KTM: ಕೆಟಿಎಂ 390 ಅಡ್ವೆಂಚರ್ ಬೈಕ್ ವಿಡಿಯೋ ರಿವ್ಯೂ.. ನೀವೇ ನೋಡಿ, ಯಾರು ಹೇಳಲ್ಲ!

ದೇಶೀಯ ಮಾರುಕಟ್ಟೆಯಲ್ಲಿ ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿ ಕೆಟಿಎಂ (KTM), ಹೊಚ್ಚ ಹೊಸ 2025ರ '390 ಅಡ್ವೆಂಚರ್' ಬೈಕ್‌ನ್ನು ಮಾರಾಟಕ್ಕೆ ತಂದಿದೆ. ಈ ಬೈಕ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದ್ದು, ರೂ.3.68 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನಮ್ಮ ಡ್ರೈವ್‌ಸ್ಪಾರ್ಕ್ ತಂಡದ ಪ್ರತಿನಿಧಿಗೆ ಗೋವಾದಲ್ಲಿ ನೂತನ 390 ಅಡ್ವೆಂಚರ್ ಮೋಟಾರ್‌ಸೈಕಲ್‌ನ್ನು ಟೆಸ್ಟ್ ರೈಡ್ ಮಾಡಲು ಅವಕಾಶ ಲಭ್ಯವಾಯಿತು.. ನಿಮಗಾಗಿ ಈ ಬೈಕ್ ವಿಡಿಯೋ ರಿವ್ಯೂ..

ಹೊಸ ಕೆಟಿಎಂ 390 ಅಡ್ವೆಂಚರ್ (KTM 390 Adventure) ಮೋಟಾರ್‌ಸೈಕಲ್‌ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ವರ್ಟಿಕಲ್ ವಿಂಡ್‌ಸ್ಕ್ರೀನ್, ಡುಯಲ್ ಎಲ್‌ಇಡಿ ಹೆಡ್‌ಲೈಟ್ ಸೆಟಪ್, ಹಾರ್ಸ್‌ಶೂ ಎಲ್‌ಇಡಿ ಡಿಆರ್‌ಎಲ್‌ಗಳು, ಕಲರ್-ಇಂಜೆಕ್ಟೆಡ್ ಸೈಡ್ ಪ್ಯಾನೆಲ್‌ಗಳು, ನಕಲ್ ಗಾರ್ಡ್‌ಗಳು, ಸಿಂಗಲ್-ಪೀಸ್ ಸೀಟ್ ಹಾಗೂ ಎಲ್ಇಡಿ ಟೈಲ್‌ಲೈಟ್‌ನ್ನು ಹೊಂದಿದೆ.

ಈ ಬೈಕ್ 399 ಸಿಸಿ ಲಿಕ್ವಿಡ್ ಕೂಲ್ಡ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45.3 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 39 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ನೂತನ ಕೆಟಿಎಂ 390 ಅಡ್ವೆಂಚರ್ ಮೋಟಾರ್‌ಸೈಕಲ್‌ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 5-ಇಂಚಿನ ಕಲರ್ ಟಿಎಫ್‌ಟಿ ಡಿಸ್‌ಪ್ಲೇ, ರೈಡ್-ಬೈ-ವೈರ್, ಟ್ರಾಕ್ಷನ್ ಕಂಟ್ರೋಲ್, ಕಾರ್ನರಿಂಗ್ ಟ್ರಾಕ್ಷನ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್ & ಮ್ಯೂಸಿಕ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Ktm 390 Adventure Video Review Details

ಈ ಹೊಸ ಬೈಕ್ ಮುಂಭಾಗ (ಫ್ರಂಟ್) 41 ಎಂಎಂ ಯುಎಸ್‌ಡಿ ಓಪನ್ ಕಾರ್ಟ್ರಿಡ್ಜ್ ಫೋರ್ಕ್ ಮತ್ತು ಹಿಂಭಾಗ (ರೇರ್) ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂದೆ 320 ಎಂಎಂ & ಹಿಂದೆ 220 ಎಂಎಂ ಡಿಸ್ಕ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, February 25, 2025, 12:06 [IST]
English summary
Ktm 390 adventure video review details
Read more on ktm india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+