ಭಾರತದ ಸ್ಕೂಟರ್‌ಗಳ ರಾಜ! ನಂ.1 ಹೋಂಡಾ ಆಕ್ಟಿವಾಗೆ ಫುಲ್ ಡಿಮ್ಯಾಂಡ್.. 35,000,000 ಯುನಿಟ್ ಮಾರಾಟ
ಹೋಂಡಾ ಆಕ್ಟಿವಾ (Honda Activa) ನಂಬರ್ 1 ಸ್ಕೂಟರ್ ಎಂದೇ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದು ಅತ್ಯಾಕರ್ಷಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಸ್ಕೂಟರ್ ಮಾರಾಟದಲ್ಲಿ ಹೊಸ ಇತಿಹಾಸ ಬರೆಯಲಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಭಾರತದಲ್ಲಿ ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ, ಭರ್ತಿ 24 ವರ್ಷಗಳ ಅವಧಿಯಲ್ಲಿ ಸರಿ ಸುಮಾರು 3.5 ಕೋಟಿ ಯುನಿಟ್ 'ಆಕ್ಟಿವಾ' ಸ್ಕೂಟರ್‌ಗಳನ್ನು ಮಾರಾಟಗೊಳಿಸಿದೆ. ಈ ಮೂಲಕ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದೆ. ಆಕ್ಟಿವಾದ ಈ ಸುಧೀರ್ಘ ಪ್ರಯಾಣದಲ್ಲಿ ಆಕ್ಟಿವಾ 110, ಆಕ್ಟಿವಾ 125, ಹಾಗೂ ಆಕ್ಟಿವಾ-ಐ (ಸ್ಥಗಿತ) ಮಾಡೆಲ್‌ಗಳು ಜೊತೆಯಾಗಿವೆ.

2001 ರಲ್ಲಿ ಮೊದಲ ಬಾರಿಗೆ 'ಹೋಂಡಾ ಆಕ್ಟಿವಾ' ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. 2015 ರವರೆಗೆ 10 ಕೋಟಿ ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. 2018 ವರೆಗೆ ಕೇವಲ ಮೂರು ವರ್ಷಗಳಲ್ಲಿ ಆ ಸಂಖ್ಯೆ 20 ಕೋಟಿ ಯುನಿಟ್‌ಗೆ ತಲುಪಿತ್ತು.
ದಶಕಗಳ ಕಾಲ 'ಹೋಂಡಾ ಆಕ್ಟಿವಾ' ಮಾರಾಟ ಸಂಖ್ಯೆ ಈ ಪರಿಪ್ರಮಾಣದಲ್ಲಿ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ, ಈ ಸ್ಕೂಟರ್‌ನ್ನು ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅಷ್ಟೇನೂ ದುಬಾರಿ ಬೆಲೆಯನ್ನು ಹೊಂದಿಲ್ಲ. ಇದು ದೀರ್ಘಕಾಲ ಬಾಳಿಕೆ ಬರುತ್ತದೆ. ನಿರ್ವಹಣಾ ವೆಚ್ಚವು ಕಡಿಮೆಯಿದೆ. ಹೀಗಾಗಿ, 'ಆಕ್ಟಿವಾ' ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಹೋಂಡಾ ಆಕ್ಟಿವಾ 125 (Honda Activa 125) ಹೇಗಿದೆ:
ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿದ್ದಾರೆ. ರೂ.88,339 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಮತ್ತು ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ 'ಆಕ್ಟಿವಾ 125' ಸ್ಕೂಟರ್ 123.92 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ಯಾವುದೇ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 47 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ 110 (Honda Activa 110) ವಿಶೇಷತೆಗಳೇನು:
ಇದು ಖರೀದಿದಾರ ನೆಚ್ಚಿನ ಸ್ಕೂಟರ್ ಆಗಿದೆ. ರೂ.84,021 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 59 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಆಕ್ಟಿವಾ ಇ (Honda Activa e) ಕೂಡ ದೊರೆಯುತ್ತದೆ:
ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








