Honda Activa: ಬೆಲೆಯೂ ಕಮ್ಮಿ.. ಆದರೂ 'ಹೋಂಡಾ ಆಕ್ಟಿವಾ' ಮಾರಾಟ ಸಂಖ್ಯೆ ತೀವ್ರ ಕುಸಿತ, ಕಾರಣವೇನು?

ಹೋಂಡಾ ಆಕ್ಟಿವಾ (Honda Activa) ಪ್ರಮುಖ ಸ್ಕೂಟರ್ ಎಂದೇ ಹೆಸರುವಾಸಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಈ ಸ್ಕೂಟರ್‌ನ್ನು ಸಾಮಾನ್ಯರಿಂದ ಹಿಡಿದು ಶ್ರೀಮಂತರವರೆಗೆ ಎಲ್ಲರೂ ತಮ್ಮ ದಿನನಿತ್ಯದ ಬಳಕೆಗಾಗಿ ಖರೀದಿ ಮಾಡುತ್ತಾರೆ. ಹೀಗಾಗಿ, ಸ್ಕೂಟರ್ ವಿಭಾಗದಲ್ಲಿ 'ಹೋಂಡಾ ಆಕ್ಟಿವಾ' ಮೊದಲ ಸ್ಥಾನದಲ್ಲಿದೆ. ಅದರ ಹೊರತಾಗಿಯೂ ಈ ಏಪ್ರಿಲ್ ತಿಂಗಳಲ್ಲಿ ಇದೇ ಆಕ್ಟಿವಾದ ಮಾರಾಟ ಸಂಖ್ಯೆ ತೀವ್ರತರದಲ್ಲಿ ಕುಸಿತವಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೋದ ತಿಂಗಳು (ಏಪ್ರಿಲ್‌-2025) ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ, 1,94,787 ಯುನಿಟ್ 'ಆಕ್ಟಿವಾ' ಸ್ಕೂಟರ್‌ನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 2,60,300 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -25.1% ಇಳಿಕೆಯಾಗಿದೆ.

Honda Activa Scooter April 2025 Sales Details

ಹೋಂಡಾ ಆಕ್ಟಿವಾ ಸ್ಕೂಟರ್ ಮಾರಾಟ ಸಂಖ್ಯೆ ಇಳಿಮುಖವಾಗಲು ನಾನಾ ಕಾರಣಗಳಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಬಹುಮುಖ್ಯವಾಗಿ 'ಆಕ್ಟಿವಾ' ದರಕ್ಕೆ ಲಭ್ಯವಿರುವ ಇತರೆ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳ ಖರೀದಿಯತ್ತ ಗ್ರಾಹಕರು ಮುಖ ಮಾಡಿದ್ದಾರೆ. ಜೊತೆಗೆ ಪ್ರೀಮಿಯಂ ಸ್ಕೂಟರ್‌ಗಳನ್ನು ಕೊಳ್ಳುವ ಕಡೆಗೂ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇವೆಲ್ಲವುಗಳ ಹಿನ್ನಲೆಯಲ್ಲಿ 'ಆಕ್ಟಿವಾ' ಮಾರಾಟ ಸಂಖ್ಯೆ ಕುಸಿತವಾಗುತ್ತದೆ ಎನ್ನಲಾಗಿದೆ.

ಆದರೆ, 'ಹೋಂಡಾ ಆಕ್ಟಿವಾ' ಸ್ಕೂಟರ್ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬಗ್ಗೆ ಕಂಪನಿಯ ಕಡೆಯಿಂದ ಯಾವುದೇ ಸ್ಪಷ್ಟವಾದ ಕಾರಣಗಳು ಬಹಿರಂಗಗೊಂಡಿಲ್ಲ. ಮುಂಬರುವ ಹಬ್ಬದ ಋತುವಿನಲ್ಲಿ ಇದೇ 'ಆಕ್ಟಿವಾ' ಮಾರಾಟ ಸಂಖ್ಯೆ ದಿಢೀರನೇ ಹೆಚ್ಚಳಗೊಂಡರೂ ಅಚ್ಚರಿ ಪಡಬೇಕಾಗಿಲ್ಲ.

Honda Activa Scooter April 2025 Sales Details

ಪೆಟ್ರೋಲ್ & ಎಲೆಕ್ಟ್ರಿಕ್ ರೂಪದಲ್ಲಿ 'ಹೋಂಡಾ ಆಕ್ಟಿವಾ' ಸ್ಕೂಟರ್ ಲಭ್ಯ..

ಹೋಂಡಾ ಆಕ್ಟಿವಾ 110: ಈ ಸ್ಕೂಟರ್ ರೂ.80,000 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 109.51 ಸಿಸಿ ಒಬಿಡಿ-2ಬಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಆಕ್ಟಿವಾ 125: ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.94,000 ರಿಂದ ರೂ.97,000 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 123.92 ಸಿಸಿ ಒಬಿಡಿ-2ಬಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Honda Activa Scooter April 2025 Sales Details

ಹೋಂಡಾ ಆಕ್ಟಿವಾ ಇ: ಈ ಎಲೆಕ್ಟ್ರಿಕ್ ಸ್ಕೂಟರ್ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5 ಕೆಡಬ್ಲ್ಯೂಹೆಚ್‌ನ ಎರಡು ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಓಡುತ್ತದೆ. 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 27, 2025, 10:41 [IST]
English summary
Honda activa scooter april 2025 sales details
Read more on india honda motorcycle
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+