ಬಡವರ ಐರಾವತ.. ಭಾರೀ ಸಂಖ್ಯೆಯಲ್ಲಿ 'Honda Shine' ಬೈಕ್ ಮಾರಾಟ, ಸ್ಪ್ಲೆಂಡರ್‌ನ್ನು ಹಿಂದಿಕ್ಕಿ ನಂ.1 ಆಗುತ್ತಾ?

ಹೋಂಡಾ ಶೈನ್ (Honda Shine) ಪ್ರಮುಖ ಬೈಕ್ ಆಗಿದೆ. ಇದು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅತ್ಯಂತ ಅಗ್ಗದ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಹೀಗಾಗಿ ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಮುಗಿಬಿದ್ದು ಕೊಂಡುಕುಳ್ಳುತ್ತಿದ್ದಾರೆ. ಈ ಏಪ್ರಿಲ್ ತಿಂಗಳು ವಿವಿಧ ಕಂಪನಿಗಳಿಗೆ ಸೇರಿದ ಬಹುತೇಕ ಎಲ್ಲ ಮೋಟಾರ್‌ಸೈಕಲ್‌ಗಳ ಮಾರಾಟ ಸಂಖ್ಯೆ ತೀವ್ರತರದಲ್ಲಿ ಕುಸಿತ ಕಂಡಿದೆ. ಅದರ ಹೊರತಾಗಿ 'ಶೈನ್' ಬೈಕ್‌ಗಳು ಹೇರಳವಾಗಿ ಬಿಕರಿಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಏಪ್ರಿಲ್‌ - 2025) ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ, ಸರಿ ಸುಮಾರು 1,68,908 ಯುನಿಟ್ 'ಶೈನ್' ಮೋಟಾರ್‌ಸೈಕಲ್‌ಗಳನ್ನು ಮಾರಾಟ ಮಾಡಿದೆ. 2024ರ ಏಪ್ರಿಲ್‌ನಲ್ಲಿ 1,42,751 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 18.32% ಹೆಚ್ಚಳಗೊಂಡಿದೆ.

Honda Shine Bike April 2025 Sales Details

ಆದರೆ, ಹೀರೋ ಸ್ಪ್ಲೆಂಡರ್ (Hero Splendor) ಬೈಕ್ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಈ ಏಪ್ರಿಲ್‌ನಲ್ಲಿ 1,97,893 ಯುನಿಟ್ 'ಸ್ಪ್ಲೆಂಡರ್' ಮೋಟಾರ್‌ಸೈಕಲ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ತಿಂಗಳಲ್ಲಿ 3,20,959 ಯುನಿಟ್‌ಗಳನ್ನು ಮಾರಾಟವಾಗಿದ್ದವು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ಶೇಕಡ 38.3% ಇಳಿಕೆಯಾಗಿದೆ.

ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ 'ಹೋಂಡಾ ಶೈನ್' ಮೋಟಾರ್‌ಸೈಕಲ್‌ ಮಾರಾಟ ಸಂಖ್ಯೆ ಹೆಚ್ಚು-ಕಮ್ಮಿ 'ಹೀರೋ ಸ್ಪ್ಲೆಂಡರ್‌' ಸಮೀಪದಲ್ಲೇ ಇದೆ. ಒಂದೊಮ್ಮೆ ಹೀಗೆಯೇ ಸ್ಪ್ಲೆಂಡರ್‌ ಮಾರಾಟ ಮುಂದುವರಿದು, ಶೈನ್ ಮತ್ತಷ್ಟು ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡರೆ, ಅತಿ ಶೀಘ್ರದಲ್ಲೇ 'ಬೈಕ್' ವಿಭಾಗದಲ್ಲಿ ಮೊದಲ ಸ್ಥಾನಕ್ಕೂ ಬಂದರೂ ಯಾವುದೇ ಅಚ್ಚರಿ ಪಡಬೇಕಾಗಿಲ್ಲ.

Honda Shine Bike April 2025 Sales Details

ಹೋಂಡಾ ಶೈನ್ ಬೈಕ್ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಬೈಕ್ ಅತ್ಯುತ್ತಮವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಜೊತೆಗೆ ಹೆಚ್ಚಿನ ಮೈಲೇಜ್ ನೀಡುತ್ತಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ನೂತನ ಹೋಂಡಾ ಶೈನ್ ಮೋಟಾರ್‌ಸೈಕಲ್ ಎರಡು ವಿಧದಲ್ಲಿ ಖರೀದಿ ಲಭ್ಯ..

ಹೋಂಡಾ ಶೈನ್ 125 (Honda Shine 125): ಇದು ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.86,000 ರಿಂದ ರೂ.91,000 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೋಂಡಾ ಶೈನ್ 100 (Honda Shine 100): ಈ ಬೈಕ್ ನಿಜವಾಗಿಯೂ ಬಡವರ ಬಂಡಿ ಆಗಿದೆ. ಇದು ರೂ.70,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 28, 2025, 15:37 [IST]
English summary
Honda shine bike april 2025 sales details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+