ಬಡವರ ಬಂಡಿ: 65 Km ಮೈಲೇಜ್.. 68,000 ಆರಂಭಿಕ ಬೆಲೆ, Honda Shine ಬೈಕ್‌ಗೆ ಮನಸೋತ ಗ್ರಾಹಕರು!
ಹೋಂಡಾ ಶೈನ್ (Honda Shine) ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ & ವಿಶ್ವಾಸಾರ್ಹತೆಗೂ ಹೆಸರುವಾಸಿಯಾಗಿದೆ. ಮಧ್ಯಮ ವರ್ಗದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಮೇ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಪ್ರಮುಖ 10 ಮೋಟಾರ್‌ಸೈಕಲ್‌ಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲಿ 'ಹೋಂಡಾ ಶೈನ್' ಎರಡನೇ ಸ್ಥಾನದಲ್ಲಿದ್ದು, ಕಂಪನಿಯು ನಿರೀಕ್ಷೆ ಮಾಡಿದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಹಾಗೆಯೇ ಈ ಪಟ್ಟಿಯಲ್ಲಿ ಹೀರೋ ಸ್ಪ್ಲೆಂಡರ್ ಮೊದಲ ಸ್ಥಾನದಲ್ಲಿದ್ದರೆ, ಬಜಾಜ್ ಪಲ್ಸರ್ ಮೂರನೇ ಸ್ಥಾನದಲ್ಲಿದೆ.
ಕಳೆದ ತಿಂಗಳು (ಮೇ - 2025) ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ, ಬರೋಬ್ಬರಿ 158,271 ಯುನಿಟ್ 'ಶೈನ್' ಬೈಕ್‌ಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 1,49,054 ಯುನಿಟ್‌ಗಳಿಗೆ ಹೋಲಿಸಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 6.18% ಪ್ರಗತಿಯಾಗಿದೆ.

ಸದ್ಯ, ದೇಶೀಯವಾಗಿ ಹೋಂಡಾ ಶೈನ್ ಬೈಕ್ ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 'ಶೈನ್ 100' ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ಆಗಿದ್ದು, ಅತಿ ಕಡಿಮೆ ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ 'ಶೈನ್ 125' ಗರಿಷ್ಠ ಶ್ರೇಣಿ ಮಾದರಿ (ಟಾಪ್ ಎಂಡ್ ಲೆವೆಲ್ ಮಾಡೆಲ್) ಎಂದೇ ಖ್ಯಾತಿ ಗಳಿಸಿದ್ದು, ಕೊಂಚ ಮಟ್ಟಿಗೆ ದುಬಾರಿ ದರವನ್ನು ಪಡೆದಿದೆ.
ಹೋಂಡಾ ಶೈನ್ 100 (Honda Shine 100):
ಈ ಮೋಟಾರ್‌ಸೈಕಲ್ ರೂ.68,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದು ತುಂಬಾ ಸರಳವಾದ ವಿನ್ಯಾಸವನ್ನು ಪಡೆದಿದೆ. ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಆರೆಂಜ್, ಬ್ಲ್ಯಾಕ್ ವಿತ್ ಗ್ರೇ ಹಾಗೂ ಬ್ಲ್ಯಾಕ್ ವಿತ್ ಗ್ರೀನ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಶೈನ್ 100 ಬೈಕ್ 98.98 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಮೋಟಾರ್‌ಸೈಕಲ್ ಸರಿ ಸುಮಾರು 99 ಕೆಜಿ ತೂಕವಿದ್ದು, 9 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಇದು ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಸೆನ್ಸರ್ ಮತ್ತು ಸಿಂಗಲ್-ಪೀಸ್ ಸೀಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಟ್‌ನ್ನು ಹೊಂದಿದೆ. ಇದರೊಂದಿಗೆ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 125 (Honda Shine 125):
ಈ ಬೈಕ್ ರೂ.84,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್ ಬ್ರೇಕ್ ಮತ್ತು ಡಿಸ್ಕ್ ಬ್ರೇಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಡಿಸೆಂಟ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಹೊಸ ಶೈನ್ 125 ಮೋಟಾರ್‌ಸೈಕಲ್ 123.94 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications