ಸ್ಪ್ಲೆಂಡರ್‌ ಪ್ರತಿಸ್ಪರ್ಧಿ.. ಹೋಂಡಾ ಶೈನ್ 100 ಡಿಎಕ್ಸ್ ಬೈಕ್ ಬಿಡುಗಡೆ, ರೂ.74,959 ಬೆಲೆ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!

ಇಂದು ಹೊಸ ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX) ಬೈಕ್ ಬಿಡುಗಡೆಗೊಂಡಿದೆ. ವಿಶೇಷವಾಗಿ ಈ ಮೋಟಾರ್‌ಸೈಕಲ್‌ನ್ನು 21ನೇ ಶತಮಾನದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಸಿದ್ಧಪಡಿಸಲಾಗಿದ್ದು, ಆಕರ್ಷಕವಾದ ವಿನ್ಯಾಸ ಹಾಗೂ ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ದರದಲ್ಲೂ ಮಾರಾಟಕ್ಕೆ ಬಂದಿದೆ . ಬನ್ನಿ, ನೂತನ ಬೈಕ್‌ನ ದರವೆಷ್ಟು ಹಾಗೂ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ಹೋಂಡಾ ಶೈನ್ 100 ಡಿಎಕ್ಸ್ ಮೋಟಾರ್‌ಸೈಕಲ್‌, ರೂ.74,959 (ಎಕ್ಸ್-ಶೋರೂಂ - ನವದೆಹಲಿ) ದರದಲ್ಲಿ ಮಾರಾಟಕ್ಕೆ ಬಂದಿದೆ. ಬುಕ್ಕಿಂಗ್ ಕೂಡ ಶುರುವಾಗಿದೆ. ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ಆರ್ಡರ್ ಮಾಡಬಹುದಾಗಿದೆ.

New Honda Shine 100 DX Bike Launched in India Rs 74 959 Price Details

ಈ ಬೈಕ್ ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ತುಂಬಾ ಚೆನ್ನಾಗಿರುವ ಹೆಡ್‌ಲ್ಯಾಂಪ್ ಮತ್ತು ಹೋಂಡಾ ಬ್ರ್ಯಾಂಡಿಂಗ್ ಒಳಗೊಂಡಿರುವ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಜೆನಿ ಗ್ರೇ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್, ಫ್ಯುಯೆಲ್-ಇಂಜೆಕ್ಟೆಡ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 7.28 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.04 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ನೂತನ 'ಶೈನ್ 100 ಡಿಎಕ್ಸ್' ಮೋಟಾರ್‌ಸೈಕಲ್‌, ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 17-ಇಂಚಿರುವ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. 1,955 ಎಂಎಂ ಉದ್ದ, 754 ಎಂಎಂ ಅಗಲ, 1,050 ಎಂಎಂ ಎತ್ತರವು ಇದೆ. ಜೊತೆಗೆ 168 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ ಹೋಂಡಾ ಶೈನ್ 100 ಡಿಎಕ್ಸ್ ಬೈಕ್ 103 ಕೆಜಿ ತೂಕವಿದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಪೋರ್ಕ್ಸ್ & ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಇದಕ್ಕೆ 'ಹೀರೋ ಸ್ಪ್ಲೆಂಡರ್‌' ಮೋಟಾರ್‌ಸೈಕಲ್‌ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.

ಹೋಂಡಾ ಸಿಬಿ125 ಹಾರ್ನೆಟ್ (Honda CB125 Hornet) ಕೂಡ ಮಾರಾಟಕ್ಕೆ ಬಂದಿದೆ:

ಇದು ಸ್ಪೋರ್ಟಿ ವಿನ್ಯಾಸ ಹೊಂದಿರುವ ಬೈಕ್ ಆಗಿದ್ದು, ರೂ.1.12 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಪರಿಚಯಿಸಲಾಗಿದೆ. ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದ್ದು, 123.94 ಸಿಸಿ, 4-ಸ್ಟ್ರೋಕ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 5.4 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಬೈಕ್ 4.2-ಇಂಚಿರುವ ಟಿಎಫ್‌ಟಿ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ, ಎಂಜಿನ್ ಸ್ಟಾಪ್ ಸ್ವಿಚ್ & ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟೇಬಲ್ ಮೊನೊಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Article Published On: Friday, August 1, 2025, 12:56 [IST]
English summary
New honda shine 100 dx bike launched in india rs 74959 price details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+