226 ಕಿ.ಮೀ ಮೈಲೇಜ್: ಬೆಲೆಯೂ ಅಗ್ಗ! ಇನ್ನು 4 ತಿಂಗಳಲ್ಲಿ ಭಾರತದ ಮೊದಲ TVS CNG ಸ್ಕೂಟರ್ ಬಿಡುಗಡೆ?
ಟಿವಿಎಸ್ ಮೋಟಾರ್ (TVS Motor), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ ಜೂಪಿಟರ್ (Jupiter) ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇದೇ ಸ್ಕೂಟರ್‌ನ್ನು 'ಸಿಎನ್‌ಜಿ' ರೂಪದಲ್ಲೂ ಬಿಡುಗಡೆಗೊಳಿಸಲು ಕಂಪನಿಯು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಅತಿ ಶೀಘ್ರದಲ್ಲೇ 'ಜೂಪಿಟರ್ ಸಿಎನ್‌ಜಿ'ಯನ್ನು ಪರಿಚಯಿಸಲಾಗುತ್ತದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಈ ವರ್ಷಾರಂಭದ ಜನವರಿಯಲ್ಲಿ ಕೊನೆಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ ಹೊಚ್ಚ ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ (TVS Jupiter CNG) ಸ್ಕೂಟರ್‌ನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿತ್ತು. ಉತ್ತಮವಾದ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿತ್ತು.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 124.8 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಯಾವುದೇ ಸಾಮಾನ್ಯ ಸ್ಕೂಟರ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 7.1 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.4 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.
ಈ ಸ್ಕೂಟರ್ 2 ಲೀ. ಪೆಟ್ರೋಲ್ ಹಾಗೂ 1.4 ಕೆಜಿಯಷ್ಟು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಸರಿ ಸುಮಾರು 226 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಮೊಬೈಲ್ ಚಾರ್ಜಿಂಗ್ ಪೋರ್ಟ್, ಆಲ್ ಇನ್ ಒನ್ ಲಾಕ್ ಮತ್ತು ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ನೂತನ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್, 2026ರ ಫೆಬ್ರವರಿ ತಿಂಗಳಲ್ಲಿ ಅದ್ದೂರಿಯಾಗಿ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಕನಿಷ್ಠ ರೂ.90,000 ಹಾಗೂ ಗರಿಷ್ಠ ರೂ.1 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.
ಇದೇ ಪ್ರಪಂಚದ ಪ್ರಪ್ರಥಮ ಸಿಎನ್‌ಜಿ ಬೈಕ್:
ಬಜಾಜ್ ಫ್ರೀಡಂ 125 (Bajaj Freedom 125) ವಿಶ್ವದ ಮೊಟ್ಟ ಮೊದಲ ಸಿಎನ್‌ಜಿ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿವಾಗಿದೆ. ರೂ.90,976 ದಿಂದ ರೂ.1.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ರೇಸಿಂಗ್ ರೆಡ್, ಸೈಬರ್ ವೈಟ್, ಪ್ಯೂಟರ್ ಗ್ರೇ, ಕೆರಿಬಿಯನ್ ಬ್ಲೂ ಮತ್ತು ಪ್ಯೂಟರ್ ಗ್ರೇ ಯೆಲ್ಲೋ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು 124.58 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಬರೋಬ್ಬರಿ 330 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 2 ಲೀ. ಪೆಟ್ರೋಲ್ ಹಾಗೂ 2 ಕೆಜಿಯಷ್ಟು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1340 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಒಟ್ಟು 147 ಕೆಜಿ ತೂಕವಿದೆ.
ಈ ಬೈಕ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಮೊಬೈಲ್ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ಬೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 7.85 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಹೊಸ 'ಬಜಾಜ್ ಫ್ರೀಡಂ 125' ಮೋಟಾರ್‌ಸೈಕಲ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಲಿಂಕ್ಡ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. ಪ್ರಸ್ತುತ ಈ ಬೈಕ್‌ಗೆ ದೇಶೀಯವಾಗಿ ಯಾವುದೇ ನೇರವಾದ ಎದುರಾಳಿಯಿಲ್ಲ.


Click it and Unblock the Notifications








