Yezdi Adventure: 2025ರ ಯೆಜ್ಡಿ ಅಡ್ವೆಂಚರ್ ಬೈಕ್ ಬಿಡುಗಡೆ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು.. ಬೆಲೆ ಇಷ್ಟೇನಾ?
ಯೆಜ್ಡಿ ಅಡ್ವೆಂಚರ್ (Yezdi Adventure) ಪ್ರೀಮಿಯಂ ಮೋಟಾರ್‌ಸೈಕಲ್ ಆಗಿದ್ದು, ಯುವ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇಂದು ಈ ಬೈಕ್‌ನ ನವೀಕರಿಸಿದ 2025ರ ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದ್ದು, ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ನೂತನ ಮೋಟಾರ್‌ಸೈಕಲ್‌ನ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ ಯೆಜ್ಡಿ ಅಡ್ವೆಂಚರ್ ಬೈಕ್ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ಇದು ರೂ.2.15 ಲಕ್ಷ ದರವನ್ನು (ಎಕ್ಸ್-ಶೋರೂಂ - ನವದೆಹಲಿ) ಪಡೆದಿದೆ. ಇಂದಿನಿಂದಲೇ ನೂತನ ಮೋಟಾರ್‌ಸೈಕಲ್‌ನ ಟೆಸ್ಟ್ ರೈಡ್ ಹಾಗೂ ಡೆಲಿವರಿ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ.

ಈ ಬೈಕ್ ಯುವ ಖರೀದಿದಾರರ ಕಣ್ಮನ ಸೆಳೆಯುವ ವಿನ್ಯಾಸ ಹೊಂದಿದೆ. ಎತ್ತರವಾಗಿರುವ ವಿಂಡ್ ಶೀಲ್ಡ್, ಟ್ವಿನ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಡುಯಲ್ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಫಾರೆಸ್ಟ್ ಗ್ರೀನ್, ವುಲ್ಫ್ ಗ್ರೇ, ಟೊರ್ನಾಡೊ ಬ್ಲ್ಯಾಕ್ ಮತ್ತು ಗ್ಲೇಸಿಯರ್ ವೈಟ್ ಸೇರಿದಂತೆ 6 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ನೂತನ ಯೆಜ್ಡಿ ಅಡ್ವೆಂಚರ್ ಮೋಟಾರ್‌ಸೈಕಲ್‌ನ ಎಂಜಿನ್‌ನ್ನು ಒಬಿಡಿ-2ಬಿ (OBD-2B) ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಲಾಗಿದೆ. ಇದು ಇಂಗಾಲದ ಹೊರಸೂಸುವಿಕೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದರೆ, ಸವಾರರನ್ನು ಎಚ್ಚರಿಸುತ್ತದೆ. ಅದರ ಹೊರತಾಗಿ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಹೊಸ ಬೈಕ್ 334 ಸಿಸಿ ಸಾಮರ್ಥ್ಯದ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ, ಇದು 29.60 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 29.60 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 33 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.
ಈ ಯೆಜ್ಡಿ ಅಡ್ವೆಂಚರ್ ಮೋಟಾರ್‌ಸೈಕಲ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಎಲ್ಇಡಿ ಡಿಸ್‌ಪ್ಲೇ, ಅಡ್ಜಸ್ಟಬಲ್ ವೈಸರ್, ಟ್ರಾಕ್ಷನ್ ಕಂಟ್ರೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಪಡೆದಿದೆ. ಹಾಗೆಯೇ ರೋಡ್, ರೈನ್ ಮತ್ತು ಆಫ್-ರೋಡ್ ಎಂಬ 3 ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮೋಡ್‌ಗಳನ್ನು ಒಳಗೊಂಡಿದೆ. ಇದು 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 15.5-ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ನೂತನ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) 7-ಸ್ಟೆಪ್ ಪ್ರಿಲೋಡ್ ಅಡ್ಜಸ್ಟಬಲ್ ಮಾನೋಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಹಾಗೆಯೇ ಮುಂದೆ 320 ಎಂಎಂ ಹಾಗೂ ಹಿಂದೆ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಇನ್ನು, ಹೊಸ ಯೆಜ್ಡಿ ಅಡ್ವೆಂಚರ್ ಮೋಟಾರ್‌ಸೈಕಲ್ ಬಿಡುಗಡೆಯಾಗಿರುವುದು ಯುವ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈ ಬೈಕ್‌ಗೆ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಹಾಗೂ ಸುಜುಕಿ ವಿ-ಸ್ಟ್ರೋಮ್ ಎಸ್‌ಎಕ್ಸ್ ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ. ಮುಂಬರುವ ದಿನಗಳಲ್ಲಿ ನೂತನ ಮೋಟಾರ್‌ಸೈಕಲ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








