ಬಡವರ ಬಂಡಿ.. ಅಗ್ಗದ 'Honda QC1' ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಹೋಂಡಾ ಕ್ಯೂಸಿ1 (Honda QC1) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದು ತುಂಬಾ ಸರಳವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ನೀವು ಹೊಚ್ಚ ಹೊಸ 'ಕ್ಯೂಸಿ' ಇ-ಸ್ಕೂಟರ್‌ನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ನಾವಿಲ್ಲಿ ಈ ನೂತನ ಸ್ಕೂಟರ್‌ನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೂತನ 'ಹೋಂಡಾ ಕ್ಯೂಸಿ1' ಎಲೆಕ್ಟ್ರಿಕ್ ಸ್ಕೂಟರ್, ಒಂದೇ ರೂಪಾಂತರದ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.1.06 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಈ ಸ್ಕೂಟರ್‌ನ್ನು ರೂ.30 ಸಾವಿರ ಡೌನ್ ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.76 ಸಾವಿರವರೆಗೆ ಸಾಲ ಉಳಿಯುತ್ತದೆ. ಅದಕ್ಕೆ ಶೇಕಡ 9% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.2,400 ವರೆಗೆ ಇಎಂಐ ಕಟ್ಟಬೇಕು.

ಹೋಂಡಾ ಕ್ಯೂಸಿ1 ವಿಶೇಷತೆಗಳೇನು..
ಇದು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿಲೋಮೀಟರ್ ಕ್ರಮಿಸುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಹಾಗೆಯೇ ಇದರಲ್ಲಿರುವ ಬ್ಯಾಟರಿಯು 4 ಗಂಟೆ 30 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ.

ನೂತನ ಸ್ಕೂಟರ್ ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀ ಮತ್ತು ಸಿಂಗಲ್ ಪೀಸ್ ಗ್ರಾಬ್ ಹ್ಯಾಂಡಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 89.5 ಕೆಜಿ ತೂಕವಿದೆ. ಜೊತೆಗೆ ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಅಲಾಯ್ ವೀಲ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೋಂಡಾ ಆಕ್ಟಿವಾ ಇ ಕೂಡ ಖರೀದಿಗೆ ಲಭ್ಯ..
ಇದು ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ 2 ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಓಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಹೋಂಡಾ ಕ್ಯೂಸಿ1 ಮಾರಾಟ ಹೇಗಿದೆ..
ಈ ಎಲೆಕ್ಟ್ರಿಕ್ ಸ್ಕೂಟರ್ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಕಳೆದ ಏಪ್ರಿಲ್ ತಿಂಗಳು (ಏಪ್ರಿಲ್-2025) ಬರೋಬ್ಬರಿ 808 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದು ಹೆಚ್ಚು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಮುಂಬರುವ ಹಬ್ಬದ ಋತುವಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುವ ನಿರೀಕ್ಷೆಯಿದ್ದು, ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications