ಕಡಿಮೆ ಬೆಲೆ.. Honda QC1 & Activa e ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಫುಲ್ ಡಿಮ್ಯಾಂಡ್: ಬಿಸಿ 'ಜಾಮೂನ್'ನಂತೆ ಮಾರಾಟ!
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ಪ್ರಮುಖ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ ಕ್ಯೂಸಿ1 (QC1) ಮತ್ತು ಆಕ್ಟಿವಾ ಇ (Activa e) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿತ್ತು. ಇವುಗಳು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಈ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಸದ್ಯ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರ್ಸ್ (SIAM) ಸಂಸ್ಥೆ, ಹೋಂಡಾ ಕ್ಯೂಸಿ1 & ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ ಹಾಗೂ ಮಾರಾಟದ ಅಂಕಿಅಂಶಗಳನ್ನು ಒಳಗೊಂಡ ವರದಿಯನ್ನು ಪ್ರಕಟಿಸಿದೆ. ಒಟ್ಟು 6,432 ಯುನಿಟ್ ಸ್ಕೂಟರ್‌ಗಳನ್ನು ತಯಾರಿಸಲಾಗಿದೆ. ಅದರಲ್ಲಿ ಫೆಬ್ರವರಿಯಲ್ಲಿ 1,862 ಯುನಿಟ್ ಮತ್ತು ಮಾರ್ಚ್‌ನಲ್ಲಿ 4,570 ಯುನಿಟ್‌ಗಳನ್ನು ಉತ್ಪಾದನೆ ಮಾಡಲಾಗಿದೆ.

ಅದೇ ರೀತಿಯಲ್ಲಿ ಈ ಹೋಂಡಾ ಕ್ಯೂಸಿ1 ಮತ್ತು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳು ದೊಡ್ಡ ಸಂಖ್ಯೆಯಲ್ಲಿಯೂ (ಬರೋಬ್ಬರಿ 2662 ಯುನಿಟ್) ಮಾರಾಟಗೊಂಡಿವೆ. ಫೆಬ್ರವರಿಯಲ್ಲಿ 560 ಯುನಿಟ್ ಹಾಗೂ ಮಾರ್ಚ್‌ನಲ್ಲಿ 2,102 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟವಾಗಿದೆ. ವಿಶೇಷವಾಗಿ ನೂತನ ಹೋಂಡಾ ಕ್ಯೂಸಿ1 ಹಾಗೂ ಆಕ್ಟಿವಾ ಇ ಸ್ಕೂಟರ್‌ಗಳನ್ನು ಕರ್ನಾಟಕದ ಕೋಲಾರದ ನರಸಪುರದಲ್ಲಿರುವ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ.
ಹೋಂಡಾ ಕ್ಯೂಸಿ1 (Honda QC1) ವಿಶೇಷತೆಗಳೇನು: ಈ ಎಲೆಕ್ಟ್ರಿಕ್ ಸ್ಕೂಟರ್ ರೂ.90,000 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿ.ಮೀ ರೇಂಜ್ (ಮೈಲೇಜ್) ನೀಡಬಲ್ಲದು. ಜೊತೆಗೆ 50 ಕೆಎಂ/ಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ಈ ಸ್ಕೂಟರ್ ಆಕರ್ಷಕವಾದ ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀ ಮತ್ತು ಯುಎಸ್‌ಬಿ-ಸಿ ಚಾರ್ಜಿಂಗ್ ಪಾಯಿಂಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇದರಲ್ಲಿರುವ ಬ್ಯಾಟರಿಯು ಕೇವಲ 4 ಗಂಟೆ 30 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ದಿನಸಿ ಸೇರಿದಂತೆ ಹೆಚ್ಚಿನ ಲಗೇಜ್ ಸಾಗಿಸಲು 26 ಲೀಟರ್ ಸಾಮರ್ಥ್ಯದ ಸ್ಟೋರೇಜ್ ಸ್ಪೇಸ್‌ನ್ನು ಹೊಂದಿದೆ.
ಹೋಂಡಾ ಆಕ್ಟಿವಾ ಇ (Honda Activa e) ಹೇಗಿದೆ: ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮತ್ತು ರೋಡ್‌ಸಿಂಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ಕ್ರಮಿಸಬಲ್ಲದು.
ನೂತನ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇಕಾನ್, ಸ್ಟ್ಯಾಂಡರ್ಡ್ ಹಾಗೂ ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಬಹುಮುಖ್ಯವಾಗಿ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್-ಲ್ಯಾಂಪ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications