ಬಡವರಿಗಾಗಿಯೇ ಇರುವ ಟೂ-ವೀಲರ್‌ಗಳಿವು.. ರೂ.75,000ಕ್ಕಿಂತ ಕಡಿಮೆ ಬೆಲೆ!
ಪ್ರತಿಯೊಬ್ಬರಿಗೂ ದಿನನಿತ್ಯದ ಉಪಯೋಗಕ್ಕಾಗಿ ದ್ವಿಚಕ್ರ ವಾಹನಗಳು (Two Wheelers) ಬೇಕೇ ಬೇಕು. ಆದರೆ, ಸಾಮಾನ್ಯವಾಗಿ ಯಾವುದೇ ಹೊಚ್ಚ ಹೊಸ ಬೈಕ್ ಅಥವಾ ಸ್ಕೂಟರ್‌ನ್ನು ತೆಗೆದುಕೊಳ್ಳಬೇಕು ಅಂದರೂ ಸುಮಾರು ರೂ.80,000 ರಿಂದ ರೂ.1 ಲಕ್ಷವರೆಗೆ ಹಣ ಇರಲೇಬೇಕು. ನೀವು ರೂ.75,000ಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಈ 10 ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest): ಇದೊಂದು ಸ್ಕೂಟರ್ ಆಗಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಸಿಗುತ್ತದೆ. ಇದರಿಂದ ಬಡವರು ಕೂಡ ಸುಲಭವಾಗಿ ಖರೀದಿ ಮಾಡಲು ಸಾಧ್ಯವಾಗಲಿದೆ. ಈ ಸ್ಕೂಟರ್ ಕನಿಷ್ಠ ರೂ.68,000 ಹಾಗೂ ಗರಿಷ್ಠ ರೂ.71,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಹೊಸ ಟಿವಿಎಸ್ ಸ್ಕೂಟಿ ಜೆಸ್ಟ್ ಸ್ಕೂಟರ್ ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದು 109.7 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಮ್ಯಾಟ್ ಬ್ಲ್ಯಾಕ್ & ಮ್ಯಾಟ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.
ಟಿವಿಎಸ್ ಎಕ್ಸ್‌ಎಲ್ 100 ಹೆವಿ ಡ್ಯೂಟಿ (TVS XL100 Heavy Duty): ಇದು ರೈತರ ಮೆಚ್ಚಿನ ಮೊಪೆಡ್ ಎಂದೇ ಹೆಸರುವಾಗಿಯಾಗಿದ್ದು, ಎಲ್ಲ ರೀತಿಯ ಹೊಲದ ಕೆಲಸಗಳಿಗೂ ಬಳಕೆ ಮಾಡಬಹುದು. ಈ ಮೊಪೆಡ್ ಕೇವಲ ರೂ.46,354 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ.

ನೂತನ ಟಿವಿಎಸ್ ಎಕ್ಸ್‌ಎಲ್ 100 ಹೆವಿ ಡ್ಯೂಟಿ ಮೊಪೆಡ್ 99.7 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು ಅನಲಾಗ್ ಇನ್ಸ್ಟ್ರುಮೆಂಟ್ ಸಿಸ್ಟಮ್‌ನಂತಹ ವೈಶಿಷ್ಟ್ಯವನ್ನು ಪಡೆದಿದೆ. ಬ್ಲ್ಯಾಕ್, ಬ್ಲೂ ಮತ್ತು ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಕೈನೆಟಿಕ್ ಇ-ಲೂನಾ ಎಕ್ಸ್2 (Kinetic E-Luna X2): ಈ ಎಲೆಕ್ಟ್ರಿಕ್ ಮೊಪೆಡ್ ಅತಿ ಕಡಿಮೆ ಬೆಲೆಯನ್ನು ಹೊಂದಿದೆ. ಇದು ರೂ.69,990 (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. 2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 110 ಕಿಲೋಮೀಟರ್ ಕ್ರಮಿಸುತ್ತದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಿವಿಎಸ್ ರೇಡಿಯನ್ (TVS Radeon): ಇದನ್ನು ಬಡವರ ಬಂಡಿ ಎಂದು ಕರೆದರೂ ತಪ್ಪಾಗುವುದಿಲ್ಲ. ಅಷ್ಟರಮಟ್ಟಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಸಾಮಾನ್ಯ ಗ್ರಾಹಕರು ಕೂಡ ಕೊಂಡುಕೊಳ್ಳಬಹುದು. ಈ ಬೈಕ್ ಕನಿಷ್ಠ ರೂ.70,000 ಮತ್ತು ಗರಿಷ್ಠ ರೂ.84,000 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ.
ಹೊಸ ಟಿವಿಎಸ್ ರೇಡಿಯನ್ ಮೋಟಾರ್‌ಸೈಕಲ್ ಅತ್ಯುತ್ತಮ ಕಾರ್ಯಕ್ಷಮತೆಗೂ ಸಾಕ್ಷಿಯಾಗಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಇದು ಅತ್ಯುತ್ತಮವಾದ ಇಂಧನ ದಕ್ಷತೆಯನ್ನು ಹೊಂದಿದ್ದು, 73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಆಂಪಿಯರ್ ರಿಯೋ (Ampere Reo): ಈ ಎಲೆಕ್ಟ್ರಿಕ್ ಸ್ಕೂಟರ್ ರೂ.49,900 ರಿಂದ ರೂ.59,900 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 70 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 25 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ವೈಟ್, ರೆಡ್, ಆರೆಂಜ್, ಯೆಲ್ಲೋ ಮತ್ತು ಬ್ಲ್ಯೂ ಬಣ್ಣಗಳೊಂದಿಗೂ ಸಿಗುತ್ತದೆ.
ಓಕಿನಾವಾ ಆರ್30 (Okinawa R30): ಇದು ಸಹ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.61,998 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.34 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 60 ಕಿಲೋಮೀಟರ್ ಓಡುತ್ತದೆ. 25 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 100 (Honda Shine 100): ಈ ಬೈಕ್ ಶ್ರೀಸಾಮಾನ್ಯರ ನೆಚ್ಚಿನ ದ್ವಿಚಕ್ರ ವಾಹನವಾಗಿ ಹೊರಹೊಮ್ಮಿದೆ. ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಇದು ರೂ.68,767 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹಾಗೆಯೇ ಈ ಮೋಟಾರ್‌ಸೈಕಲ್ ಸ್ಪ್ಲೆಂಡರ್ ಬಳಿಕ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಬೈಕ್ ಆಗಿಯೂ ಗುರುತಿಸಿಕೊಂಡಿದೆ.
ಈ ಹೋಂಡಾ ಶೈನ್ 100 ಬೈಕ್ ಸಾಕಷ್ಟು ಶಕ್ತಿಯುತವಾಗಿರುವ 98.98 ಸಿಸಿ ಒಬಿಡಿ-2ಬಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಡ್-ಸ್ಟ್ಯಾಂಡ್ ಸೆನ್ಸರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಒಕಾಯಾ ಫ್ರೀಡಂ (Okaya Freedum): ಇದು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಗುರುತಿಸಿಕೊಂಡಿದೆ. ರೂ.49,999 (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. 1.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 70 ರಿಂದ 75 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 25 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ಹೀರೋ ಪ್ಲೆಷರ್ ಪ್ಲಸ್ (Hero Pleasure Plus): ಈ ಸ್ಕೂಟರ್ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವುದರಿಂದ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಇದು ಕನಿಷ್ಠ ರೂ.72,713 ಮತ್ತು ಗರಿಷ್ಠ ರೂ.84,843 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 110.9 ಸಿಸಿ ಎಂಜಿನ್ ಪಡೆದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ಕೊಡುತ್ತದೆ. ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಓಕಿನಾವಾ ಲೈಟ್ (Okinawa Lite): ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.69,093 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.25 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 60 ಕಿಲೋಮೀಟರ್ ಕ್ರಮಿಸುತ್ತದೆ. 25 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬ್ಯಾಟರಿ ಲಾಕ್, ಕೀಲೆಸ್ ಆಪರೇಷನ್ ಹಾಗೂ ಯುಎಸ್‌ಬಿ ಪೋರ್ಟ್‌ನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications