Hero: 'ರಸ್ತೆ ರಾಜ' ಹೊಸ ಹೀರೋ ಕರಿಜ್ಮಾ ಬೈಕ್ ಕುರಿತ ಪ್ರಮುಖಾಂಶಗಳಿವು.. ನಿಮಗೆ ಯಾರು ಹೇಳಲ್ಲ!
ಹೀರೋ ಕರಿಜ್ಮಾ ಎಕ್ಸ್ಎಂಆರ್ 210 (Hero Karizma XMR 210) ಯುವಕರ ನೆಚ್ಚಿನ ಬೈಕ್ ಆಗಿದೆ. ಸೋಮವಾರ ಈ ಮೋಟಾರ್‌ಸೈಕಲ್‌ನ 2025ರ ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದು ಒಂದಷ್ಟು ಹೊಸ ನವೀಕರಣಗಳನ್ನು ಪಡೆದುಕೊಂಡು ಮಾರಾಟಕ್ಕೂ ಬಂದಿದ್ದು, ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ನೀವು ನೂತನ ಹೀರೋ ಕರಿಜ್ಮಾ ಎಕ್ಸ್ಎಂಆರ್ 210 ಬೈಕ್‌ನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಹಾಗೂ ವಿಶೇಷತೆಗಳನ್ನು ಒಳಗೊಂಡ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants): ಹೊಸ 2025ರ ಹೀರೋ ಕರಿಜ್ಮಾ ಎಕ್ಸ್ಎಂಆರ್ 210 ಬೈಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ಕನಿಷ್ಠ ರೂ.1.81 ಲಕ್ಷ ಹಾಗೂ ಗರಿಷ್ಠ ರೂ.2.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೇಸ್, ಟಾಪ್ ಮತ್ತು ಕಾಂಬ್ಯಾಟ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors): ಈ ಮೋಟಾರ್‌ಸೈಕಲ್ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಅದಕ್ಕಾಗಿ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್, ಮಸ್ಕ್ಯುಲರ್ ಫ್ಯುಯೆಲ್ ಟ್ಯಾಂಕ್ ಮತ್ತು ಸ್ಪ್ಲಿಟ್-ಸೀಟ್ ಸೆಟಪ್‌ನ್ನು ಪಡೆದಿದೆ. ಇದರೊಂದಿಗೆ ಐಕಾನಿಕ್ ಯೆಲ್ಲೋ, ಟರ್ಬೊ ರೆಡ್ ಹಾಗೂ ಮ್ಯಾಟ್ ಫ್ಯಾಂಟಮ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಾಗುತ್ತದೆ. ವಿಶೇಷವಾಗಿ ಕಾಂಬ್ಯಾಟ್ ರೂಪಾಂತರ, ಸಿಲ್ವರ್ ಗ್ರಾಫಿಕ್ಸ್‌ನೊಂದಿಗೆ ಕಾಂಬ್ಯಾಟ್ ಗ್ರೇ ಬಣ್ಣವನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance): ನೂತನ ಹೀರೋ ಕರಿಜ್ಮಾ ಎಕ್ಸ್ಎಂಆರ್ 210 ಬೈಕ್, 210 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 25.15 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 20.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 41.55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು (Features): ಈ ಮೋಟಾರ್‌ಸೈಕಲ್ ಹತ್ತಾರು ವಿಭಿನ್ನವಾದ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ಒಳಗೊಂಡಿದೆ. ಇದು ಕಾಲ್-ಎಂಎಂಎಸ್ ಅಲರ್ಟ್ & ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ಇನ್ನಿತರೇ ವಿವರಗಳನ್ನು ಒದಗಿಸಲು ನೆರವಾಗುತ್ತದೆ. ಹೊಸ ಕರಿಜ್ಮಾ ಬೈಕ್ 163.5 ಕೆಜಿ ತೂಕವಿದ್ದು, 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ನೂತನ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) ಅಪ್-ಸೈಡ್ ಡೌನ್ ಫೋರ್ಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಎರಡು ತುದಿಗಾಲಲ್ಲಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಇನ್ನು, ಹೊಸ 'ಹೀರೋ ಕರಿಜ್ಮಾ ಎಕ್ಸ್ಎಂಆರ್ 210 ಬೈಕ್' ಬಿಡುಗಡೆಯಾಗಿರುವುದು ದೇಶೀಯ ಯುವ ಗ್ರಾಹಕರಿಗೆ ಹೆಚ್ಚಿನ ಸಂತಸ ತಂದಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೂ ಬಂದಿದೆ. ಮುಂಬರುವ ದಿನಗಳಲ್ಲಿ ಈ ಮೋಟಾರ್‌ಸೈಕಲ್‌ನ್ನು ದೊಡ್ಡ ಸಂಖ್ಯೆಯಲ್ಲಿ ಖರೀದಿದಾರರು ಕೊಂಡುಕೊಂಡರೂ ಆಶ್ಚರ್ಯಪಡಬೇಕಾಗಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








