65 ಕಿ.ಮೀ ಮೈಲೇಜ್.. ಬರೀ 63,000, ಈ ಜನಪ್ರಿಯ ಹೋಂಡಾ ಬೈಕ್‌ಗೆ ಮನಸೋತ ಗ್ರಾಹಕರು!
ಹೋಂಡಾ ಶೈನ್ (Honda Shine) ಜಗಮೆಚ್ಚಿದ ಬೈಕ್ ಆಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಗ್ರಾಹಕರು ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಶೈನ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,85,059 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 181,835 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 1.77% ಬೆಳವಣಿಗೆಯಾಗಿದೆ.
'ಹೋಂಡಾ ಶೈನ್' ಮೋಟಾರ್‌ಸೈಕಲ್ ಮಾರಾಟದಲ್ಲಿ ಈ ಪರಿಪ್ರಮಾಣದಲ್ಲಿ ಪ್ರಗತಿ ಸಾಧಿಸಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ, ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಪಟ್ಟಣಗಳಲ್ಲಿ ಕಚೇರಿಗೆ ಕೆಲಸಕ್ಕೆ ತೆರಳುವವರು ಬಳಕೆ ಮಾಡಬಹುದು. ಅದೇ ರೀತಿಯಲ್ಲಿ ಹಳ್ಳಿಗಳಲ್ಲಿ ರೈತರು ಉಪಯೋಗ ಮಾಡಬಹುದು. ಜೊತೆಗೆ ಎಲ್ಲ ವಯೋಮಾನದವರಿಗೂ ಇಷ್ಟವಾಗುವ ಹಿನ್ನೆಲೆ, 'ಶೈನ್' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎನ್ನಲಾಗಿದೆ.

ನೂತನ 'ಹೋಂಡಾ ಶೈನ್' ಬೈಕ್ ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಶೈನ್ 100, ಶೈನ್ 100 ಡಿಎಕ್ಸ್ ಹಾಗೂ ಶೈನ್ 125. ಇವುಗಳು ತುಂಬಾ ಅಚ್ಚುಕಟ್ಟಾದ ಸರಳವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿವೆ. ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಹಾಗೆಯೇ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತವೆ.
ಹೋಂಡಾ ಶೈನ್ 100 (Honda Shine 100):
ಇದು ರೂ.63,191 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಆರೆಂಜ್, ಬ್ಲ್ಯಾಕ್ ವಿತ್ ಗ್ರೇ & ಬ್ಲ್ಯಾಕ್ ವಿತ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಮೋಟಾರ್‌ಸೈಕಲ್ 98.98 ಸಿಸಿ ಪೆಟ್ರೋಲ್ ಎಂಜಿನ್ & 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 65 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್ನ್ನು ಪಡೆದಿದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಸೆನ್ಸರ್ & ಸಿಂಗಲ್-ಪೀಸ್ ಸೀಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ನೂತನ 'ಶೈನ್ 100 ಡಿಎಕ್ಸ್' ರೂ.69,694 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಜೆನಿ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಇದು 98.98 ಸಿಸಿ ಪೆಟ್ರೋಲ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 65 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 10 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್ ಆಫ್ ಮತ್ತು ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 125 (Honda Shine 125):
ಈ ಬೈಕ್ ರೂ. 82,898 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್, ಡಿಸೆಂಟ್ ಬ್ಲೂ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಶೈನ್ 125' ಮೋಟಾರ್‌ಸೈಕಲ್ 123.94 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 55 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 10.5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್ನ್ನು ಪಡೆದಿದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








