ಗುಡ್‌ನ್ಯೂಸ್ ಅಣ್ತಮ್ಮಸ್.. ಐರಾವತದಂತಹ ಹೊಸ ಕೀವೇ ಆರ್‌ಆರ್300 ಬೈಕ್ ಬಿಡುಗಡೆ, ಬೆಲೆ ಇಷ್ಟೇನಾ?
ಹಂಗೇರಿ ಮೂಲದ ಕೀವೇ (Keeway) ಸಣ್ಣ ಹಾಗೂ ಮಧ್ಯಮ ಗಾತ್ರದ ದ್ವಿಚಕ್ರ ವಾಹನ (Two Wheeler) ತಯಾರಿಕೆಗೆ ಹೆಸರುವಾಗಿದೆ. ದೇಶೀಯ ಮಾರುಕಟ್ಟೆಯಲ್ಲಿಂದು 'ಆರ್‌ಆರ್300' ಹೆಸರಿನ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಬಿಡುಗಡೆಗೊಳಿಸಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಬನ್ನಿ, ನೂತನ ಬೈಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಸ ಕೀವೇ ಆರ್‌ಆರ್300 (Keeway RR300) ಮೋಟಾರ್‌ಸೈಕಲ್ ಬಜೆಟ್ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ರೂ.1.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಯುವ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಈಗಾಗಲೇ, ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಜುಲೈ ತಿಂಗಳಾಂತ್ಯದೊಳಗೆ ವಿತರಣೆಗಳು ಶುರುವಾಗಲಿದೆ.

ಹೊಸ ಕೀವೇ ಆರ್‌ಆರ್300 ಬೈಕ್ ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ. ಇದು, ಈ ಹಿಂದೆ ದೇಶೀಯವಾಗಿ ಮಾರಾಟವಾಗುತ್ತಿದ್ದ ಕೀವೇ ಕೆ300ಆರ್ (Keeway K300R) ಮೋಟಾರ್‌ಸೈಕಲ್‌ನ ರೀ-ಬ್ರಾಂಡೆಡ್ ಮಾಡೆಲ್ ಕೂಡ ಆಗಿದೆ. ಅತ್ಯುತ್ತಮ ಹೈಡ್‌ಲೈಟ್ ಹಾಗೂ ಬೂಮರಾಂಗ್ ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ. ವೈಟ್, ಬ್ಲ್ಯಾಕ್ & ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಮೋಟಾರ್‌ಸೈಕಲ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 292 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 8,750 ಆರ್‌ಪಿಎಂನಲ್ಲಿ 27.5 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 7,000 ಆರ್‌ಪಿಎಂನಲ್ಲಿ 25 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ನೂತನ ಕೀವೇ ಆರ್‌ಆರ್300 ಬೈಕ್ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 139 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 165 ಕೆಜಿ ತೂಕವಿದ್ದು, 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 1360 ಎಂಎಂ ಅಳತೆಯ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ ಕೀವೇ ಆರ್‌ಆರ್300 ಮೋಟಾರ್‌ಸೈಕಲ್, ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಯುಎಸ್‌ಡಿ ಪೋರ್ಕ್ಸ್ & ಹಿಂಭಾಗ (ರೇರ್) ಪ್ರಿ-ಲೋಡ್ ಅಡ್ಜಸ್ಟಬಲ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು ಹಾಗೂ ವೀಲ್‌ಗಳನ್ನು ಹೊಂದಿದೆ.
ಕೀವೇ ಮಾರಾಟಗೊಳಿಸುವ ಇತರೆ ಜನಪ್ರಿಯ ಬೈಕ್‌ಗಳು ಯಾವುವು ಗೊತ್ತಾ?
ಕೀವೇ ಎಸ್ಆರ್125 (Keeway SR125): ಈ ಮೋಟಾರ್‌ಸೈಕಲ್ ರೂ.1.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 125 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 50 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸರಿ ಸುಮಾರು 120 ಕೆಜಿ ತೂಕವಿದ್ದು, 14.5-ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಕೀವೇ ಎಸ್ಆರ್250 (Keeway SR250): ಇದು 1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 223 ಸಿಸಿ ಸಿಂಗಲ್-ಸಿಲಿಂಡರ್, ಏರ್/ಆಯಿಲ್ ಕೋಲ್ಡ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 40 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಬರೋಬ್ಬರಿ 120 ಕೆಜಿ ತೂಕವಿದ್ದು, 14.5 ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್ ಹಾಗೂ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








