Hero: ಸದ್ದಿಲ್ಲದೇ ಮೈಲೇಜ್ ಸಾಮ್ರಾಟ್ ಸ್ಪ್ಲೆಂಡರ್ ಪ್ಲಸ್‌ಗೆ ಹೊಸ ರೂಪ.. ಶೀಘ್ರ ಬಿಡುಗಡೆ, ಡೀಲರ್‌ಶಿಪ್‌ಗೂ ಬಂತು!

ಭಾರತದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ದ್ವಿಚಕ್ರ ವಾಹನವಾಗಿ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ 1994ರಲ್ಲಿ ಮೊದಲ ಬಾರಿಗೆ ಈ ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ಅಂದಿನಿಂದ ಇಂದಿನವರೆಗೆ ಮಧ್ಯಮ ವರ್ಗದವರ ನೆಚ್ಚಿನ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. ಸದ್ಯ, ಈ 'ಸ್ಪ್ಲೆಂಡರ್ ಪ್ಲಸ್' ಒಂದಷ್ಟು ನವೀಕರಣಗಳನ್ನು ಪಡೆದುಕೊಂಡಿದ್ದು, ಅತಿ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ಈಗಾಗಲೇ, 2025ರ ನೂತನ 'ಹೀರೋ ಸ್ಪ್ಲೆಂಡರ್ ಪ್ಲಸ್' ಬೈಕ್‌ ಮಾಡೆಲ್‌ಗಳನ್ನು ದೇಶಾದ್ಯಂತ ಕಂಪನಿಯ ವಿವಿಧ ಡೀಲರ್‌ಶಿಪ್‌ ಗೋಡನ್‌ಗಳಿಗೂ ತಲುಪಿಸಲಾಗಿದೆ ಎನ್ನಲಾಗಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋಗಳು ಆನ್‌ಲೈನ್‌ನಲ್ಲಿ ಕೂಡ ಸೋರಿಕೆಯಾಗಿವೆ. ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಹೊಸ 'ಸ್ಪ್ಲೆಂಡರ್ ಪ್ಲಸ್' ಮೋಟಾರ್‌ಸೈಕಲ್‌ನ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

New 2025 Hero Splendor Plus Spotted With Disc Brake Setup Launch Soon Details

ಇದು ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್‌ ಮಾಡೆಲ್‌ನಂತೆ ಮುಂಭಾಗ (ಫ್ರಂಟ್) ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಹಿಂಭಾಗ (ರೇರ್) ಸಾಮಾನ್ಯ ಡ್ರಮ್ ಬ್ರೇಕ್ ಸೆಟಪ್‌ನ್ನು ಒಳಗೊಂಡಿರಲಿದೆ ಎಂದು ತಿಳಿದುಬಂದಿದೆ. ನೂತನ 'ಸ್ಪ್ಲೆಂಡರ್ ಪ್ಲಸ್' ಬೈಕ್‌ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿರುವುದಿಲ್ಲ ಎನ್ನಲಾಗಿದೆ. ಆದರೆ, ಈ ಎಂಜಿನ್‌ನ್ನು ಒಬಿಡಿ 2ಬಿ (OBD-2B) ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಿರಬಹುದು ಎಂದು ಹೇಳಲಾಗಿದೆ. ಈ ಮೋಟಾರ್‌ಸೈಕಲ್ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಹೊಸ 'ಹೀರೋ ಸ್ಪ್ಲೆಂಡರ್' ಬೈಕ್ ಹಲವು ವಿಧದ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಅವುಗಳಲ್ಲಿ 'ಸ್ಪ್ಲೆಂಡರ್ ಪ್ಲಸ್' ಸ್ಟ್ಯಾಂಡರ್ಡ್ ಮಾಡೆಲ್ ಆಗಿದ್ದು, ರೂ.77,176 ರಿಂದ ರೂ.79,926 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದರೊಟ್ಟಿಗೆ ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

New 2025 Hero Splendor Plus Spotted With Disc Brake Setup Launch Soon Details

'ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಬೈಕ್ ಕುರಿತಂತೆ ಹೇಳುವುದಾದರೆ, ಇದು ಕನಿಷ್ಠ ರೂ.81,001 ಮತ್ತು ಗರಿಷ್ಠ ರೂ.84,301 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, ಸ್ಟ್ಯಾಂಡರ್ಡ್ ಮಾಡೆಲ್‌ನಂತೆಯೇ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

'ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಬಗ್ಗೆ ಮಾತನಾಡುವುದಾದರೆ, ಈ ಮೋಟಾರ್‌ಸೈಕಲ್ ರೂ.84,050 ದಿಂದ ರೂ.88,050 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 69 ಕೆಎಂಪಿಎಲ್‌ವರೆಗೂ ಮೈಲೇಜ್ ಸಹ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಒಟ್ಟಾರೆಯಾಗಿ 2025ರ 'ಹೀರೋ ಸ್ಪ್ಲೆಂಡರ್ ಪ್ಲಸ್' ಬೈಕ್‌ ಹೊಸ ರೂಪದಲ್ಲಿ ಮಾರಾಟಕ್ಕೆ ಬರಲಿದೆ ಎಂಬ ವಿಚಾರವು ಮಧ್ಯಮ ವರ್ಗದ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈಗಾಗಲೇ, 'ಸ್ಪ್ಲೆಂಡರ್'ಗೆ ದೊಡ್ಡ ಮಾರುಕಟ್ಟೆಯಿದೆ. ಅದು ನೂತನ ಮಾಡೆಲ್‌ನಿಂದ ಮತ್ತಷ್ಟು ವಿಸ್ತರಣೆಯಾಗಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, March 11, 2025, 12:23 [IST]
English summary
New 2025 hero splendor plus spotted with disc brake setup launch soon details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+