ಕಮ್ಮಿ ಸ್ಯಾಲರಿ ಇದ್ರು ಈ ಬೈಕ್ ತೆಗೆದುಕೊಳ್ಳಬಹುದು.. ರೂ.1.11 ಲಕ್ಷ ಅಷ್ಟೇ, ಫುಲ್ ಟ್ಯಾಂಕ್ ತುಂಬಿಸಿದ್ರೆ 780 Km ಮೈಲೇಜ್!
ಹೋಂಡಾ ಯುನಿಕಾರ್ನ್ (Honda Unicorn) ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದ್ದು, ಕಡಿಮೆ ಸಂಬಳವಿದ್ದರೂ ಸುಲಭವಾಗಿ ಕೊಂಡುಕೊಳ್ಳಬಹುದು. ನೀವು ಡೈಲಿ ಯೂಸ್‌ಗೆ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಯೂನಿಕಾರ್ನ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಬೈಕ್‌ನ ಬೆಲೆ ಎಷ್ಟು.. ಹೇಗೆ ಕಾರ್ಯನಿರ್ವಹಿಸುತ್ತದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ಈ ಮೋಟಾರ್‌ಸೈಕಲ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ದುಡಿಯುವ ವರ್ಗದವರ ಅಂಬಾರಿ ಎಂದೇ ಖ್ಯಾತಿ ಗಳಿಸಿದೆ. ರೂ.1.11 ಲಕ್ಷ (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಪಡೆದಿದ್ದು, ರೂ.1.44 ಲಕ್ಷ ಆನ್-ರೋಡ್ ಬೆಲೆಗೆ ಲಭ್ಯವಾಗುತ್ತದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, 3 ವರ್ಷದ ಅವಧಿಗೆ ತಿಂಗಳಿಗೆ ರೂ.4,000 ವರೆಗೆ ಇಎಂಐ ಕಟ್ಟಬೇಕು.

ವಿನ್ಯಾಸ & ಬಣ್ಣಗಳು (Design & Colours):
ಇದು ಅತ್ಯಾಕರ್ಷಕವಾಗಿದ್ದು, ಪ್ರತಿಯೊಬ್ಬರನ್ನು ತನ್ನತ್ತ ಸೆಳೆಯಬಲ್ಲದು. ಪ್ರೀಮಿಯಂ 3ಡಿ 'ಹೋಂಡಾ' ಲೋಗೋ, ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಯ್ಲಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ರೇಡಿಯಂಟ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಸುತ್ತಳತೆ (Dimension):
ನೂತನ 'ಹೋಂಡಾ ಯುನಿಕಾರ್ನ್' ಬೈಕ್ ಬಹಳಷ್ಟು ವಿಶಾಲವಾಗಿದೆ. 2,081 ಮಿ.ಮೀ ಉದ್ದ, 756 ಮಿ.ಮೀ ಮತ್ತು 1,103 ಮಿ.ಮೀ ಎತ್ತರವಿದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,335 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 139 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಈ ಮೋಟಾರ್‌ಸೈಕಲ್ ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 162.71-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 13.18 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,250 ಆರ್‌ಪಿಎಂನಲ್ಲಿ 14.58 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.
ಮೈಲೇಜ್ (Mileage):
ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ, 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 13 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸಂಪೂರ್ಣವಾಗಿ ಭರ್ತಿ ಮಾಡಿಸಿದರೆ, 650 ರಿಂದ 780 ಕಿಲೋಮೀಟರ್‌ವರೆಗೆ ಓಡಬಲ್ಲದು.

ವೈಶಿಷ್ಟ್ಯಗಳು (Features):
ಹೊಸ 'ಹೋಂಡಾ ಯುನಿಕಾರ್ನ್' ಬೈಕ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 106 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5 ರಿಂದ 6 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 17-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ಈ ಮೋಟಾರ್‌ಸೈಕಲ್ ಸವಾರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಪ್ರತಿಸ್ಪರ್ಧಿ ಬೈಕ್‌ಗಳು (Rival bikes):
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಬಜಾಜ್ ಪಲ್ಸರ್ 150 (Bajaj Pulsar 150), ಟಿವಿಎಸ್ ಅಪಾಚೆ ಆರ್‌ಟಿಆರ್ 160 (TVS Apache RTR 160) ಹಾಗೂ ಯಮಹಾ ಎಕ್ಸ್ಎಸ್ಆರ್ 155 (Yamaha XSR 155) ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications