ಹೋಂಡಾ ಕ್ಯೂಸಿ1 & ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ಇತ್ತೀಚೆಗೆ ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕ್ಯೂಸಿ1 (QC1) ಹಾಗೂ ಆಕ್ಟಿವಾ ಇ (Activa e) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಕ್ಕೆ ತಂದಿತ್ತು. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ನೂತನ ಹೋಂಡಾ ಕ್ಯೂಸಿ1 & ಆಕ್ಟಿವಾ ಇ ಮಾಡೆಲ್‌ಗಳು ಉತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಈ ನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ನೂತನ ಹೋಂಡಾ ಕ್ಯೂಸಿ1 (Honda QC1) ಎಲೆಕ್ಟ್ರಿಕ್ ಸ್ಕೂಟರ್, ರೂ.96,500 ವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.10,000 ಡೌನ್-ಪೇಮೆಂಟ್ ಪಾವತಿ ಮಾಡಿ ಖರೀದಿ ಮಾಡಿದರೆ, 86,500 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ ಮೂರು ವರ್ಷದ ಅವಧಿಗೆ ತಿಂಗಳಿಗೆ ರೂ.3,000 ವರೆಗೆ ಇಎಂಐ ಕಟ್ಟಬೇಕು.

ನೂತನ ಹೋಂಡಾ ಕ್ಯೂಸಿ1 ಇ-ಸ್ಕೂಟರ್ 1.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಸೆರೆನಿಟಿ ಬ್ಲೂ, ಪರ್ಲ್ ಮಿಸ್ಟಿ ವೈಟ್ ಮತ್ತು ಪರ್ಲ್ ನೈಟ್‌ಸ್ಟಾರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಸ್ಕೂಟರ್‌ನಲ್ಲಿ ಉಪಯೋಗಿಸಲಾಗಿರುವ ಬ್ಯಾಟರಿ ಪ್ಯಾಕ್, 4.30 ಗಂಟೆಗಳಲ್ಲಿ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ಇದು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಫುಲ್-ಎಲ್ಇಡಿ ಲೈಟಿಂಗ್ ಸೆಟಪ್ ಮತ್ತು ಫ್ಲಾಟ್ ಫ್ಲೋರ್‌ಬೋರ್ಡ್ ಅನ್ನು ಹೊಂದಿದೆ. ಜೊತೆಗೆ ಎಲ್‌ಸಿಡಿ ಡಿಸ್‌ಪ್ಲೇ ಮತ್ತು ಯುಎಸ್‌ಬಿ ಟೈಪ್ ಸಿ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೋಂಡಾ ಆಕ್ಟಿವಾ ಇ (Honda Activa e) ಸ್ಟ್ಯಾಂಡರ್ಡ್ ರೂಪಾಂತರ (ವೇರಿಯೆಂಟ್), ರೂ.1.25 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.10,000 ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.1.15 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ ಮೂರು ವರ್ಷಗಳಿಗೆ ಮಾಸಿಕ ರೂ.4,000 ವರೆಗೆ ಇಎಂಐ ಪಾವತಿ ಮಾಡಬೇಕು.
ಹೋಂಡಾ ಆಕ್ಟಿವಾ ಇ ರೋಡ್‌ಸಿಂಕ್ ಡ್ಯುಯೊ ರೂಪಾಂತರ, ರೂ.1.60 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ರೂ.10,000 ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.1.50 ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ ಮೂರು ವರ್ಷಕ್ಕೆ ತಿಂಗಳಿಗೆ ರೂ.5,000 ವರೆಗೆ ಇಎಂಐ ಕಟ್ಟಬೇಕು.

ಹೊಸ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್, 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯವಿರುವ ಎರಡು ಬ್ಯಾಟರಿಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಪರ್ಲ್ ಸೆರಿನಿಟಿ ಬ್ಲೂ, ಪರ್ಲ್ ಮಿಸ್ಟಿ ವೈಟ್ ಮತ್ತು ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಫ್ಲಶ್-ಫಿಟ್ಟಿಂಗ್ ಪಿಲಿಯನ್ ಫುಟ್‌ರೆಸ್ಟ್‌ಗಳನ್ನು ಒಳಗೊಂಡಿದೆ. ಇಕಾನ್, ಸ್ಟ್ಯಾಂಡರ್ಡ್ & ಸ್ಪೋರ್ಟ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಹೆಚ್-ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications