Hero: ನೂತನ ಹೀರೋ ಜೂಮ್ 160 ಸ್ಕೂಟರ್ ಕುರಿತ ಪ್ರಮುಖಾಂಶಗಳು.. ಯಾರು ಹೇಳಲ್ಲ!
ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero MotoCorp), ನಂ.1 ಸ್ಥಾನದಲ್ಲಿದೆ. 'ಸ್ಪ್ಲೆಂಡರ್' ಬೈಕ್ ಮಾರಾಟದ ಮೂಲದ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಸ್ಕೂಟರ್ ವಿಭಾಗದಲ್ಲಿಯೂ ನಿಧಾನವಾಗಿ ತನ್ನದೆಯಾದ ಛಾಪನ್ನು ಮೂಡಿಸಲು ಮುಂದಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ 'ಜೂಮ್ 160' ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಬನ್ನಿ.. ಈ ಸ್ಕೂಟರ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.
ದರ: ನೂತನ ಹೀರೋ ಜೂಮ್ 160 (Hero Xoom 160) ಮ್ಯಾಕ್ಸಿ ಸ್ಕೂಟರ್ ಆಗಿದ್ದು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುತ್ತದೆ. ರೂ.1.48 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಪುರುಷ ಗ್ರಾಹಕರು ಮಾತ್ರವಲ್ಲದೆ, ಮಹಿಳೆಯರು ಕೂಡ ತಮ್ಮ ದಿನನಿತ್ಯ ಬಳಕೆಗಾಗಿ ಕೊಂಡುಕೊಳ್ಳಬಹುದು.

ವಿನ್ಯಾಸ: ಹೊಸ ಹೀರೋ ಜೂಮ್ 160 ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್-ಎಲ್ಇಡಿ ಹೆಡ್‌ಲೈಟ್ ಹಾಗೂ ವಿಂಡ್‌ಸ್ಕ್ರೀನ್‌ನ್ನು ಪಡೆದಿದೆ. ಕ್ಯಾಸ್ಟ್ ಪರ್ಲ್ ಸಮ್ಮಿಟ್ ವೈಟ್, ಕ್ಯಾಸ್ಟ್ ಕ್ಯಾನ್ಯನ್ ರೆಡ್, ಕ್ಯಾಸ್ಟ್ ವೊಲ್ಕಾನಿಕ್ ಗ್ರೇ ಮತ್ತು ಕ್ಯಾಸ್ಟ್ ಮ್ಯಾಟ್ ರೈನ್ ಫಾರೆಸ್ಟ್ ಗ್ರೀನ್ ಬಣ್ಣದ ಆಯ್ಕೆಯಲ್ಲಿಯೂ ಸಿಗುತ್ತದೆ.
ಪವರ್‌ಟ್ರೇನ್: ಈ ಸ್ಕೂಟರ್, 156-ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 14 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 13.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದ್ದು, 40 ಕೆಎಂಪಿಎಲ್‌ವರೆಗೆ ನೀಡಬಹುದು ಎಂದು ಅಂದಾಜಿಸಲಾಗಿದೆ.

ವೈಶಿಷ್ಟ್ಯಗಳು: ನೂತನ ಜೂಮ್ 160 ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಐ3ಎಸ್ ಸಿಸ್ಟಮ್, ಸೈಲೆಂಟ್ ಸ್ಟಾರ್ಟರ್, ಕೀ-ಲೆಸ್ ಇಗ್ನಿಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸೀಟ್ ಹೈಟ್ 787 ಎಂಎಂ ಹಾಗೂ ಗ್ರೌಂಡ್ ಕ್ಲಿಯರೆನ್ಸ್ 155 ಎಂಎಂ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್: ಈ ಹೀರೋ ಜೂಮ್ 160 ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬೈಕ್‌ಗಳನ್ನು ಹೊಂದಿದೆ. ಜೊತೆಗೆ 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಹೀರೋ ಜೂಮ್ 125 (Hero Xoom 125) ಸ್ಕೂಟರ್ ಕೂಡ ಖರೀದಿಗೆ ಲಭ್ಯ: ಇದು ರೂ.86,900 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ವಿಎಕ್ಸ್ ಹಾಗೂ ಜಡ್ಎಕ್ಸ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 124.6 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 7.6 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಈ ಜೂಮ್ 125 ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ & ಅಂಡರ್ ಸೀಟ್ ಸ್ಟೋರೇಜ್ ಲೈಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಅಥವಾ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








