ಬಡವರ ಬಂಡಿಯಿದು.. ತುಂಬಾ ಸ್ಟೈಲಿಶ್, ಬರೀ 80,542 ರೂಪಾಯಿಗೆ ಸಿಗುತ್ತೆ.. 630 ಕಿ.ಮೀ ಮೈಲೇಜ್!
ಹೋಂಡಾ ಶೈನ್ 125 (Honda Shine 125) ಜನಪ್ರಿಯ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. 2006ರ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ಮಧ್ಯಮ ವರ್ಗದ ಜನರ ನೆಚ್ಚಿನ ಬೈಕ್ ಆಗಿದೆ. ನೀವು ಹೊಸದೊಂದು ಮೋಟಾರ್‌ಸೈಕಲ್‌ನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಶೈನ್ 125' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಬೈಕ್‌ನ ಬೆಲೆ ಎಷ್ಟಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರತಿಯೊಂದು ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.80,542 ಹಾಗೂ ಗರಿಷ್ಠ ರೂ.84,902 (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಡ್ರಮ್ (Drum) ಮತ್ತು ಡಿಸ್ಕ್ (Disc) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ.

ವಿನ್ಯಾಸ & ಬಣ್ಣಗಳು (Design & Colours):
ಈ ಬೈಕ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಹ್ಯಾಲೊಜೆನ್ ಬಲ್ಬ್ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಹಾಗೂ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ರೆಬೆಲ್ ರೆಡ್ ಮೆಟಾಲಿಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಜೀನಿ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimension):
ನೂತನ 'ಹೋಂಡಾ ಶೈನ್ 125' ಮೋಟಾರ್‌ಸೈಕಲ್ ಹೆಚ್ಚು ವಿಶಾಲವಾಗಿದೆ. 2,046 ಮಿ.ಮೀ ಉದ್ದ, 737 ಮಿ.ಮೀ ಅಗಲ ಮತ್ತು 1,116 ಮಿ.ಮೀ ಎತ್ತರವಿದೆ. ಜೊತೆಗೆ 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 113 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಇದು ಬೆಲೆಗೆ ತಕ್ಕಂತೆ ಬಲಿಷ್ಠವಾಗಿರುವ ಪವರ್‌ಟ್ರೇನ್‌ನ್ನು ಹೊಂದಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 10.63 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 11 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಮೈಲೇಜ್ (Mileage):
ಈ ಬೈಕ್ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. ಒಮ್ಮೆ ಪೂರ್ತಿಯಾಗಿ ಟ್ಯಾಂಕ್‍ನ್ನು ತುಂಬಿಸಿದರೆ, 525 ರಿಂದ 630 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

ವೈಶಿಷ್ಟ್ಯಗಳು (Features):
ನೂತನ 'ಹೋಂಡಾ ಶೈನ್ 125' ಮೋಟಾರ್‌ಸೈಕಲ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್, ಸೈಲೆಂಟ್ ಸ್ಟಾರ್ಟ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ. ಸೀಟ್ ಎತ್ತರವು 791 ಮಿ.ಮೀ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ರೇರ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಇದರೊಂದಿಗೆ ಸಿಬಿಸ್ (ಕಾಂಬಿ - ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








