ಬಾಸ್.. 50 Km ಮೈಲೇಜ್, 1.20 ಲಕ್ಷ.. ಈ ಜನಪ್ರಿಯ ಹೋಂಡಾ ಬೈಕ್ ಬಿಸಿ-ಬಿಸಿ 'ಜಾಮೂನ್'ನಂತೆ ಮಾರಾಟ!
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಜನಮನ್ನಣೆ ಗಳಿಸಿದೆ. ದೇಶೀಯವಾಗಿ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕವಾಗಿದ್ದು, ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದರಲ್ಲೂ ಕೊಂಚ ದೊಡ್ಡ ಗಾತ್ರದ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿರುವ 'ಯೂನಿಕಾರ್ನ್' ಮೋಟಾರ್‌ಸೈಕಲ್, ಈ ಮಾರ್ಚ್ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಮಾರ್ಚ್-2025) ಹೋಂಡಾ ಕಂಪನಿಯು ಸರಿ ಸುಮಾರು 29,363 ಯುನಿಟ್ 'ಯೂನಿಕಾರ್ನ್' ಬೈಕ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 19,221 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಿತ್ತು. ಅದಕ್ಕೆ ಹೋಲಿಸಿದರೆ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 52.76% ಬೆಳವಣಿಯಾಗಿದೆ.

ಅದೇ ರೀತಿಯಲ್ಲಿ ಈ ಫೆಬ್ರವರಿ ತಿಂಗಳಲ್ಲಿ 28,932 ಯುನಿಟ್ ಹೋಂಡಾ ಯೂನಿಕಾರ್ನ್ ಮೋಟಾರ್‌ಸೈಕಲ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ತಿಂಗಳಿಂದ ತಿಂಗಳಿಗೆ (MoM) ಶೇಕಡ 1.48% ಪ್ರಗತಿಯಾಗಿದೆ. ಈ ಏಪ್ರಿಲ್‌ನಲ್ಲಿ ಮಾರಾಟ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಹೋಂಡಾ ಯೂನಿಕಾರ್ನ್ (Honda Unicorn) ವಿಶೇಷತೆಗಳೇನು: ಇದು ಪ್ರಖ್ಯಾತ ಬೈಕ್ ಎಂದೇ ಹೆಸರುವಾಸಿಯಾಗಿದೆ. ಮಧ್ಯಮ ವರ್ಗದ ಗ್ರಾಹಕರಿಗೆ ಹೇಳಿ ಮಾಡಿಸಿದ ರೀತಿಯಲಿದ್ದು, ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೇ ಖರೀದಿಗೆ ದೊರೆಯುತ್ತದೆ. ಈ ಮೋಟಾರ್‌ಸೈಕಲ್, ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ನೂತನ ಹೋಂಡಾ ಯೂನಿಕಾರ್ನ್ ಬೈಕ್, 162.71 ಸಿಸಿ ಒಬಿಡಿ-2ಬಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7,500 ಆರ್‌ಪಿಎಂನಲ್ಲಿ 13.18 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,250 ಆರ್‌ಪಿಎಂನಲ್ಲಿ 14.58 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೊಸ ಹೋಂಡಾ ಯೂನಿಕಾರ್ನ್ ಮೋಟಾರ್‌ಸೈಕಲ್ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದುಕೊಂಡಿದೆ. ಬಹುಮುಖ್ಯವಾಗಿ ಎಲ್ಇಡಿ ಹೆಡ್‌ಲೈಟ್‌ನ್ನು ಹೊಂದಿದೆ. ಜೊತೆಗೆ ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಹಾಗೂ ರೇಡಿಯಂಟ್ ರೆಡ್ ಮೆಟಾಲಿಕ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಬೈಕ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಅನ್ನು ಪಡೆದಿದೆ. ನೂತನ ಯೂನಿಕಾರ್ನ್ ಮೋಟಾರ್‌ಸೈಕಲ್ ಬರೋಬ್ಬರಿ 139 ಕೆಜಿ ತೂಕವಿದ್ದು, 13-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಹೊಸ ಹೋಂಡಾ ಯೂನಿಕಾರ್ನ್ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಇದರೊಟ್ಟಿಗೆ ಸವಾರರ ರಕ್ಷಣೆಗಾಗಿ ಸಿಂಗಲ್ ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications