Bajaj: ಬಿಡುಗಡೆಯೇ ಆಗಿಲ್ಲ.. ಸದ್ದಿಲ್ಲದೇ ಡೀಲರ್‌ಶಿಪ್‌ಗೆ ಬಂತು ಹೊಸ ಬಜಾಜ್ ಬೈಕ್, ಯಾವುದು.. ಹೇಗಿದೆ ನೋಡಿ!

ಬಜಾಜ್ ಡೊಮಿನಾರ್ 250 (Bajaj Dominar 250) ಪ್ರೀಮಿಯಂ ಬೈಕ್ ಆಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ವಲ್ಪ ಮಟ್ಟಿಗೆ ಕೈಗೆಟುಕುವ ಬೆಲೆಯಲ್ಲಿಯೇ ಸಿಗಲಿದ್ದು, ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಸದ್ಯ, ಬಜಾಜ್ ಕಂಪನಿಯು ಈ ಮೋಟಾರ್‌ಸೈಕಲ್‌ನ ನವೀಕರಿಸಿದ 2025ರ ಮಾಡೆಲ್‌ನ್ನು ಬಿಡುಗಡೆಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಕೆಲವೇ ದಿನಗಳಲ್ಲಿ ನೂತನ ಬಜಾಜ್ ಡೊಮಿನಾರ್ 250 ಬೈಕ್ ಅದ್ದೂರಿಯಾಗಿಯೂ ಮಾರಾಟಕ್ಕೆ ಬರಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಈಗಾಗಲೇ, 2025ರ ಹೊಚ್ಚ ಹೊಸ 'ಬಜಾಜ್ ಡೊಮಿನಾರ್ 250' ಮೋಟಾರ್‌ಸೈಕಲ್‌ಗಳನ್ನು ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ತಲುಪಿಸುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿದೆ. ಇದು ಬಹುತೇಕ ಪ್ರಸ್ತುತವಿರುವ ಮಾಡೆಲ್‌ನಂತೆಯೇ ವಿನ್ಯಾಸವನ್ನು ಹೊಂದಿದೆ. ಆದರೆ, ವೈಶಿಷ್ಟ್ಯಗಳಲ್ಲಿ ಹಲವು ಪ್ರಮುಖವಾದ ಬದಲಾವಣೆಗಳನ್ನು ಪಡೆದುಕೊಂಡಿದೆ.

New Bajaj Dominar 250 Bike Reached Dealerships Launch Soon Expected Price Details

ಈ ನೂತನ ಬೈಕ್, 'ಬಜಾಜ್ ಪಲ್ಸರ್ ಎನ್ಎಸ್200' ಮೋಟಾರ್‌ಸೈಕಲ್‌ ಹೊಂದಿರುವುದಂತೆ 'ಇನ್ಸ್ಟ್ರುಮೆಂಟ್ ಕನ್ಸೋಲ್'ನ್ನು ಹೊಂದಿದೆ. ಇದು ಟರ್ನ್-ಬೈ-ಟರ್ನ್ ನ್ಯಾವಿಗೇಷನ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹಾಗೂ ಕರೆ/ಎಸ್ಎಂಎಸ್ ಅಲರ್ಟ್‌ನ್ನು ಬೆಂಬಲಿಸುತ್ತದೆ. ಇದರೊಟ್ಟಿಗೆ ಹೊಸದಾದ ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್‌ನ್ನು ಪಡೆದಿದೆ. ರೋಡ್, ರೈನ್ ಮತ್ತು ಆಫ್-ರೋಡ್ ಎಂಬ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮೋಡ್‌ಗಳನ್ನು ಒಳಗೊಂಡಿದೆ.

ಹೊಸ ಬಜಾಜ್ ಡೊಮಿನಾರ್ 250 ಬೈಕ್‌ನ ಪವರ್‌ಟ್ರೇನ್‌ ಆಯ್ಕೆಯಲ್ಲಿಯೂ ಯಾವುದೇ ಮಾರ್ಪಾಡುಗಳು ಇರುವುದಿಲ್ಲ ಎಂಬ ವಿಚಾರವು ಗೊತ್ತಾಗಿದೆ. ಈಗಿರುವ ಮಾಡೆಲ್, 248.77 ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 27 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 23.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 35 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

New Bajaj Dominar 250 Bike Reached Dealerships Launch Soon Expected Price Details

ನೂತನ ಡೊಮಿನಾರ್ 250 ಮೋಟಾರ್‌ಸೈಕಲ್‌ ಮುಂಭಾಗ (ಫ್ರಂಟ್) ಇನ್ವೆರ್ಟೆಡ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಜೊತೆಗೆ 7-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.

ಈ ಬಜಾಜ್ ಡೊಮಿನಾರ್ 250 ಬೈಕ್‌ ಸಹ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗಲಿದೆ. ಡೀಲರ್‌ಶಿಪ್ ಮೂಲಗಳ ಪ್ರಕಾರ, ರೂ.1.93 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಇದು ಸದ್ಯವಿರುವ ಮಾಡೆಲ್‌ಗಿಂತ ರೂ.7,000 ದುಬಾರಿಯಾಗಿದೆ. ನೂತನ ಮೋಟಾರ್‌ಸೈಕಲ್‌ ಮಾರಾಟಕ್ಕೆ ಬಂದ ಮೇಲೆ ಬೆಲೆಯ ಕುರಿತಂತೆ ಸ್ಪಷ್ಟವಾದ ಮಾಹಿತಿಯು ಸಿಗಲಿವೆ.

New Bajaj Dominar 250 Bike Reached Dealerships Launch Soon Expected Price Details

ಇನ್ನು, 2025ರ ಹೊಚ್ಚ ಹೊಸ 'ಬಜಾಜ್ ಡೊಮಿನಾರ್ 250' ಬೈಕ್‌ ಬಿಡುಗಡೆಯಾಗುತ್ತಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಈ ಮೋಟಾರ್‌ಸೈಕಲ್‌ನ್ನು ಅಧಿಕೃತವಾಗಿ ಪರಿಚಯಿಸಿದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: BikeDekho

More from DriveSpark

Article Published On: Wednesday, April 30, 2025, 10:48 [IST]
English summary
New bajaj dominar 250 bike reached dealerships launch soon expected price details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+