ಬಡವರ ಬಂಡಿಯಿದು.. ಬಿಸಿ ಜಿಲೇಜಿಯಂತೆ ಸೇಲ್ಸ್! ಈ ಜನಪ್ರಿಯ ಬೈಕ್‌ಗೆ ಫುಲ್ ಡಿಮ್ಯಾಂಡ್.. ರೂ.65,000 ದಿಂದ ಶುರು
ಹೋಂಡಾ ಶೈನ್ 100 (Honda Shine) ನಂಬಿಕಾರ್ಹ ಮೋಟಾರ್‌ಸೈಕಲ್ ಆಗಿದ್ದು, ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಅದು ಈ ನವೆಂಬರ್ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 1,86,490 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1,45,530 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 28.15% ಪ್ರಗತಿಯಾಗಿದೆ.
ಇದೇ ನವೆಂಬರ್‌ನಲ್ಲಿ 'ಹೋಂಡಾ ಶೈನ್' ಮಾರಾಟವು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, ಈ ಮೋಟಾರ್‌ಸೈಕಲ್‌ನ ಬೆಲೆಯೂ ಇಳಿಕೆಯಾಗಿದೆ. ಜೊತೆಗೆ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಹೀಗಾಗಿ, ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ನೂತನ 'ಹೋಂಡಾ ಶೈನ್' ಬೈಕ್ ಹಲವು ರೂಪದಲ್ಲಿ ಗ್ರಾಹಕರ ಖರೀದಿ ದೊರೆಯುತ್ತದೆ. ಅವುಗಳೆಂದರೆ, ಶೈನ್ 100, ಶೈನ್ 100 ಡಿಎಕ್ಸ್ ಮತ್ತು ಶೈನ್ 125 ಎಂದು. ಇವುಗಳು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿವೆ. ನಾನಾ ಬಗೆಯ ವೈಶಿಷ್ಟ್ಯಗಳು ಪಡೆದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ.
ಹೋಂಡಾ ಶೈನ್ 100 (Honda Shine 100):
ಈ ಮೋಟಾರ್‌ಸೈಕಲ್ ರೂ.65,000 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಆರೆಂಜ್ ವಿತ್ ಬ್ಲ್ಯಾಕ್, ಬ್ಲ್ಯೂ ವಿತ್ ಬ್ಲ್ಯಾಕ್ & ರೆಡ್ ವಿತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,245 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ಇದು ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಾಂಬಿ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ಹೊಸ 'ಶೈನ್ 100' ಮೋಟಾರ್‌ಸೈಕಲ್, ರೂ.70,500 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್ ಹಾಗೂ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,245 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಬೈಕ್ ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಹಾಗೂ ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) & ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 125 (Honda Shine 125):
ಇದೊಂದು ಶಕ್ತಿಶಾಲಿಯಾದ ಮೋಟಾರ್‌ಸೈಕಲ್ ಆಗಿದೆ. ರೂ.80,500 ರಿಂದ ರೂ.85,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ರೆಬೆಲ್ ರೆಡ್ ಮೆಟಾಲಿಕ್, ಡೀಸೆಂಟ್ ಬ್ಲೂ ಮೆಟಾಲಿಕ್ & ಪರ್ಲ್ ಸೈರನ್ ಬ್ಲೂ ಬಣ್ಣಗಳೊಂದಿಗೂ ಲಭ್ಯವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 23.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ 'ಶೈನ್ 125' ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. 102 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸಿಬಿಎಸ್ (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications