Honda: ಅತಿ ಕಡಿಮೆ ಬೆಲೆಗೆ ಹೋಂಡಾ ಕ್ಯೂಸಿ1 & ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ.. ವಿಶೇಷತೆಗಳೇನು?

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ಆಕ್ಟಿವಾ ಸ್ಕೂಟರ್ ಮಾರಾಟದಿಂದಲೇ ದೇಶೀಯ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ಕಂಪನಿಯು ಹೊಚ್ಚ ಹೊಸ ಕ್ಯೂಸಿ1 ಮತ್ತು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದೆ. ಕಳೆದ ನವೆಂಬರ್‌ನಲ್ಲಿಯೇ ಈ ಸ್ಕೂಟರ್‌ಗಳನ್ನು ಅನಾವರಣಗೊಳಿಸಲಾಗಿತ್ತು. ತಿಂಗಳಾರಂಭದಲ್ಲಿ ಬುಕ್ಕಿಂಗ್‌ನ್ನು ಕೂಡ ಶುರು ಮಾಡಿದೆ.

ಹೋಂಡಾ ಕ್ಯೂಸಿ1 (Honda QC1): ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದನ್ನು ರೂ.90,000 (ಎಕ್ಸ್ ಶೋರೂಂ) ಬೆಲೆಯಲ್ಲಿ ಪರಿಚಯಿಸಲಾಗಿದೆ. ನೂತನ ಇ-ಸ್ಕೂಟರ್ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 80 ಕಿಲೋಮೀಟರ್ ಓಡುತ್ತದೆ.

Honda QC1 And Activa E Launched At Auto Expo 2025 Rs 90 000 Starting Price Details

ಹೊಸ ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 1.8 ಕೆಡಬ್ಲ್ಯೂ ಪೀಕ್ ಪವರ್ ಹಾಗೂ 77 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್ ಶೇಕಡ 0 ರಿಂದ 80% ಚಾರ್ಜ್ ಆಗುವುದಕ್ಕೆ 4.30 ಗಂಟೆ ತೆಗೆದುಕೊಳ್ಳುತ್ತದೆ.

ನೂತನ ಇ-ಸ್ಕೂಟರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಎಲ್‌ಸಿಡಿ ಡಿಸ್‌ಪ್ಲೇ, ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಸಾಕೆಟ್ ಅನ್ನು ಪಡೆದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು 26-ಲೀಟರ್‌ನ ಅಂಡರ್-ಸೀಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇಕೋ ಹಾಗೂ ಸ್ಟ್ಯಾಂಡರ್ಡ್ ಎಂಬ ರೈಡಿಂಗ್ ಮೋಡ್‌ನ್ನು ತನ್ನದಾಗಿಸಿಕೊಂಡಿದೆ.

Honda QC1 And Activa E Launched At Auto Expo 2025 Rs 90 000 Starting Price Details

ಹೋಂಡಾ ಆಕ್ಟಿವಾ ಇ (Honda Activa e): ಈ ಎಲೆಕ್ಟ್ರಿಕ್ ಸ್ಕೂಟರ್ ಸ್ವಲ್ಪ ಅಧಿಕ ಬೆಲೆಗೆ ಮಾರಾಟಕ್ಕೆ ಬಂದಿದೆ. ಇದು ರೂ.1.17 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿಲೋಮಿಟರ್ ಕ್ರಮಿಸುತ್ತದೆ.

ಹೊಸ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್, 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇಕಾನ್, ಸ್ಟ್ಯಾಂಡರ್ಡ್ & ಸ್ಪೋರ್ಟ್ ಎಂಬ 3 ಆಕರ್ಷಕ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ. ಜೊತೆಗೆ ಪರ್ಲ್ ಸೆರಿನಿಟಿ ಬ್ಲೂ, ಪರ್ಲ್ ಮಿಸ್ಟಿ ವೈಟ್, ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಹಾಗೂ ಪರ್ಲ್ ಶಾಲೋ ಬ್ಲೂ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್, ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಹೆಚ್-ಸ್ಮಾರ್ಟ್ ಕೀ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ನೂತನ ಇ-ಸ್ಕೂಟರ್ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳು ಮತ್ತು ಟೈಲ್‌ಲ್ಯಾಂಪ್‌ನ್ನು ಪಡೆದಿದೆ.

ಇನ್ನು, ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಸ ಕ್ಯೂಸಿ1 ಮತ್ತು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆಯಾಗಿರುವುದು ಗ್ರಾಹಕರಿಗೆ ಖುಷಿ ನೀಡಿದೆ. ಇವುಗಳ ವಿತರಣೆಯೂ ಅತಿ ಶೀಘ್ರದಲ್ಲಿಯೇ ಆರಂಭವಾಗುವ ನಿರೀಕ್ಷೆಯಿದೆ. ಈ ಸ್ಕೂಟರ್‌ಗಳು ದೇಶೀಯ ಗ್ರಾಹಕರ ಕೈ ಸೇರಿದ ಮೇಲೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, January 17, 2025, 15:05 [IST]
English summary
Honda qc1 and activa e launched at auto expo 2025 rs 90000 starting price details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+