Bajaj Chetak: ಸದ್ದಿಲ್ಲದೇ ಹೊಸ ಬಜಾಜ್ ಚೇತಕ್ ಇ-ಸ್ಕೂಟರ್ ಬಿಡುಗಡೆಗೆ ತಯಾರಿ.. ಬೆಲೆಯೂ ಕಮ್ಮಿ?

ಬಜಾಜ್ ಚೇತಕ್ (Bajaj Chetak) ಜಗಮೆಚ್ಚಿದ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇದು ಚೇತಕ್ 3501, ಚೇತಕ್ 3502, ಚೇತಕ್ 3503 ಹಾಗೂ ಚೇತಕ್ 3001 ಎಂಬ ಆಯ್ಕೆಯಲ್ಲಿಯೂ ಲಭ್ಯವಿದೆ. ಸದ್ಯ, 'ಚೇತಕ್'ನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಕಂಪನಿಯು ತಯಾರಿ ಮಾಡಿಕೊಳ್ಳುತ್ತಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಈಚೆಗೆ, ನೂತನ ತಲೆಮಾರಿನ (New Generation) ಬಜಾಜ್ ಚೇತಕ್ ಇ-ಸ್ಕೂಟರ್ ಪ್ರಾಯೋಗಿಕ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಅದರ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲೂ ಸೋರಿಕೆಯಾಗಿವೆ. ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹೊಸ ಸ್ಕೂಟರ್ ಆಕರ್ಷಕವಾದ ವಿನ್ಯಾಸವನ್ನು ಹೊಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

New Bajaj Chetak Electric Scooter Spied On Testing Launch Soon Details

ಇದರ ಎಲ್ಇಡಿ ಹೆಡ್‌ಲೈಟ್‌ಗಳು & ಡಿಆರ್‌ಎಲ್‌ಗ‌ಳು ಸ್ಟ್ಯಾಂಡರ್ಡ್ 'ಚೇತಕ್'ಗೆ ಹೋಲಿಕೆಯಾಗುತ್ತದೆ. ಅಲ್ಲಿ ಯಾವುದೇ ಬದಲಾವಣೆಗಳನ್ನು ಪಡೆದಿಲ್ಲ. ರೇರ್ ಗ್ರಾಬ್ ರೈಲ್‌ನ್ನು ಸಹ ಹಾಗೆಯೇ ಉಳಿಸಿಕೊಳ್ಳಲಾಗಿದೆ. ಬಹುಮುಖ್ಯವಾಗಿ ಮರುವಿನ್ಯಾಸಗೊಳಿಸಲಾದ ಎಲ್ಇಡಿ ಟೈಲ್ ಲೈಟ್‌ಗನ್ನು ಪಡೆದಿದೆ. ಇದರೊಂದಿಗೆ ನಂಬರ್ ಪ್ಲೇಟ್ ಹೋಲ್ಡರ್‌ನ್ನು ಪರಿಷ್ಕರಿಸಲಾಗಿದೆ.

ಹೊಸ 'ಬಜಾಜ್ ಚೇತಕ್'ನ ಸೈಡ್ ಬಾಡಿ ಪ್ಯಾನೆಲ್‌ಗಳಲ್ಲಿಯೂ ಪ್ರಮುಖ ಮಾರ್ಪಾಡುಗಳನ್ನು ಮಾಡಲಾಗಿಲ್ಲ. ಹೆಚ್ಚು-ಕಮ್ಮಿ ಸ್ಟ್ಯಾಂಡರ್ಡ್ 'ಚೇತಕ್'ನಂತಿದೆ. ಅದೇ ರೀತಿಯಲ್ಲಿ ಟಿಎಫ್‌ಟಿ ಡಿಸ್‌ಪ್ಲೇ ಪರ್ಯಾಯವಾಗಿ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿದೆ. ಜೊತೆಗಿದು ಕೀಲೆಸ್ ಇಗ್ನಿಷನ್ ಆಯ್ಕೆಯನ್ನು ಪಡಿದಿಲ್ಲ.

New Bajaj Chetak Electric Scooter Spied On Testing Launch Soon Details

ನೂತನ 'ಬಜಾಜ್ ಚೇತಕ್' ಎಲೆಕ್ಟ್ರಿಕ್ ಸ್ಕೂಟರ್, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಅದಕ್ಕಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿರುವ ನಿರೀಕ್ಷೆಯಿದೆ. ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿರುವ ಸಾಧ್ಯತೆಯಿದೆ.

ಈವರೆಗೆ ಹೊಸ ಸ್ಕೂಟರ್‌ನ ಹೆಸರೇನು ಎಂಬುದನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಆದರೂ 'ಬಜಾಜ್ ಚೇತಕ್ 3002' ಎಂದು ನಾಮಕರಣ ಮಾಡಬಹುದು ಎಂದು ಅಂದಾಜಿಸಲಾಗಿದೆ. ರೂ.1 ಲಕ್ಷ (ಎಕ್ಸ್-ಶೋರೂಂ) ಆಸುಪಾಸು ಬೆಲೆಗೆ ಗ್ರಾಹಕರ ಖರೀದಿಗೆ ಲಭ್ಯವಾಗಬಹುದು. 2026ರ ಮೊದಲರ್ಧದಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ.

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. 3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಅಥವಾ 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 150 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುವ ಎಲ್ಲ ಲಕ್ಷಣಗಳಿವೆ.

ಪ್ರಸ್ತುತ ಖರೀದಿಗೆ ದೊರೆಯುವ 'ಬಜಾಜ್ ಚೇತಕ್ 3001' ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.02 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಬ್ರೂಕ್ಲಿನ್ ಬ್ಲ್ಯಾಕ್, ಅಜುರೆ ಬ್ಲೂ, ಸೈಬರ್ ವೈಟ್, ಲೈಮ್ ಯೆಲ್ಲೋ ಹಾಗೂ ರೇಸಿಂಗ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,355 ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 123 ಕೆಜಿ ತೂಕವಿದೆ.

ನೂತನ 'ಚೇತಕ್ 3001' ಇ-ಸ್ಕೂಟರ್ 3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 127 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 3.4 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಟಿಎಫ್‌ಟಿ ಡಿಸ್‌ಪ್ಲೇ ಹಾಗೂ ಮೊಬೈಲ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Source: Rushlane

More from DriveSpark

Article Published On: Wednesday, October 22, 2025, 14:00 [IST]
English summary
New bajaj chetak electric scooter spied on testing launch soon details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+