Mother's Day: ನಿಮ್ಮ ಹೆತ್ತಮ್ಮನಿಗೆ ಸರ್ಪ್ರೈಸ್ ಗಿಫ್ಟ್ ಕೊಡಲು ಈ ಸ್ಕೂಟರ್‌ಗಳು ಬೆಸ್ಟ್.. ಯಾವುವು, ಬೆಲೆ ಎಷ್ಟು?
ಅಮ್ಮ ಎಂದರೆ ಪ್ರೀತಿ, ನಂಬಿಕೆ, ತ್ಯಾಗ.. ಪ್ರತಿ ಕ್ಷಣ ಬದಲಾಗುವ ಭೂಮಿಯಲ್ಲಿ ಎಂದು ಬದಲಾಗದೆ ಹಾಗೆಯೇ ಉಳಿಯುವುದು ಒಂದೇ ಒಂದು ಅದು ತಾಯಿಯ ಪ್ರೀತಿ.. ಪ್ರತಿ ವರ್ಷ ವಿಶ್ವದಾದ್ಯಂತ ಮೇ ತಿಂಗಳ ಎರಡನೇ ಭಾನುವಾರದಂದು ತಾಯಂದಿರ ದಿನವನ್ನು (Mother's Day) ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ಇದೇ 11ರಂದು ಅಮ್ಮಂದಿರ ದಿನ ಬಂದಿದೆ. ಆ ದಿನ ನಿಮ್ಮ ತಾಯಿಗೆ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಸರ್ಪ್ರೈಸ್ ಗಿಫ್ಟ್ ನೀಡಲು ಆಲೋಚಿದ್ದೀರಾ.. ಹಾಗಾದರೆ, ಹೀರೋ ಪ್ಲೆಷರ್ ಪ್ಲಸ್, ಟಿವಿಎಸ್ ಜೆಸ್ಟ್ 110, ಹೀರೋ ಡೆಸ್ಟಿನಿ 125, ಹೋಂಡಾ ಆಕ್ಟಿವಾ ಇ ಹಾಗೂ ಎಥರ್ ರಿಜ್ಟಾ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ. ನಾವಿಲ್ಲಿ ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಸಿಕೊಟ್ಟಿದ್ದೇವೆ.
ಹೀರೋ ಪ್ಲೆಷರ್ ಪ್ಲಸ್ (Hero Pleasure Plus): ಇದು ಜನಪ್ರಿಯ ಸ್ಕೂಟರ್ ಆಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ತಾಯಂದಿರ ದಿನದಂದು ನಿಮ್ಮ ಪ್ರೀತಿಯ ಅಮ್ಮಗೆ ಉಡುಗೊರೆ ನೀಡಲು ಹೆಚ್ಚು ಸೂಕ್ತವಾಗಲಿದೆ. ಈ ಸ್ಕೂಟರ್ ರೂ.72,000 ರಿಂದ ರೂ.84,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ನೂತನ ಪ್ಲೆಷರ್ ಪ್ಲಸ್ ಸ್ಕೂಟರ್ ಬೆಲೆಗೆ ತಕ್ಕಂತೆಯೇ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪರ್ಲ್ ಸಿಲ್ವರ್ ವೈಟ್, ಬ್ಲೂಯಿಶ್ ಟೀಲ್, ಬ್ಲೂಯಿಶ್ ಟೀಲ್ ಮತ್ತು ಮ್ಯಾಟ್ ವರ್ನಿಯರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಟಿವಿಎಸ್ ಜೆಸ್ಟ್ 110 (TVS Zest 110): ಈ ಸ್ಕೂಟರ್ ನಿಮ್ಮ ತಾಯಿಗೆ ಗಿಫ್ಟ್ ಕೊಡಲು ಉತ್ತಮವಾದ ಆಯ್ಕೆಯಾಗಲಿದೆ. ಇದು 75,000 ರಿಂದ ರೂ.77,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೀರೋ ಡೆಸ್ಟಿನಿ 125 (Hero Destini 125): ಇದೊಂದು ಪ್ರಮುಖ ಸ್ಕೂಟರ್ ಆಗಿದ್ದು, ತಾಯಂದಿರ ದಿನದಂದು ಉಡುಗೊರೆ ನೀಡಲು ಬೆಸ್ಟ್ ಚಾಯ್ಸ್ ಆಗಿದೆ. ಇದು ರೂ.82,000 ರಿಂದ ರೂ.93,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಟರ್ನಲ್ ವೈಟ್, ರೀಗಲ್ ಬ್ಲ್ಯಾಕ್ ಮತ್ತು ಗ್ರೂವಿ ರೆಡ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಡೆಸ್ಟಿನಿ 125 ಸ್ಕೂಟರ್, 124.6 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 59 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಆಕ್ಟಿವಾ ಇ (Honda Activa e): ಇದು ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ನಿಮ್ಮ ಅಮ್ಮನಿಗೆ ಗಿಫ್ಟ್ ಕೊಡಲು ಆಯ್ದುಕೊಳ್ಳಬಹುದು. ಈ ಸ್ಕೂಟರ್ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ ನೀಡುತ್ತದೆ.
ಎಥರ್ ರಿಜ್ಟಾ (Ather Rizta): ಈ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಗ್ರಾಹಕರು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇದು ತಾಯಂದಿರ ದಿನ ಉಡುಗೊರೆ ನೀಡಲು ಅತ್ಯುತ್ತಮವಾದ ಆಯ್ಕೆಯಾಗಲಿದೆ. ಈ ಸ್ಕೂಟರ್ ರೂ.1.11 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 123 ಕಿ.ಮೀ ಓಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications