4 ಕೋಟಿ ಜನರ ವಿಶ್ವಾಸ: ಸದ್ದಿಲ್ಲದೇ ಬೈಕ್ ಕಿಂಗ್ 'ಸ್ಪ್ಲೆಂಡರ್ ಪ್ಲಸ್'ನ ಟೆಸ್ಟ್, ಶೀಘ್ರ ಹೊಸ ರೂಪದಲ್ಲಿ ಲಭ್ಯ!
ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ವಿಶ್ವದ ನಂ.1 ಮೋಟಾರ್‌ಸೈಕಲ್ ಆಗಿದೆ. ಈ ಬೈಕ್‌ನ ಜನಪ್ರಿಯತೆ ಎಷ್ಟಿದೆ ಅಂದರೆ, ಈವರೆಗೆ 4 ಕೋಟಿಗೂ ಅಧಿಕ ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇಷ್ಟು ಮಾತ್ರವಲ್ಲದೆ, ಕಾಲ ಕಾಲಕ್ಕೆ ಕಂಪನಿಯು ಸ್ಪ್ಲೆಂಡರ್‌ನ್ನು ನವೀಕರಣಗೊಳಿಸಿ ಮಾರಾಟಕ್ಕೆ ತರುತ್ತಲೇ ಇರುತ್ತದೆ. ಸದ್ಯ, 2025ರ ನೂತನ 'ಹೀರೋ ಸ್ಪ್ಲೆಂಡರ್ ಪ್ಲಸ್' ಮೋಟಾರ್‌ಸೈಕಲ್ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಾಣಿಸಿಕೊಂಡಿದ್ದು, ಆ ಸ್ಪೈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿವೆ.
ರಾಜಸ್ಥಾನದ ಜೈಪುರ ಸಮೀಪ ಪ್ರಾಯೋಜಿಕ ಸಂಚಾರದ ವೇಳೆಯಲ್ಲಿ ಹೊಚ್ಚ ಹೊಸ 'ಹೀರೋ ಸ್ಪ್ಲೆಂಡರ್ ಪ್ಲಸ್' ಬೈಕ್ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ. ಅದರ ಸ್ಪೈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿನ್ಯಾಸದಲ್ಲಿ ಯಾವುದೇ ರೀತಿಯ ನವೀನ ಬದಲಾವಣೆಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಇದು ಪ್ರಸ್ತುತವಿರುವ ಸ್ಪ್ಲೆಂಡರ್ ಮಾಡೆಲ್‌ನಂತೆಯೇ ಇದೆ.

ಆದರೂ ಸೈಡ್ ಪ್ಯಾನೆಲ್‌ಗಳಲ್ಲಿನ ಗ್ರಾಫಿಕ್ಸ್ ಒಂದಷ್ಟು ಮಾರ್ಪಾಡುಗಳನ್ನು ಹೊಂದಿರುವುದನ್ನು ನೋಡಬಹುದು. ಇದರ ಹಾರ್ಡ್‌ವೇರ್ ಕೂಡ ಬದಲಾಗಿಲ್ಲ. ಈ ಬೈಕ್ ಟ್ಯೂಬ್ಯುಲರ್ ಡಬಲ್ ಕ್ರೇಡಲ್ ಫ್ರೇಮ್ ಒಳಗೊಂಡಿದ್ದು, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್‌ಗಳು ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟೇಬಲ್ ಡುಯಲ್- ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. 18-ಇಂಚಿನ ವೀಲ್‌ಗಳು ಮತ್ತು 80/100 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.
ನೂತನ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಗ್ರೌಂಡ್ ಕ್ಲಿಯರೆನ್ಸ್ ಹೆಚ್ಚು - ಕಮ್ಮಿ 165 ಎಂಎಂ ಇದೆ. ವಿಶೇಷವಾಗಿ ಈ ಮೋಟಾರ್‌ಸೈಕಲ್‌ನ ಎಂಜಿನ್‌ನ್ನು ಒಬಿಡಿ 2ಬಿ (OBD-2B) ಮಾನದಂಡಗಳ ಅನ್ವಯ ನವೀಕರಿಸಲಾಗಿರುತ್ತದೆ ಎಂದು ವರದಿಯಾಗಿದೆ. ಇದರಿಂದ ಇಂಗಾಲ ಹೊರಸೂಸುವಿಕೆಯಲ್ಲಿ ಸಮಸ್ಯೆ ಕಂಡುಬಂದರೆ, ಸವಾರನನ್ನು ಎಚ್ಚರಿಸಲು ಸಾಧ್ಯವಾಗಲಿದೆ.

ಹೊಸ ಬೈಕ್‌ನ ಎಂಜಿನ್‌ನ್ನು 'ಒಬಿಡಿ 2ಬಿ' ಮಾನದಂಡಗಳ ಪ್ರಕಾರ ಸಿದ್ಧಪಡಿಸಿದರೂ ಕಾರ್ಯಕ್ಷಮತೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎನ್ನಲಾಗಿದೆ. ಇದು ಸದ್ಯವಿರುವ ಮಾಡೆಲ್‌ನಂತೆ 97.2 ಸಿಸಿ, ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದೆ. 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ.
ದೇಶೀಯವಾಗಿ ಖರೀದಿಗೆ ದೊರೆಯುವ ನೂತನ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕನಿಷ್ಠ ರೂ.77,176 ಹಾಗೂ ಗರಿಷ್ಠ ರೂ.79,926 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಬ್ಲ್ಯಾಕ್ ಗ್ರೇ ಸ್ಟ್ರೈಪ್, ಫೋರ್ಸ್ ಸಿಲ್ವರ್, ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್, ಬ್ಲ್ಯಾಕ್ ರೆಡ್ ಪರ್ಪಲ್ ಹಾಗೂ ಬ್ಲೂ ಬ್ಲ್ಯಾಕ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇನ್ನು, ಹೊಚ್ಚ ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್ ಬಿಡುಗಡೆಯಾಗುತ್ತಿದೆ ಎಂಬ ವಿಚಾರವು ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈ ಬೈಕ್ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡು ಅತಿ ಕಡಿಮೆ ಬೆಲೆಗೂ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಆ ಬಳಿಕ, ದೇಶೀಯ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: GaadiWaadi


Click it and Unblock the Notifications








