Honda: ಹೊಸ ಬಣ್ಣಗಳೊಂದಿಗೆ 2025 ಹೋಂಡಾ ಶೈನ್ 125 ಬೈಕ್ ಬಿಡುಗಡೆ.. ಅತಿ ಕಡಿಮೆ ಬೆಲೆ, ವಿಶೇಷತೆಗಳೇನು?
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದ್ದು, ಸಾಮಾನ್ಯ ಹಳ್ಳಿಯಿಂದ ಹಿಡಿದು ದಿಲ್ಲಿವರೆಗೆ ಮನೆ ಮಾತಾಗಿದೆ. ಸದ್ಯ, 2025ರ ಶೈನ್ 125 (Shine 125) ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ನೂತನ ಮೋಟಾರ್‌ಸೈಕಲ್ ಹಲವು ಹೊಸತನಗಳಿಗೂ ಸಾಕ್ಷಿಯಾಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ನೂತನ ಹೋಂಡಾ ಶೈನ್ 125 (Honda Shine 125) ಮೋಟಾರ್‌ಸೈಕಲ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಇದು ರೂ.84,493 ಎಕ್ಸ್ ಶೋರೂಂ ದರವನ್ನು ಹೊಂದಿದೆ. ಡ್ರಮ್ ಬ್ರೇಕ್ (Drum Brake) ಹಾಗೂ ಡಿಸ್ಕ್ ಬ್ರೇಕ್ (Disc Brake) ಎಂಬ ಎರಡು ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಬೈಕ್ ಒಬಿಡಿ2ಬಿ (OBD2B) ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಿದ 123.94 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 10.63 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 11 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೊಸ 2025ರ ಹೋಂಡಾ ಶೈನ್ 125 ಮೋಟಾರ್‌ಸೈಕಲ್, ಹಳೆಯ ಶೈನ್ ಬೈಕ್‌ನಂತೆಯೇ ವಿನ್ಯಾಸವನ್ನು ಹೊಂದಿದೆ. ಇದರೊಟ್ಟಿಗೆ ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್, ಡಿಸೆಂಟ್ ಬ್ಲೂ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ 6 ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ ಹೋಂಡಾ ಶೈನ್ 125 ಬೈಕ್ ಹೆಚ್ಚು ಅತ್ಯುತ್ತಮ ವಿನ್ಯಾಸವನ್ನು ಒಳಗೊಂಡಿದೆ. ಪ್ರಮುಖವಾದ ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಆಯ್ಕೆಯನ್ನು ಪಡೆದಿದೆ. ಇದು ರಿಯಲ್ ಟೈಮ್ ಮೈಲೇಜ್ ಸೇರಿದಂತೆ ವಿವಿಧ ಮಾಹಿತಿಯನ್ನು ಒದಗಿಸುತ್ತದೆ. ಜೊತೆಗೆ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನ್ನು ತನ್ನದಾಗಿಸಿಕೊಂಡಿದೆ.
ಈ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ರೇರ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂದೆ ಡ್ರಮ್/ಡಿಸ್ಕ್ ಮತ್ತು ಹಿಂದೆ ಡ್ರಮ್ ಬ್ರೇಕ್‌ನ್ನು ಪಡೆದಿದೆ. ವಾಹನ ಸವಾರರಿಗೆ ರಸ್ತೆ ಮೇಲೆ ಬಿಗಿಯಾದ ಹಿಡಿತ ಒದಗಿಸಲು 90 ಎಂಎಂ ಅಗಲವಿರುವ ಹಿಂಭಾಗದ ಟೈರ್‌ನ್ನು ಪಡೆದಿದೆ.
ಇನ್ನು, ಹೋಂಡಾ ಶೈನ್ 125 ಬೈಕ್‌ಗೆ ಬಜಾಜ್ ಪಲ್ಸರ್ 125, ಟಿವಿಎಸ್ ರೈಡರ್ 125, ಮತ್ತು ಹೀರೋ ಸೂಪರ್ ಸ್ಪ್ಲೆಂಡರ್ 125 ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ. ಈ ನೂತನ ಶೈನ್ 125 ಮೋಟಾರ್‌ಸೈಕಲ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಹಿನ್ನೆಲೆ, ಮುಂಬರುವ ದಿನಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications