Honda Activa: ನಂ.1.. ಆದರೂ ಹೋಂಡಾ ಆಕ್ಟಿವಾ ಸ್ಕೂಟರ್ ಖರೀದಿಸಲು ಗ್ರಾಹಕರಿಗೆ ಮನಸಿಲ್ಲ.. ಕಾರಣವೇನು?

ಹೋಂಡಾ ಆಕ್ಟಿವಾ (Honda Activa) ನಂಬರ್ 1 ಸ್ಕೂಟರ್ ಆಗಿದೆ. ಇದನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೂ ಈ ಸ್ಕೂಟರ್ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಈ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರಿದೆ. ಒಟ್ಟು 2,37,716 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2,62,316 ಯುನಿಟ್‌ಗಳನ್ನು ಮಾರಲಾಯಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 9.37% ಇಳಿಮುಖವಾಗಿದೆ. ಹಾಗೆಯೇ ಇದೇ ಆಗಸ್ಟ್‌ನಲ್ಲಿ 2,44,271 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಮೂಲಕ ತಿಂಗಳಿಂದ ತಿಂಗಳ (MoM) ಮಾರಾಟವು ಶೇಕಡ 2.68% ಕುಂಠಿತವಾಗಿದೆ.

ಸೆಪ್ಟೆಂಬರ್‌ನಲ್ಲಿ ಹೊಸ 'ಹೋಂಡಾ ಆಕ್ಟಿವಾ' ಮಾರಾಟ ಸಂಖ್ಯೆ ಇಳಿಕೆಯಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಇದರ ದರಕ್ಕೆ ಬೇರೆ ಕಂಪನಿಯ ಸ್ಕೂಟರ್‌ಗಳು ಸಹ ಖರೀದಿಗೆ ಲಭ್ಯವಿವೆ. ಖರೀದಿದಾರರು ಅವುಗಳನ್ನು ಕೊಂಡುಕೊಳ್ಳುವತ್ತ ಮುಖ ಮಾಡಿದ್ದಾರೆ. ಜೊತೆಗೆ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, 'ಆಕ್ಟಿವಾ' ಬೆಲೆಯು ಇಳಿಕೆಯಾಗಿದೆ. ಆದರೆ ಈ ಬಗ್ಗೆ ನಿರ್ದಿಷ್ಟ ಮಾಹಿತಿ ಕೊರತೆಯಿಂದಲೂ ಮಾರಾಟವು ಕುಸಿತವಾಗಿದೆ ಎನ್ನಲಾಗಿದೆ.

Honda Activa September 2025 Sales Decline Details

ವಿಶೇಷವಾಗಿ 'ಹೋಂಡಾ ಆಕ್ಟಿವಾ' ಸ್ಕೂಟರ್‌ನ್ನು ಎರಡು ವಿಧದಲ್ಲಿ ಮಾರಾಟ ಮಾಡಲಾಗುತ್ತದೆ. ಅವುಗಳೆಂದರೆ, ಆಕ್ಟಿವಾ 125 ಹಾಗೂ ಆಕ್ಟಿವಾ 110. ಇವು ಕೈಗೆಟುಕುವ ಬೆಲೆಯಲ್ಲಿಯೂ ಸಿಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ನಿರ್ವಹಣಾ ವೆಚ್ಚವು ತುಸು ಅಗ್ಗವಾಗಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿವೆ.

ಹೋಂಡಾ ಆಕ್ಟಿವಾ 125 (Honda Activa 125) ವಿಶೇಷತೆಗಳೇನು:

ಇದು ರೂ.79,505 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅದಕ್ಕೆ ತಕ್ಕಂತೆ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಪ್ರೆಷಿಯಸ್ ವೈಟ್, ಪರ್ಲ್ ಸೈರನ್ ಬ್ಲೂ ಹಾಗೂ ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Honda Activa September 2025 Sales Decline Details

ನೂತನ 'ಆಕ್ಟಿವಾ 125' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿ.ಮೀವರೆಗೆ ಮೈಲೇಜ್ ಬಿಡುತ್ತದೆ. 5.3 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ 110 (Honda Activa 110) ಹೇಗಿದೆ:

ಈ ಸ್ಕೂಟರ್ ರೂ.75,619 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಡೀಸೆಂಟ್ ಬ್ಲೂ ಮೆಟಾಲಿಕ್ ಮತ್ತು ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Honda Activa September 2025 Sales Decline Details

ಹೊಸ 'ಆಕ್ಟಿವಾ 110' ಸ್ಕೂಟರ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 59 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಆಕ್ಟಿವಾ ಇ (Honda Activa e) ಕೂಡ ಖರೀದಿಗೆ ಲಭ್ಯ:

ಇದು ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್ ಮತ್ತು ಪರ್ಲ್ ಸೆರಿನಿಟಿ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ . ಸಂಪೂರ್ಣ ಚಾರ್ಜ್‌ನಲ್ಲಿ 102 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Friday, October 24, 2025, 10:56 [IST]
English summary
Honda activa september 2025 sales decline details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+