿದೆ. 5.3 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1260 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Honda Activa October 2025 Sales Report

ನೂತನ 'ಆಕ್ಟಿವಾ 125' ಸ್ಕೂಟರ್ ಟಿಎಫ್‌ಟಿ ಕನ್ಸೋಲ್ (4.2 ಇಂಚು), ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಸಿಂಗಲ್ ಸೀಟ್ ಮತ್ತು ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಸಿಂಗಲ್ ಸೈಡೆಡ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ 110 (Honda Activa 110) ಹೇಗಿದೆ:

ಇದು ರೂ.83,918 ರಿಂದ ರೂ.96,938 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬ್ಲೂ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1260 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಈ ಸ್ಕೂಟರ್ 109.51-ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 59 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ (4.2 ಇಂಚು), ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, November 25, 2025, 8:30 [IST]
English summary
Honda activa october 2025 sales report
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+