ಹೀರೋ ಸ್ಪ್ಲೆಂಡರ್‌ಗೆ ಇದೇ ದುಷ್ಮನ್.. ರೂ.68,000.. ಈ ಬಡವರ ಬಂಡಿಗೆ ಅಂದ್ರೆ ಎಲ್ಲರಿಗೂ ಇಷ್ಟ, ಭಾರೀ ಮಾರಾಟ!
ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India) ಹೊರಹೊಮ್ಮಿದೆ. ದೇಶದ ಪ್ರತಿ ಹಳ್ಳಿಯ ರಸ್ತೆಯಲ್ಲಿಯೂ ಕಂಪನಿಯ ಬೈಕ್ ಹಾಗೂ ಸ್ಕೂಟರ್‌ಗಳನ್ನು ಕಾಣಬಹುದು. ಸದ್ಯ, 'ಹೋಂಡಾ ಶೈನ್' ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದ್ದು, ಈ ಜನವರಿಯಲ್ಲಿ ಹೀರೋ ಸ್ಪ್ಲೆಂಡರ್‌ಗೆ ತೀವ್ರ ಸ್ಪರ್ಧೆಯೊಡ್ಡುವ ರೀತಿಯಲ್ಲಿ ಮಾರಾಟಗೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಜನವರಿ - 2025) ಹೋಂಡಾ ಕಂಪನಿಯು ಬರೋಬ್ಬರಿ 1,68,290 ಯುನಿಟ್ ಶೈನ್ ಬೈಕ್‌ಗಳನ್ನು ಮಾರಾಟಗೊಳಿಸಲು ಯಶಸ್ವಿಯಾಗಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 1,45,252 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 15.86% ಬೆಳವಣಿಗೆಯನ್ನು ಸಾಧಿಸಲಾಗಿದೆ.

ಹೋಂಡಾ ಶೈನ್ ಮೋಟಾರ್‌ಸೈಕಲ್ ಎರಡು ವಿಧದಲ್ಲಿ ಖರೀದಿಗೆ ಲಭ್ಯ..
ಮೊದಲಿಗೆ ಹೋಂಡಾ ಶೈನ್ 100 (Honda Shine 100) ಬೈಕ್ ಬಗ್ಗೆ ಮಾತನಾಡೋಣ. ಇದು ರೂ.68,600 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸರಿ ಸುಮಾರು 68 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ಈ ಶೈನ್ 100 ಮೋಟಾರ್‌ಸೈಕಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 9 ಲೀ.ನ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) 130 ಎಂಎಂ ಮತ್ತು ಹಿಂಭಾಗ (ರೇರ್) 110 ಎಂಎಂ ಡ್ರಮ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಶೈನ್ 125 (Honda Shine 125) ಮೋಟಾರ್‌ಸೈಕಲ್ ಕುರಿತಂತೆ ಹೇಳುವುದಾದರೆ, ಇದು ರೂ.84,493 ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. 123.94 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 55 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ & ಡಿಸೆಂಟ್ ಬ್ಲೂ ಮೆಟಾಲಿಕ್ ಬಣ್ಣಗಳೊಂದಿಗೆ ಸಿಗುತ್ತದೆ.
ಹೊಸ ಶೈನ್ 125 ಬೈಕ್ ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಡ್ರಮ್ ಅಥವಾ ಡಿಸ್ಕ್ ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.

ಹೀರೋ ಸ್ಪ್ಲೆಂಡರ್ ಮಾರಾಟ ಹೇಗಿದೆ: ಹೀರೋ ಮೋಟೊಕಾರ್ಪ್ ಈ ಜನವರಿಯಲ್ಲಿ 2,59,431 ಯುನಿಟ್ ಸ್ಪ್ಲೆಂಡರ್ ಮೋಟಾರ್‌ಸೈಕಲ್‌ಗಳನ್ನು ಮಾರಾಟಗೊಳಿಸಿದೆ. 2024ರ ಜನವರಿಯಲ್ಲಿ ಮಾರಾಟ ಮಾಡಿದ 2,55,122 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 1.69% ಬೆಳವಣಿಗೆಯಾಗಿದೆ. ನೂತನ ಸ್ಪ್ಲೆಂಡರ್ ರೂ.76,356 (ಎಕ್ಸ್-ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications