Honda: ಆಕ್ಟಿವಾ & ಶೈನ್ ಇದ್ರು ಹೋಂಡಾ ಟೂ-ವೀಲರ್‌ಗಳನ್ನು ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಕಾರಣವೇನು?

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India) ಜನಪ್ರಿಯ ದ್ವಿಚಕ್ರ ವಾಹನ (Two Wheeler) ಕಂಪನಿಯಾಗಿ ಗುರುತಿಸಿಕೊಂಡಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಶೈನ್, ಆಕ್ಟಿವಾ, ಡಿಯೋ ಸೇರಿದಂತೆ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಆದರೂ ಈ ಏಪ್ರಿಲ್ ತಿಂಗಳು ಕಂಪನಿಯ ದ್ವಿಚಕ್ರ ವಾಹನ ಮಾರಾಟ ಸಂಖ್ಯೆ ಒಂದಷ್ಟು ಮಟ್ಟಿಗೆ ಕುಸಿತವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಏಪ್ರಿಲ್-2025) ಹೋಂಡಾ ಕಂಪನಿಯು ಸರಿ ಸುಮಾರು 4,80,896 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 5,41,946 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗಳಿಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -11.26% ಇಳಿಕೆಯಾಗಿದೆ.

Honda Two Wheelers Sales April 2025 Details

ಅದೇ ರೀತಿಯಲ್ಲಿ ಒಟ್ಟಾರೆ ಮಾರಾಟದಲ್ಲಿ ಈ ಏಪ್ರಿಲ್‌ ತಿಂಗಳು ದೇಶೀಯವಾಗಿ 4,22,931 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ. 2024ರ ಏಪ್ರಿಲ್‌ ತಿಂಗಳಲ್ಲಿ 4,81,046 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಸಂಖ್ಯೆ ವರ್ಷದಿಂದ ವರ್ಷಕ್ಕೆ 12.08% ಕುಸಿತವಾಗಿದೆ.

ವಿದೇಶಗಳಿಗೆ ರಫ್ತು ಮಾಡುವ ವಾಹನಗಳ ಸಂಖ್ಯೆಯೂ ಇಳಿಮುಖವಾಗಿದೆ. ಹೋದ ತಿಂಗಳು (ಏಪ್ರಿಲ್-2025) ಹೋಂಡಾ ಕಂಪನಿಗಳು 57,965 ದ್ವಿಚಕ್ರ ವಾಹನಗಳನ್ನು ಹಲವು ದೇಶಗಳಿಗೆ ರವಾನಿಸಿತ್ತು. 2024ರ ಇದೇ ಅವಧಿಯಲ್ಲಿ 60,900 ಯುನಿಟ್‌ಗಳನ್ನು ರಫ್ತು ಮಾಡಿತ್ತು. ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ 4.82% ಕುಂಠಿತವಾಗಿದೆ.

Honda Two Wheelers Sales April 2025 Details

ಹೋಂಡಾ ಕಂಪನಿ ಮಾರಾಟ ಸಂಖ್ಯೆ ಕುಸಿತವಾಗಲು ನಾನಾ ಕಾರಣಗಳಿವೆ. ದೇಶೀಯವಾಗಿ ಕಂಪನಿಯು ಮಾರಾಟಗೊಳಿಸುವ ದ್ವಿಚಕ್ರ ವಾಹನಗಳ ಬೆಲೆಗೆ ಅಷ್ಟೇ ಆಕರ್ಷಕವಾಗಿರುವ ಇತರೆ ಕಂಪನಿಯ ಬೈಕ್ & ಸ್ಕೂಟರ್‌ಗಳು ಖರೀದಿ ಲಭ್ಯವಿವೆ. ಇದರಿಂದಲೇ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆಯನ್ನು ಮಾಡಲಾಗುತ್ತಿದೆ.

ಹೋಂಡಾ ಮಾರಾಟಗೊಳಿಸುವ ಕೆಲವು ಪ್ರಮುಖ ದ್ವಿಚಕ್ರ ವಾಹನ ಕುರಿತ ಸಂಕ್ಷಿಪ್ತ ವಿವರ..

ಹೋಂಡಾ ಆಕ್ಟಿವಾ 110: ಇದು ಜನಪ್ರಿಯ ಸ್ಕೂಟರ್ ಆಗಿದ್ದು, ಪ್ರತಿ ತಿಂಗಳು ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಾರೆ. ಇದು 81,000 ದಿಂದ ರೂ.86,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.51 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Honda Two Wheelers Sales April 2025 Details

ಹೋಂಡಾ ಆಕ್ಟಿವಾ 125: ಈ ಸ್ಕೂಟರ್‌ನ್ನು ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಇದು ರೂ.99,000 ರಿಂದ ರೂ.1.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹಾಗೆಯೇ ಈ ಸ್ಕೂಟರ್ ಹೆಚ್ಚು ಶಕ್ತಿಯುತವಾದ 123.92 ಸಿಸಿ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೋಂಡಾ ಆಕ್ಟಿವಾ ಇ: ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಕನಿಷ್ಠ ರೂ.1.17 ಲಕ್ಷ ಹಾಗೂ ಗರಿಷ್ಠ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಓಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Honda Two Wheelers Sales April 2025 Details

ಹೋಂಡಾ ಕ್ಯೂಸಿ1: ಈ ಎಲೆಕ್ಟ್ರಿಕ್ ಸ್ಕೂಟರ್ ಭಾರೀ ಕಡಿಮೆ ಬೆಲೆಗೆ ಖರೀದಿದಾರರು ಕೊಂಡುಕೊಳ್ಳಬಹುದು. ಇದು ಅತಿ ಕಡಿಮೆ ಅಂದರೆ, ರೂ.90 ಸಾವಿರ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 80 ಕಿಲೋಮೀಟರ್ ಕ್ರಮಿಸುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಹೋಂಡಾ ಶೈನ್ 100: ಇದು ಬಡವರ ಬೈಕ್ ಎಂದೇ ಹೆಸರುವಾಸಿಯಾಗಿದೆ. ರೂ.69,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಸೆನ್ಸರ್ ಮತ್ತು ಸಿಂಗಲ್-ಪೀಸ್ ಸೀಟ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Honda Two Wheelers Sales April 2025 Details

ಹೋಂಡಾ ಶೈನ್ 125: ಈ ಮೋಟಾರ್‌ಸೈಕಲ್‌ನ್ನು ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು 84,000 ರಿಂದ 91,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೋಂಡಾ ಯೂನಿಕಾರ್ನ್: ಇದು ಕೊಂಚ ಮಟ್ಟಿಗೆ ಪ್ರೀಮಿಯಂ ಬೈಕ್ ಆಗಿದ್ದು, ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಶಕ್ತಿಯುತವಾದ 162.71 ಸಿಸಿ ಎಂಜಿನ್ ಹೊಂದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Honda Two Wheelers Sales April 2025 Details

ಹೋಂಡಾ ಎಸ್‌ಪಿ 125: ಈ ಬೈಕ್ ಕೂಡ ಬಜೆಟ್ ಬೆಲೆಯಲ್ಲಿಯೇ ಲಭ್ಯವಾಗುತ್ತದೆ. ಇದು ರೂ.89,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಹೋಂಡಾ ಎಸ್‌ಪಿ160: ಇದೊಂದು ಪ್ರೀಮಿಯಂ ಮೋಟಾರ್‌ಸೈಕಲ್‌ ಎಂದೇ ಹೆಸರುವಾಸಿಯಾಗಿದೆ. ರೂ.1.22 ಲಕ್ಷದಿಂದ ರೂ.1.28 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಬಲಶಾಲಿಯಾದ 162.71 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ರೇಡಿಯಂಟ್ ರೆಡ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ & ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Honda Two Wheelers Sales April 2025 Details

ಹೋಂಡಾ ಡಿಯೋ 125: ಈ ಬೈಕ್ ರೂ.88,000 ರಿಂದ ರೂ.1.02 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಲಿವೊ: ಇದು ಸಹ ಅತಿ ಕಡಿಮೆ ಬೆಲೆಗೆ ದೊರೆಯುತ್ತದೆ. ರೂ.81,000 ರಿಂದ ರೂ.86,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಆಯ್ಕೆಯನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, May 5, 2025, 15:54 [IST]
English summary
Honda two wheelers sales april 2025 details
Read more on india honda motorcycle
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+