Bajaj Pulsar: ನೂತನ ಬಜಾಜ್ ಪಲ್ಸರ್ ಬೈಕ್ ಕುರಿತ ಪ್ರಮುಖಾಂಶಗಳು.. ಬೆಲೆಯೂ ಕಮ್ಮಿ, 50 Km ಮೈಲೇಜ್?

ಈಚೆಗೆ ನವೀಕರಿಸಿದ 2026ರ ಬಜಾಜ್ ಪಲ್ಸರ್ 150 (Bajaj Pulsar 150) ಬೈಕ್‌ನ್ನು ಬಿಡುಗಡೆಗೊಳಿಸಲಾಯಿತು. ಇದು ಹೆಚ್ಚು ಅತ್ಯಾಕರ್ಷಕವಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಪಲ್ಸರ್ 150' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಬೈಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಬಜಾಜ್ ಪಲ್ಸರ್ 150' ಮೋಟಾರ್‌ಸೈಕಲ್‌, ಕೈಗೆಟುಕುವ ದರದಲ್ಲಿ ಗ್ರಾಹಕರ ಲಭ್ಯವಿದೆ. ರೂ.1.08 ಲಕ್ಷದಿಂದ ರೂ.1.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಸ್‌ಡಿ (ಸಿಂಗಲ್ ಡಿಸ್ಕ್), ಎಸ್‌ಡಿ ಯುಜಿ (ಸಿಂಗಲ್ ಡಿಸ್ಕ್ ಅಪ್‌ಗ್ರೇಡ್‌) ಮತ್ತು ಟಿಡಿ ಯುಜಿ (ಟ್ವಿನ್ ಡಿಸ್ಕ್ ಅಪ್‌ಗ್ರೇಡ್‌) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

New 2026 Bajaj Pulsar 150 Bike Top Things

ವಿನ್ಯಾಸ & ಬಣ್ಣಗಳು (Design & Colours):

ಈ ಬೈಕ್‌ನ್ನು ಯುವ ಗ್ರಾಹಕರು ಮೆಚ್ಚುವ ರೀತಿಯಲ್ಲಿದೆ. ನವೀನವಾಗಿರುವ 'ಗ್ರಾಫಿಕ್ಸ್'ನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟರ್ನ್ ಇಂಡಿಕೇಟರ್‌ಗಳು ಹಾಗೂ ಎಲ್‌ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. 17-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಸ್ಪಾರ್ಕ್ಲಿ ಬ್ಲ್ಯಾಕ್ ರೆಡ್, ಸ್ಪಾರ್ಕ್ಲಿ ಬ್ಲ್ಯಾಕ್ ಬ್ಲೂ ಹಾಗೂ ಸ್ಪಾರ್ಕ್ಲಿ ಬ್ಲ್ಯಾಕ್ ಸಿಲ್ವರ್ ಎಂಬ 3 ಅತ್ಯುತ್ತಮವಾದ ಬಣ್ಣಗಳೊಂದಿಗೂ ಸಿಗುತ್ತದೆ.

ಸುತ್ತಳತೆ (Dimension):

ಹೊಸ 'ಪಲ್ಸರ್ 150' ಬಹಳಷ್ಟು ವಿಶಾಲ ಗಾತ್ರದಲ್ಲಿದೆ. 2,035 ಎಂಎಂ ಉದ್ದ, 750 ಎಂಎಂ ಅಗಲ ಹಾಗೂ 1,115 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,345 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 150 ಕೆಜಿ ತೂಕವಿದೆ.

ಕಾರ್ಯಕ್ಷಮತೆ & ಮೈಲೇಜ್ (Performance & Mileage):

ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 149.5-ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 13.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 13.25 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಗರಿಷ್ಠ 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು (Features):

ಈ ಬೈಕ್ ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಬಹುಮುಖ್ಯವಾಗಿ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿದೆ. ಸರಿ ಸುಮಾರು 15 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 115 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):

ನೂತನ 'ಪಲ್ಸರ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಬೈಕ್‌ಗಳು (Rival Bikes)

ಇದಕ್ಕೆ ಹಲವು ಪ್ರತಿಸ್ಪರ್ಧಿಗಳಿವೆ. ಹೋಂಡಾ ಯುನಿಕಾರ್ನ್, ಹೀರೋ ಎಕ್ಸ್‌ಟ್ರೀಮ್ 160ಆರ್, ಟಿವಿಎಸ್ ಅಪಾಚೆ ಆರ್‌ಟಿಆರ್ 160, ಹೋಂಡಾ ಎಸ್‌ಪಿ160, ಸುಜುಕಿ ಜಿಕ್ಸರ್ ಹಾಗೂ ಯಮಹಾ ಎಕ್ಸ್ಎಸ್ಆರ್ 155 ಮೋಟಾರ್‌ಸೈಕಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Friday, December 26, 2025, 12:33 [IST]
English summary
New 2026 bajaj pulsar 150 bike top things
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+