Hero: ಹೊಸ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಪ್ರದರ್ಶನ.. ಕೈಗೆಟುಕುವ ಬೆಲೆಗೆ ಮಾರಾಟಕ್ಕೆ ಬರುತ್ತಾ?

ಹೀರೋ ಮೋಟೊಕಾರ್ಪ್ (Hero MotoCorp), ನಂ.1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ಜೂಮ್ 160, ಜೂಮ್ 125 ಹಾಗೂ ಎಕ್ಸ್‌ಟ್ರೀಮ್ 250ಆರ್ ದ್ವಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸಿತ್ತು. ಇದರೊಟ್ಟಿಗೆ ವಿಡಾ ಜಡ್ (Vida Z) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಪ್ರದರ್ಶನ ಮಾಡಿದೆ.

ಹೊಚ್ಚ ಹೊಸ ಹೀರೋ ವಿಡಾ ಜಡ್ (Hero Vida Z) ಇ-ಸ್ಕೂಟರ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಫ್ಲಾಟ್ ಸೀಟ್ ಮತ್ತು ಇಂಟಿಗ್ರೇಟೆಡ್ ಬ್ಯಾಕ್‌ರೆಸ್ಟ್‌ನ್ನು ಹೊಂದಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

New Hero Vida Z Electric Scooter At Auto Expo Details

ನೂತನ ವಿಡಾ ಜಡ್ ಎಲೆಕ್ಟ್ರಿಕ್ ಸ್ಕೂಟರ್ ಕಾರ್ಯಕ್ಷಮತೆ ಕುರಿತಂತೆಯೂ ಕಂಪನಿಯು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಸ್ಕೂಟರ್ ಶಕ್ತಿಯುತವಾದ 2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 4.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರುವ ಸಾಧ್ಯತೆಯಿದ್ದು, ಪಿಎಂಎಸ್ಎಂ ಮೋಟಾರ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿರಬಹುದು ಎನ್ನಲಾಗಿದೆ. ಟಚ್‌ಸ್ಕ್ರೀನ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ನ್ಯಾವಿಗೇಷನ್ ಹಾಗೂ ಜಿಯೋಫೆನ್ಸಿಂಗ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ. ರೂ.1.50 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

New Hero Vida Z Electric Scooter At Auto Expo Details

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಹೊಸ ಹೀರೋ ವಿಡಾ ವಿ2 (Hero Vida V2) ಎಲೆಕ್ಟ್ರಿಕ್ ಸ್ಕೂಟರ್ ಕೂಡ ಖರೀದಿಗೆ ದೊರೆಯುತ್ತದೆ. ಇದು ವಿ2 ಲೈಟ್ (V2 Lite), ವಿ2 ಪ್ಲಸ್ (V2 Plus) ಮತ್ತು ವಿ2 ಪ್ರೊ (V2 Pro) ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ.

ಹೀರೋ ವಿಡಾ ವಿ2 ಲೈಟ್: ಈ ಎಲೆಕ್ಟ್ರಿಕ್ ಸ್ಕೂಟರ್, ರೂ.96 ಸಾವಿರ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 94 ಕಿ.ಮೀ ಓಡುತ್ತದೆ. 69 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

New Hero Vida Z Electric Scooter At Auto Expo Details

ಹೀರೋ ವಿಡಾ ವಿ2 ಪ್ಲಸ್: ಇದು ರೂ.1.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 3.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 143 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇಕೋ, ರೈಡ್ & ಸ್ಪೋರ್ಟ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ವಿಡಾ ವಿ2 ಪ್ರೊ: ಈ ಎಲೆಕ್ಟ್ರಿಕ್ ಸ್ಕೂಟರ್, ರೂ.1.35 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 3.94 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 165 ಕಿ.ಮೀ ಕ್ರಮಿಸುತ್ತದೆ. 90 ಟಾಪ್ ಸ್ಪೀಡ್‌ನ್ನು ಹೊಂದಿದೆ. ಮ್ಯಾಟ್ ನೆಕ್ಸಸ್ ಬ್ಲೂ-ಗ್ರೇ & ಗ್ಲೋಸಿ ಸ್ಪೋರ್ಟ್ಸ್ ರೆಡ್ ಸೇರಿದಂತೆ ವಿವಿಧ ಬಣ್ಣಗಳನ್ನು ಪಡೆದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, January 22, 2025, 9:00 [IST]
English summary
New hero vida z electric scooter at auto expo details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+