60 Km ಮೈಲೇಜ್, ಬರೀ 77,000 ರೂಪಾಯಿಗೆ ಲಭ್ಯ.. ಈ ಜನಪ್ರಿಯ ಬೈಕ್ ಆಫೀಸ್‌ಗೆ ಹೋಗುವವರಿಗೆ ಬೆಸ್ಟ್ ಚಾಯ್ಸ್!

ಹೋಂಡಾ ಲಿವೋ (Honda Livo) ಜನಪ್ರಿಯ ಪ್ರಯಾಣಿಕ ಬೈಕ್ ಆಗಿದ್ದು, ದೈನಂದಿನ ಪ್ರಯಾಣಕ್ಕೆ ಹೆಚ್ಚು ಸೂಕ್ತವಾಗಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಪ್ರೀಮಿಯಂ ಲುಕ್‌ನ್ನು ಹೊಂದಿದೆ. ನೀವು ಪ್ರತಿನಿತ್ಯ ಆಫೀಸ್‌ಗೆ ತೆರಳಲು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, 'ಲಿವೋ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಬೈಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ನೂತನ 'ಹೋಂಡಾ ಲಿವೋ' ಮೋಟಾರ್‌ಸೈಕಲ್‌ ಅಗ್ಗದ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.77,492 ರಿಂದ ರೂ.80,059 (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಡ್ರಮ್ (Drum) ಹಾಗೂ ಡಿಸ್ಕ್ (Disc) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Honda Livo Bike Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಕಣ್ಮನವನ್ನು ಸೆಳೆಯಬಲ್ಲದು. ಉತ್ತಮವಾದ ಹೆಡ್‌ಲ್ಯಾಂಪ್‌, ಇಂಡಿಕೇಟರ್‌ಗಳು ಹಾಗೂ ಟೈಲ್‌ಲೈಟ್‌ನ್ನು ಪಡೆದಿದೆ. ಸಿಂಗಲ್ ಸೀಟ್, 18 ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಪರ್ಲ್ ಸೈರನ್ ಬ್ಲೂ (ಜಿನಿ ಗ್ರೇ ಶ್ರೌಡ್ + ಗ್ರೀನ್ ಸ್ಟ್ರೈಪ್ಸ್), ಪರ್ಲ್ ಇಗ್ನಿಯಸ್ ಬ್ಲ್ಯಾಕ್ (ಜಿನಿ ಗ್ರೇ ಶ್ರೌಡ್ + ಬ್ಲೂ ಸ್ಟ್ರೈಪ್ಸ್) ಮತ್ತು ಪರ್ಲ್ ಇಗ್ನಿಯಸ್ ಬ್ಲಾಕ್ (ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಶ್ರೌಡ್ + ಆರೆಂಜ್ ಸ್ಟ್ರೈಪ್ಸ್) ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸುತ್ತಳತೆ (Dimensions):

ಈ ಬೈಕ್ ಹೆಚ್ಚು ವಿಶಾಲವಾಗಿದೆ. 2,020 ಮಿ.ಮೀ ಉದ್ದ, 751 ಮಿ.ಮೀ ಅಗಲ ಮತ್ತು 1,116 ಮಿ.ಮೀ ಎತ್ತರವಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,278 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 112 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):

ಹೊಸ 'ಹೋಂಡಾ ಲಿವೋ' ಮೋಟಾರ್‌ಸೈಕಲ್‌ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 109.51 ಸಿಸಿ ಏರ್-ಕೂಲ್ಡ್, 4-ಸ್ಟ್ರೋಕ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.67 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.30 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಇದು ನಗರ ಹಾಗೂ ಗ್ರಾಮೀಣ ಪ್ರದೇಶದ ರಸ್ತೆಗಳಿಗೂ ಹೊಂದಿಕೆಯಾಗಲಿದ್ದು, 60 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 9 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಈ ಬೈಕ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಇಂಟಿಗ್ರೇಟೆಡ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸ್ವಿಚ್, ಸೈಡ್ - ಸ್ಟ್ಯಾಂಡ್ ಕಟ್ ಆಫ್ ಸೆನ್ಸರ್ ಹಾಗೂ ಪಿಲಿಯನ್ ಗ್ರಾಬ್ ರೈಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸೀಟ್‌ನ ಉದ್ದವು 657 ಮಿ.ಮೀ ಇದೆ.

ಸಸ್ಪೆನ್ಷನ್ ಸೆಟಪ್‌ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ನೂತನ 'ಹೋಂಡಾ ಲಿವೋ' ಮೋಟಾರ್‌ಸೈಕಲ್‌ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) 5-ಸ್ಪೆಪ್ ಅಡ್ಜಸ್ಟೇಬಲ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City+), ಬಜಾಜ್ ಪ್ಲಾಟಿನಾ (Bajaj Platina), ಹೀರೋ ಪ್ಯಾಶನ್ ಪ್ರೊ (Hero Passion Pro) ಹಾಗೂ ಹೀರೋ ಸ್ಪ್ಲೆಂಡರ್ ಎಕ್ಸ್‌ಟೆಕ್‌ (Hero Splendor Xtec) ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Wednesday, November 12, 2025, 13:44 [IST]
English summary
Honda livo bike price design mileage features and all top things
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+