ಆಫೀಸ್‌ಗೆ ಹೋಗುವವರಿಗೆ ಬೆಸ್ಟ್.. ಬರೀ ರೂ.100 ಪೆಟ್ರೋಲ್‌ಗೆ 65 Km ಮೈಲೇಜ್, 87,000 ಲಭ್ಯ.. ತುಂಬಾನೇ ಸ್ಟೈಲಿಶ್!
ಹೋಂಡಾ ಎಸ್‌ಪಿ 125 (Honda SP 125) ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಆಫೀಸ್‌ಗೆ ಹೋಗುವವರಿಗೆ ನೆಚ್ಚಿನ ವಾಹನವಾಗಿದೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಎಸ್‌ಪಿ 125' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಬೈಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಈ ಮೋಟಾರ್‌ಸೈಕಲ್ ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.87,653 ಹಾಗೂ ಗರಿಷ್ಠ ರೂ.9,2571 (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಹೊಂದಿದೆ. ಸ್ಟ್ಯಾಂಡರ್ಡ್ (STD) ಹಾಗೂ ಡಿಎಲ್ಎಕ್ಸ್ (DLX) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಶಾರ್ಪ್ ಎಲ್ಇಡಿ ಹೆಡ್‌ಲ್ಯಾಂಪ್, ಸ್ಟೈಲಿಶ್ ಗ್ರಾಫಿಕ್ಸ್, ಇಂಡಿಕೇಟರ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಮ್ಯಾಟ್ ಮಾರ್ವೆಲ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimension):
ನೂತನ 'ಹೋಂಡಾ ಎಸ್‌ಪಿ 125' ಬೈಕ್ ಸಾಕಷ್ಟು ವಿಶಾಲವಾಗಿದೆ. 2,027 ಎಂಎಂ ಉದ್ದ, 785 ಎಂಎಂ ಹಾಗೂ 1,091 ಎಂಎಂ ಎತ್ತರವಿದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 117 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಈ ಮೋಟಾರ್‌ಸೈಕಲ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 123.94-ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 10.87 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 10.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮೈಲೇಜ್ (Mileage):
ಇದರ ನಿರ್ವಹಣಾ ವೆಚ್ಚವು ಕಮ್ಮಿಯಿದೆ. ಅತ್ಯುತ್ತಮವಾದ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 1 ಲೀಟರ್ ಪೆಟ್ರೋಲ್‌ಗೆ ಹಾಕಿಸಿದರೆ 60 ರಿಂದ 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 11.2 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಇದನ್ನು ಭರ್ತಿಯಾಗಿ ತುಂಬಿಸಿದರೆ, 693 ರಿಂದ 770 ಕಿಲೋಮೀಟರ್‌ವರೆಗೆ ಓಡಬಲ್ಲದು.

ವೈಶಿಷ್ಟ್ಯಗಳು (Features):
ಹೊಸ 'ಹೋಂಡಾ ಎಸ್‌ಪಿ 125' ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಹಾಗೂ ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 790 ಎಂಎಂ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ಈ ಬೈಕ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್ ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 18 ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.


Click it and Unblock the Notifications








