Honda Activa: ಅಗ್ಗದ ದರ.. 2025ರ ನೂತನ ಹೋಂಡಾ ಆಕ್ಟಿವಾ 110 ಸ್ಕೂಟರ್ ಕುರಿತ ವಿಶೇಷತೆಗಳಿವು?
ಭಾರತದ ರಸ್ತೆಯನ್ನು ಹೋಂಡಾ ಆಕ್ಟಿವಾ (Honda Activa) ದಶಕಗಳಿಂದ ಆಳುತ್ತಿದೆ. ಇದು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ, ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು 2025ರ ನವೀಕರಿಸಿದ ಹೊಚ್ಚ ಹೊಸ 'ಆಕ್ಟಿವಾ 110' ಸ್ಕೂಟರ್‌ನ್ನು ಬಿಡುಗಡೆಗೊಳಿಸಿತ್ತು. ಬನ್ನಿ.. ಈ ನೂತನ ಸ್ಕೂಟರ್ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ & ವಿನ್ಯಾಸ (Price & Design): ಹೊಸ ಹೋಂಡಾ ಆಕ್ಟಿವಾ 110 ಸ್ಕೂಟರ್, ಕೈಗೆಟುಕುವ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.80,950 (ಎಕ್ಸ್ ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ. ಜೊತೆಗೆ ಹೆಚ್ಚು ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದ್ದು, ನವೀನ ಶೈಲಿಯ ಎಲ್ಇಡಿ-ಹೆಡ್‌ಲೈಟ್‌ನ್ನು ಒಳಗೊಂಡಿದೆ. ಡಿಸೆಂಟ್ ಬ್ಲೂ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ & ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಕಾರ್ಯಕ್ಷಮತೆ (Performance): ಈ ಆಕ್ಟಿವಾ 110 ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 109.51 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್, 7.9 ಪಿಎಸ್ (ಅಶ್ವ ಶಕ್ತಿ) ಹಾಗೂ 9.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.
ವೈಶಿಷ್ಟ್ಯಗಳು (Features): ನೂತನ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ (4.2-ಇಂಚು), ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಹೋಂಡಾ ರೋಡ್‌ಸಿಂಕ್ ಫೋನ್ ಅಪ್ಲಿಕೇಶನ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಸ್ಕೂಟರ್, 106 ಕೆಜಿ ತೂಕವಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಹೊಸ ಹೋಂಡಾ ಆಕ್ಟಿವಾ 110 ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
2025ರ ಹೋಂಡಾ ಆಕ್ಟಿವಾ 125 ಸ್ಕೂಟರ್ ಕೂಡ ಖರೀದಿಗೆ ಲಭ್ಯ: ಇದು ರೂ.94,000 ರಿಂದ ರೂ.97,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡಿಎಲ್ಎಕ್ಸ್ & ಹೆಚ್-ಸ್ಮಾರ್ಟ್ ಎಂಬ ಎರಡು ಆಕರ್ಷಕ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ & ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಆಕ್ಟಿವಾ 125 ಸ್ಕೂಟರ್, 123.92 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications