Ola: ಕಹಿಸುದ್ದಿ.. 39,999 ಆರಂಭಿಕ ಬೆಲೆ.. ಓಲಾದ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿತರಣೆ ಮತ್ತಷ್ಟು ತಡ!
ಓಲಾ ಎಲೆಕ್ಟ್ರಿಕ್ (Ola Electric) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದ್ದು, ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿಯಲ್ಲಿ ಇ-ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ವರ್ಷ (2025) ಮತ್ತಷ್ಟು ಖರೀದಿದಾರರಿಗೆ ಹತ್ತಿರವಾಗಲು ಕಂಪನಿಯು ಗಿಗ್ (Gig) ಹಾಗೂ ಎಎಸ್1 ಝಡ್ (S1 Z) ಎಂಬ ಎರಡು ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪರಿಚಯಿಸಿತ್ತು.
ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ನೂತನ ಓಲಾ ಗಿಗ್ ಮತ್ತು ಎಎಸ್1 ಝಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿತರಣೆಯು ಇದೇ 'ಮೇ' ತಿಂಗಳಲ್ಲಿ ಆರಂಭವಾಗಬೇಕಾಗಿತ್ತು. ಆದರೆ, ನಾನಾ ಕಾರಣಗಳಿಂದ ವರ್ಷಾಂತ್ಯಕ್ಕೆ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಸದ್ಯ, ಕಂಪನಿಯು 'ರೋಡ್‌ಸ್ಟರ್' ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ ಉತ್ಪಾದನೆ ಹಾಗೂ ಮಾರಾಟಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಹೀಗಾಗಿ ಈ ಸ್ಕೂಟರ್‌ಗಳ ವಿತರಣೆಯನ್ನ ತಡ ಮಾಡಲಾಗಿದೆ ಎಂದು ಹೇಳಲಾಗಿದೆ.

ಓಲಾ ಗಿಗ್ (Ola Gig) ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು..
ಇದು ರೂ.39,999 ಲಕ್ಷದಿಂದ ರೂ.49,999 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಪೋರ್ಟಬಲ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 112 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 25 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಈ ಸ್ಕೂಟರ್ ರೌಂಡ್ ಎಲ್ಇಡಿ ಹೆಡ್‌ಲೈಟ್ ಮತ್ತು ಎಲ್ಇಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇದು ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಜೊತೆಗೆ ಟೆಲಿಸ್ಕೋಪಿಕ್ ಫೋರ್ಕ್ ಸಸ್ಪೆನ್ಷನ್ ಸೆಟಪ್ ಮತ್ತು 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಓಲಾ ಎಸ್1 ಝಡ್ (Ola S1 Z) ಇ-ಸ್ಕೂಟರ್ ಹೇಗಿದೆ..
ಈ ಎಲೆಕ್ಟ್ರಿಕ್ ಸ್ಕೂಟರ್ ರೂ.59,999 ರಿಂದ ರೂ.64,999 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಇದು 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ ಎರಡು ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 75 ರಿಂದ 146 ಕಿಲೋಮೀಟರ್ ಓಡುತ್ತದೆ.
ನೂತನ ಇ-ಸ್ಕೂಟರ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಜೊತೆಗೆ 4.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಎಲ್ ವೇಗವನ್ನು ಪಡೆಯಲಿದೆ. ಜೊತೆಗೆ ಸಿಲ್ವರ್ ಕಲರ್ ಪೇಂಟ್ ಸ್ಕೀಮ್‌ನ್ನು ಹೊಂದಿದೆ.
ಇದು ಎಲ್‌ಸಿಡಿ ಸ್ಕ್ರೀನ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಟೆಲಿಸ್ಕೋಪಿಕ್ ಫೋರ್ಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಇದರೊಟ್ಟಿಗೆ 14-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








