New Hero Splendor EV: ಶೀಘ್ರದಲ್ಲೇ ಹೊಚ್ಚ ಹೊಸ ಹೀರೋ ಸ್ಪ್ಲೆಂಡರ್ ಇ-ಬೈಕ್ ಬಿಡುಗಡೆ.. ಕಡಿಮೆ ಬೆಲೆ, ಭಾರೀ ರೇಂಜ್?

ಹೀರೋ ಮೋಟೋಕಾರ್ಪ್ (Hero MotoCorp), ನಂಬರ್ 1 ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗಳಿಸುವ ಸ್ಪ್ಲೆಂಡರ್ (Splendor) ಮಧ್ಯಮ ವರ್ಗದ ಜನರ ಫೇವರಿಟ್ ಮೋಟಾರ್‌ಸೈಕಲ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ದಿಲ್ಲದೇ ಇದೇ ಬೈಕ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಲು ಕಂಪನಿ ಕೂಡ ಸಿದ್ದತೆಗಳನ್ನು ನಡೆಸುತ್ತದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಸದ್ಯ, ಹೀರೋ ಮೋಟೋಕಾರ್ಪ್ ಪ್ರಯಾಣಿಕ ಸ್ನೇಹಿಯಾಗಿರುವ ವಿವಿಧ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಸ್ಪ್ಲೆಂಡರ್ ಇವಿಯನ್ನು ಮಾರಾಟಕ್ಕೆ ತರುವುದು ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ರಾಜಸ್ಥಾನದ ಜೈಪುರದಲ್ಲಿರುವ 'ಹೀರೋ ಟೆಕ್ನಾಲಜಿ ಸೆಂಟರ್‌'ನಲ್ಲಿ ತಂತ್ರಜ್ಞನರು ಕಾರ್ಯನಿರತರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

New Hero Splendor Electric Bike Launch Soon Expected Price And Range Details

ಎಲ್ಲವು ಅಂದುಕೊಂಡಂತೆ ನಡೆದರೆ ಮೊದಲ ಹೀರೋ ಸ್ಪ್ಲೆಂಡರ್ ಎಲೆಕ್ಟ್ರಿಕ್ ಬೈಕ್ (Hero Splendor Electric Bike), 2027ರಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಂಪನಿಯು ಗ್ರಾಹಕರ ಬೇಡಿಕೆಯನ್ನು ಪೂರೈಸಲು ವಾರ್ಷಿಕ ಸರಿ ಸುಮಾರು 2,00,000 ಯುನಿಟ್ ಸ್ಪ್ಲೆಂಡರ್ ಇವಿಗಳನ್ನು ತಯಾರಿಸಲು ಉದ್ದೇಶಿಸಿದೆ ಎಂದು ಹೇಳಲಾಗಿದೆ.

ನೂತನ ಹೀರೋ ಸ್ಪ್ಲೆಂಡರ್ ಇವಿ ಕಾರ್ಯಕ್ಷಮತೆ ಕುರಿತಂತೆ ಯಾವುದೇ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಆದರೂ ಈ ಬೈಕ್, 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ. ಸಂಪೂರ್ಣ ಚಾರ್ಜ್‌ನಲ್ಲಿ 120 ರಿಂದ 180 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎನ್ನಲಾಗಿದೆ. ಜೊತೆಗೆ ರೂ.1 ಲಕ್ಷ ಬೆಲೆಯಲ್ಲಿಯೂ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

New Hero Splendor Electric Bike Launch Soon Expected Price And Range Details

ಹೀರೋ ಸ್ಪ್ಲೆಂಡರ್ ಇವಿ ಮಾತ್ರವಲ್ಲದೆ, ವಿಡಾ ಡರ್ಟ್ (Vida Dirt) ಹೆಸರಿನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಕಂಪನಿಯು ಅಭಿವೃದ್ಧಿಪಡಿಸುತ್ತಿದೆ. ಇದನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟಗೊಳಿಸಲು ಉದ್ದೇಶಿಸಿದೆ ಎನ್ನಲಾಗಿದೆ. ಈ ಬೈಕ್ 2026ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ವರ್ಷವೊಂದಕ್ಕೆ ಸರಿ ಸುಮಾರು 10,000 ಯುನಿಟ್ 'ವಿಡಾ ಡರ್ಟ್' ಎಲೆಕ್ಟ್ರಿಕ್ ಬೈಕ್‌ನ್ನು ಉತ್ಪಾದಿಸಲು ಹೀರೋ ಯೋಜಿಸಿದೆ ಎಂದು ಹೇಳಲಾಗಿದೆ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಸಾಮಾನ್ಯ 'ಹೀರೋ ಸ್ಪ್ಲೆಂಡರ್' ಬೈಕ್, ಮೂರು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸ್ಪ್ಲೆಂಡರ್ ಪ್ಲಸ್ (Splendor Plus) ಮಾಡೆಲ್, ರೂ.76,000 ದಿಂದ 79,500 ವರೆಗೆ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದರೊಟ್ಟಿಗೆ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus Xtec) ಮಾಡೆಲ್ ಬಗ್ಗೆ ಮಾತನಾಡುವುದಾದರೆ, ಇದು ರೂ.80,000 ದಿಂದ ರೂ..83,500 ವರೆಗೆ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಹಾಗೆಯೇ 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಕಡೆಯದಾಗಿ ಹೀರೋ ಸೂಪರ್ ಸ್ಪ್ಲೆಂಡರ್ (Hero Super Splendor) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.82,500 ರಿಂದ ರೂ.86,500 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, January 22, 2025, 12:06 [IST]
English summary
New hero splendor electric bike launch soon expected price and range details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+