ಟೆಲಿವಿಷನ್ ಕಮರ್ಷಿಯಲ್ ವಿಡಿಯೋ.. ಭರ್ಜರಿಯಾಗಿದೆ 2025ರ ಸುಜುಕಿ ಆಕ್ಸೆಸ್ 125 ಸ್ಕೂಟರ್, ಬೆಲೆ ಎಷ್ಟು?
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಈಚೆಗೆ ನವದೆಹಲಿಯಲ್ಲಿ ಅದ್ದೂರಿಯಾಗಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನವೀಕರಿಸಿದ 2025ರ ನೂತನ 'ಆಕ್ಸೆಸ್ 125' ಸ್ಕೂಟರ್‌ನ್ನು ಬಿಡುಗಡೆಗೊಳಿಸಿತ್ತು. ಇದು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಸದ್ಯ, ಕಂಪನಿಯು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಸ್ಕೂಟರ್‌ನ ಟೆಲಿವಿಷನ್ ಕಮರ್ಷಿಯಲ್ (ಟಿವಿಸಿ - ಟಿವಿ ಜಾಹೀರಾತು) ವಿಡಿಯೋವನ್ನು ಹಂಚಿಕೊಂಡಿದೆ.
ಈ ವಿಡಿಯೋದಲ್ಲಿ 'ಸುಜುಕಿ ಆಕ್ಸೆಸ್' ಸ್ಕೂಟರ್ ಮೇಲೆ ವ್ಯಕ್ತಿಯೊಬ್ಬ ಕುಳಿತುಕೊಂಡಿದ್ದು, ನನ್ನ ತಮ್ಮ ಆತನ ಪ್ರೇಯಸಿ ಭೇಟಿಗೆ ಬಂದಿದ್ದಾನೆ ಎಂದು ಹೇಳುತ್ತಾನೆ. ಆಗ ಸಹೋದರ ಮಹಡಿ ಮೇಲೆ ನಿಂತಿರುವ ತನ್ನ ಪ್ರೇಯಸಿಯತ್ತ ಗುಲಾಬಿ ಹೂವಿರುವ ಬೊಕ್ಕೆಯನ್ನು ಎಸೆಯುತ್ತಾನೆ. ಅಷ್ಟರಲ್ಲಿ ಯುವತಿಯ ತಂದೆ ಹೊರಬರುತ್ತಾರೆ.. ಆ ಇಬ್ಬರು ಸ್ಕೂಟರ್ ಹತ್ತಿಕೊಂಡು ಹೊರಟು ಹೋಗುತ್ತಾರೆ. ಆ ವ್ಯಕ್ತಿಯು ತನ್ನ ಸಹೋದರನಿಗೆ 'ಆಕ್ಸೆಸ್' ಪಿಕ್ಅಪ್ ನಿನ್ನ ಬ್ರೇಕ್ಅಪ್ ಅನ್ನು ತಪ್ಪಿಸಿತು ಎಂದು ಹೇಳುವುದನ್ನು ಕಾಣಬಹುದು.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನೂತನ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್, ರೂ.81,700 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್, ಸ್ಪೆಷಲ್ ಹಾಗೂ ರೈಡ್ ಕನೆಕ್ಟ್ ಎಡಿಷನ್ ಎಂಬ 3 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.
ಈ ಸ್ಕೂಟರ್ 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.3 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸರಿ ಸುಮಾರು 45 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಹುದು ಎಂಬ ವಿವರಗಳು ಲಭ್ಯವಾಗಿದೆ.

ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂದೆ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ಇ-ಆಕ್ಸೆಸ್ (Suzuki e-Access) ಕೂಡ ಅನಾವರಣ: ಇದೇ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಕಂಪನಿಯು ಪ್ರದರ್ಶಿಸಿತ್ತು. ಪ್ರಸ್ತುತ ಇದು ಬಿಡುಗಡೆಗೊಂಡಿಲ್ಲ. ಆದರೂ ನೂತನ ಇ-ಸ್ಕೂಟರ್ ಕುರಿತ ಎಲ್ಲ ವಿಚಾರಗಳನ್ನು ಕಂಪನಿಯು ಬಹಿರಂಗಪಡಿಸಿದೆ. ಈ ಸುಜುಕಿ ಇ-ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಕನಿಷ್ಠ ರೂ.1 ಲಕ್ಷ ಮತ್ತು ಗರಿಷ್ಠ ರೂ.1,20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ.

ಸುಜುಕಿ ಇ-ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ 3.07 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಇಕೋ, ರೈಡ್ ಎ ಮತ್ತು ರೈಡ್ ಬಿ ಎಂಬ 3 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಟಿಎಫ್‌ಟಿ ಡ್ಯಾಶ್‌ಬೋರ್ಡ್, ಸೈಡ್-ಸ್ಟ್ಯಾಂಡ್ ಅಲರ್ಟ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








