ಸ್ಪ್ಲೆಂಡರ್‌ಗೆ ಎದುರಾಳಿಯಾಗಿ ಹೊಸ ಹೋಂಡಾ ಶೈನ್ 100 ಡಿಎಕ್ಸ್ ಬೈಕ್ ಪರಿಚಯ.. ಅತಿ ಕಡಿಮೆ ಬೆಲೆ, 65+ Km ಮೈಲೇಜ್?
ಹೋಂಡಾ ಶೈನ್ (Honda Shine) ಜನಮೆಚ್ಚಿದ ಬೈಕ್ ಎಂದೇ ಹೆಸರುವಾಸಿಯಾಗಿದೆ. ಈ ಪರಂಪರೆಯನ್ನು ಮುಂದುವರಿಸಲು ಕಂಪನಿಯು ಮುಂದಾಗಿದೆ. ನವದೆಹಲಿಯಲ್ಲಿಂದು ನಡೆದ ಅದ್ದೂರಿ ಸಮಾರಂಭದಲ್ಲಿ ಹೊಚ್ಚ ಹೊಸ 'ಶೈನ್ 100 ಡಿಎಕ್ಸ್' ಬೈಕ್‌ನ್ನು ಪರಿಚಯಿಸಿದೆ. ಇದನ್ನು ನವ ಯುಗದ ಗ್ರಾಹಕರನ್ನು ಆಕರ್ಷಿಸಲೆಂದೇ ಸಿದ್ದಪಡಿಸಲಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೂತನ ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX) ಮೋಟಾರ್‌ಸೈಕಲ್, ಅದ್ಭುತವಾದ ವಿನ್ಯಾಸವನ್ನು ಹೊಂದಿದೆ. ನವೀನವಾಗಿರುವ ಹೆಡ್‌ಲ್ಯಾಂಪ್ ಹಾಗೂ ಐಕಾನಿಕ್ ಹೋಂಡಾ ಬ್ರ್ಯಾಂಡಿಂಗ್ ಹೊಂದಿರುವ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಬಾಡಿ ಪ್ಯಾನೆಲ್‌ಗಳಲ್ಲಿ ಉತ್ತಮವಾಗಿರುವ ಗ್ರಾಫಿಕ್ಸ್ ಇದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಜೆನಿ ಗ್ರೇ ಮೆಟಾಲಿಕ್ ಎಂಬ 4 ಬಣ್ಣಗಳನ್ನು ಒಳಗೊಂಡಿದೆ.

ಈ ಬೈಕ್ ಒಬಿಡಿ2ಬಿ (OBD2B) ಮಾನದಂಡಗಳ ಅನ್ವಯ ಮೇಲ್ದರ್ಜೆಗೇರಿಸಿದ 98.98 ಸಿಸಿ ಸಿಂಗಲ್-ಸಿಲಿಂಡರ್, ಫ್ಯುಯೆಲ್-ಇಂಜೆಕ್ಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 7.28 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,000 ಆರ್‌ಪಿಎಂನಲ್ಲಿ 8.04 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 65 ಕಿ.ಮೀ ಅಧಿಕ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.
ಹೊಸ ಶೈನ್ 100 ಡಿಎಕ್ಸ್ ಮೋಟಾರ್‌ಸೈಕಲ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ವಿಶೇಷವಾಗಿ ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಹೊಂದಿದೆ. ಇದು ರಿಯಲ್ ಟೈಮ್ ಮೈಲೇಜ್ & ಸರ್ವಿಸ್ ಡ್ಯೂ ಇಂಡಿಕೇಟರ್ ಒಳಗೊಂಡಂತೆ ವಿವಿಧ ಮಾಹಿತಿಯನ್ನು ಪ್ರದಶಿಸುತ್ತದೆ. ಜೊತೆಗೆ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್ ವೈಶಿಷ್ಟ್ಯವನ್ನು ಒಳಗೊಂಡಿದೆ.

ಇದು ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಪೋರ್ಕ್ಸ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸುರಕ್ಷತೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. 17-ಇಂಚಿರುವ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಗ್ರೌಂಡ್ ಕ್ಲಿಯರೆನ್ಸ್ 168 ಎಂಎಂ ಇದೆ.
ಪ್ರಸ್ತುತ ನೂತನ 'ಹೋಂಡಾ ಶೈನ್ 100 ಡಿಎಕ್ಸ್' ಮೋಟಾರ್‌ಸೈಕಲ್ ಬೆಲೆಯನ್ನು ಘೋಷಣೆ ಮಾಡಲಾಗಿಲ್ಲ. ಕೊಂಚ ಮಟ್ಟಿಗೆ ಪ್ರೀಮಿಯಂ ಬೈಕ್ ಆಗಿದ್ದರೂ ರೂ.75,000 ದಿಂದ ರೂ.80,000 (ಎಕ್ಸ್-ಶೋರೂಂ) ಆಸುಪಾಸಿನಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಆಗಸ್ಟ್ 1ರಿಂದ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಆ ಬಳಿಕ ಹಂತ ಹಂತವಾಗಿ ವಿತರಣೆಯು ಶುರುವಾಗುವ ನಿರೀಕ್ಷೆಯಿದ್ದು, ಈ ಬೈಕ್‌ಗೆ ಹೀರೋ ಸ್ಪ್ಲೆಂಡರ್‌ಗೆ ನೇರವಾದ ಪ್ರತಿಸ್ಪರ್ಧಿಯಾಗಲಿದೆ.

ಸದ್ಯ ಖರೀದಿಗೆ ದೊರೆಯುವ ಹೋಂಡಾ ಶೈನ್ 100 ವಿಶೇಷತೆಗಳೇನು:
ಈ ಬೈಕ್ ರೂ.68,862 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7.28 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.04 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 55 ಕಿ.ಮೀಗೂ ಅಧಿಕ ಮೈಲೇಜ್ ನೀಡುತ್ತದೆ.
ಇದು ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಆರೆಂಜ್, ಬ್ಲ್ಯಾಕ್ ವಿತ್ ಗ್ರೇ ಹಾಗೂ ಬ್ಲ್ಯಾಕ್ ವಿತ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಸೆನ್ಸರ್ ಹಾಗೂ ಸಿಂಗಲ್-ಪೀಸ್ ಸೀಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications