Honda: ಕಡಿಮೆ ಬೆಲೆಯ ಹೋಂಡಾ ಕ್ಯೂಸಿ1 & ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳ ಕುರಿತ ಪ್ರಮುಖಾಂಶಗಳಿವು!

ಭಾರತದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ 'ಆಕ್ಟಿವಾ' ಸ್ಕೂಟರ್‌ಗಳನ್ನು ಮಾರಾಟಗೊಳಿಸುವ ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕಂಪನಿಯು ಕ್ಯೂಸಿ1(QC1) ಮತ್ತು ಆಕ್ಟಿವಾ ಇ (Activa e) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿತ್ತು. ಬನ್ನಿ.. ಈ ನೂತನ ಸ್ಕೂಟರ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಬೆಲೆ (Price): ಹೊಚ್ಚ ಹೊಸ ಹೋಂಡಾ ಕ್ಯೂಸಿ1 ಮತ್ತು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಕ್ಯೂಸಿ1 ರೂ.90,000 ದರವನ್ನು ಹೊಂದಿದೆ. ಅದೇ ರೀತಿಯಲ್ಲಿ ಆಕ್ಟಿವಾ ಇ ರೂ.1.17 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.

Honda QC1 And Activa E Electric Scooters Top Things

ವಿನ್ಯಾಸ (Design): ಇವೆರೆಡು ಸ್ಕೂಟರ್‌ಗಳು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿವೆ. ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್, ಫುಲ್-ಎಲ್ಇಡಿ ಲೈಟಿಂಗ್ ಸೆಟಪ್ ಮತ್ತು ಫ್ಲಾಟ್ ಫ್ಲೋರ್‌ಬೋರ್ಡ್ ಅನ್ನು ಪಡೆದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಸೆರೆನಿಟಿ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ನೈಟ್‌ಸ್ಟಾರ್ ಬ್ಲ್ಯಾಕ್ ಹಾಗೂ ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ ವಿನ್ಯಾಸದ ದೃಷ್ಟಿಯಿಂದ ಏಪ್ರನ್-ಮೌಂಟೆಡ್ ಎಲ್ಇಡಿ ಹೆಡ್‌ಲೈಟ್, ಹ್ಯಾಂಡಲ್‌ಬಾರ್ ಕೌಲ್‌ನಲ್ಲಿ ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಫ್ಲಶ್-ಫಿಟ್ಟಿಂಗ್ ಪಿಲಿಯನ್ ಫುಟ್‌ರೆಸ್ಟ್‌ಗಳನ್ನು ಹೊಂದಿದೆ. ಪರ್ಲ್ ಸೆರಿನಿಟಿ ಬ್ಲೂ, ಪರ್ಲ್ ಮಿಸ್ಟಿ ವೈಟ್, ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಮತ್ತು ಪರ್ಲ್ ಶಾಲೋ ಬ್ಲೂ ಎಂಬ ಬಣ್ಣಗಳನ್ನು ಒಳಗೊಂಡಿದೆ.

Honda QC1 And Activa E Electric Scooters Top Things

ಕಾರ್ಯಕ್ಷಮತೆ (Performance): ಹೋಂಡಾ ಕ್ಯೂಸಿ1 ಇ-ಸ್ಕೂಟರ್‌ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಡಿದೆ. ಇದರಲ್ಲಿ ಬಳಕೆ ಮಾಡಿರುವ ಬ್ಯಾಟರಿ ಪ್ಯಾಕ್, 4.30 ಗಂಟೆಗಳಲ್ಲಿ 0 ರಿಂದ 80% ಚಾರ್ಜ್ ಆಗುತ್ತದೆ.

ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌, 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ಓಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇಕಾನ್, ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ಪಡೆದಿದೆ.

ವೈಶಿಷ್ಟ್ಯಗಳು (Features): ನೂತನ ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್‌, ಎಲ್‌ಸಿಡಿ ಡಿಸ್‌ಪ್ಲೇ ಮತ್ತು ಯುಎಸ್‌‍ಬಿ ಟೈಪ್ ಸಿ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹೋಂಡಾ ಆಕ್ಟಿವಾ ಇ ಸ್ಕೂಟರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಹೆಚ್-ಸ್ಮಾರ್ಟ್ ಕೀ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, January 28, 2025, 8:15 [IST]
English summary
Honda qc1 and activa e electric scooters top things
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+