Hero Xoom 125: ಅಗ್ಗದ ದರಕ್ಕೆ ಹೀರೋ ಜೂಮ್ 125 ಸ್ಕೂಟರ್ ಮಾರಾಟಕ್ಕೆ ಬಂದಿದೆ.. ಏನಿದರ ವಿಶೇಷತೆಗಳು?
ಹೀರೋ ಮೋಟೋಕಾರ್ಪ್ (Hero MotoCorp), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ನವ ದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ಕಂಪನಿಯು ಹೊಚ್ಚ ಹೊಸ ಜೂಮ್ 125 ಸ್ಕೂಟರ್‌ನ್ನು ಬಿಡುಗಡೆ ಮಾಡಿದೆ. ಇದು ಅತಿ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಗ್ರಾಹಕರು ಕೂಡ ಈ ಸ್ಕೂಟರ್‌ನ್ನು ಸುಲಭವಾಗಿ ಖರೀದಿ ಮಾಡಬಹುದು. ಬನ್ನಿ.. ಈ ನೂತನ ಸ್ಕೂಟರ್ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯಗಳ (Features) ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಬೆಲೆ (Price): ನೂತನ ಹೀರೋ ಜೂಮ್ 125 (Hero Xoom 125) ಸ್ಕೂಟರ್ ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.86,900 ಎಕ್ಸ್ ಶೋರೂಂ ದರವನ್ನು ಹೊಂದಿದೆ. ವಿಎಕ್ಸ್ (VX) ಮತ್ತು ಜಡ್ಎಕ್ಸ್ (ZX) ಎಂಬ ಎರಡು ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance): ಈ ಸ್ಕೂಟರ್ 124.6 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7,250 ಆರ್‌ಪಿಎಂನಲ್ಲಿ 9.8 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 7.6 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವಿನ್ಯಾಸ (Design): ಹೊಸ ಹೀರೋ ಜೂಮ್ 125 ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಇದು ಸ್ಪೋರ್ಟಿ ಎಲ್ಇಡಿ ಹೆಡ್‌ಲೈಟ್, ಅಂಗುಲರ್ ಸೈಡ್ ಪ್ಯಾನೆಲ್‌ಗಳು ಮತ್ತು ಸ್ಲಿಮ್ ಡುಯಲ್ ಎಲ್ಇಡಿ ಟೈಲ್ ಲೈಟ್‌ಗಳನ್ನು ಹೊಂದಿದೆ. ಮೆಟಾಲಿಕ್ ಟರ್ಬೊ ಬ್ಲೂ & ಮ್ಯಾಟ್ ಸ್ಟಾರ್ಮ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ವೈಶಿಷ್ಟ್ಯಗಳು (Features): ನೂತನ ಸ್ಕೂಟರ್ ಹಲವು ಗ್ರಾಹಕ ಸ್ನೇಹಿ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ಪಡೆದಿದೆ. ಇದು ಬ್ಲೂಟೂತ್ ಕನೆಕ್ಟಿವಿಟಿ, ಕಾಲ್/ಎಸ್ಎಂಎಸ್ ಅಲರ್ಟ್ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ & ಅಂಡರ್ ಸೀಟ್ ಸ್ಟೋರೇಜ್ ಲೈಟ್ ಕೂಡ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಈ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ನೂತನ ಹೀರೋ ಜೂಮ್ 160 ಸ್ಕೂಟರ್ ಸಹ ಮಾರಾಟಕ್ಕೆ: ಇದು ರೂ.1.48 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 156-ಸಿಸಿ ಸಾಮರ್ಥ್ಯದ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, ಸೈಲೆಂಟ್ ಸ್ಟಾರ್ಟರ್, ಕೀ-ಲೆಸ್ ಇಗ್ನಿಷನ್, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








