ಬಡವನು ಕೊಳ್ಳಬಹುದು, ಆದರೂ 'Honda QC1' ಬದಲಿಗೆ ಈ 3 ಪೆಟ್ರೋಲ್ ಸ್ಕೂಟರ್‌ಗಳನ್ನು ತೆಗೆದುಕೊಳ್ಳಬಹುದು!

ಹೋಂಡಾ ಕ್ಯೂಸಿ1 (Honda QC1) ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದು ರೂ.90,000 (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿ.ಮೀ ಕ್ರಮಿಸುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ನೀವು ಇದೇ ಹೋಂಡಾ ಕ್ಯೂಸಿ1 ಬೆಲೆಗೆ ಪರ್ಯಾಯವಾಗಿ ಈ ಮೂರು ಪೆಟ್ರೋಲ್ ಚಾಲಿತ ಸ್ಕೂಟರ್‌ಗಳನ್ನು ಬೇಕಾದರೂ ಕೊಂಡುಕೊಳ್ಳಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಮೊದಲಿಗೆ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಕುರಿತಂತೆ ಮಾತನಾಡೋಣ. ಇದನ್ನು ಸಾಮಾನ್ಯ ಹಾಗೂ ನಗರ ಪದೇಶದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ಅದಕ್ಕೆ ತಕ್ಕಂತೆ ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ಸಿಗುತ್ತದೆ. ರೂ.80,391 ರಿಂದ ರೂ.92,691 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

Honda QC1 Electric Scooter Other Fuel-Powered Options Jupiter Xoom Pleasure Plus

ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್, ಸ್ವಲ್ಪ ಮಟ್ಟಿಗೆ ಶಕ್ತಿಯುತವಾದ 113.3 ಸಿಸಿ ಒಬಿಡಿ-2ಬಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸ್ಟಾರ್‌ಲೈಟ್ ಬ್ಲೂ ಗ್ಲಾಸ್, ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್ & ಮೀಟಿಯರ್ ರೆಡ್ ಗ್ಲಾಸ್ ಸೇರಿದಂತೆ ಹಲವು ಬಣ್ಣಗಳೊಂದಿಗೆ ಸಿಗುತ್ತದೆ. ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಹೀರೋ ಜೂಮ್ 110 (Hero Xoom 110) ಬಗ್ಗೆ ಹೇಳುವುದಾದರೆ, ಇದು ಕೂಡ ಜನಪ್ರಿಯ ಸ್ಕೂಟರ್ ಆಗಿದೆ. ಬೆಲೆಯೂ ಕೂಡ ಗ್ರಾಹಕರ ಕೈಗೆಟುಕುವಂತಿದ್ದು, ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್‌ಗಿಂತ ಕಡಿಮೆ ದರವನ್ನು ಹೊಂದಿದೆ. ಈ ಜೂಮ್ 110 ಸ್ಕೂಟರ್ ರೂ.76,561 ರಿಂದ 88,450 (ಎಕ್ಸ್-ಶೋರೂಂ) ಬೆಲೆಯಲ್ಲಿ ಲಭ್ಯವಿದೆ.

Honda QC1 Electric Scooter Other Fuel-Powered Options Jupiter Xoom Pleasure Plus

ಹೊಸ ಹೀರೋ ಜೂಮ್ 110 ಸ್ಕೂಟರ್ ದರಕ್ಕೆ ಅನುಗುಣವಾಗಿ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದು 110.9 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 53.4 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಕಡೆಯದಾಗಿ ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಸ್ಕೂಟರ್ ಕುರಿತಂತೆ ತಿಳಿಸುವುದಾದರೆ, ಇದನ್ನು ಬಡವರ ಬಂಡಿ ಎಂದು ಕರೆದರೂ ತಪ್ಪಾಗುವವುದಿಲ್ಲ. ಅಷ್ಟೊಂದು ಕಡಿಮೆ ಬೆಲೆಗೆ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.72,713 ರಿಂದ 84,843 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Honda QC1 Electric Scooter Other Fuel-Powered Options Jupiter Xoom Pleasure Plus

ಈ ಹೀರೋ ಪ್ಲೆಷರ್ ಪ್ಲಸ್ ಸ್ಕೂಟರ್ ಹೆಚ್ಚು ಅತ್ಯಾಧುನಿಕವಾಗಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಹಾಗೂ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Honda QC1 Electric Scooter Other Fuel-Powered Options Jupiter Xoom Pleasure Plus

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, April 23, 2025, 8:23 [IST]
English summary
Honda qc1 electric scooter other fuel powered options jupiter xoom pleasure plus
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+