ಬಡವರು ತೆಗೆದುಕೊಳ್ಳಬಹುದು.. ರೂ.84,999, ಇದೇ 23ರಿಂದ 'ಓಲಾ ರೋಡ್‌ಸ್ಟರ್ ಎಕ್ಸ್' ಎಲೆಕ್ಟ್ರಿಕ್ ಬೈಕ್‌ನ ಡೆಲಿವರಿ ಶುರು!
ಓಲಾ ಎಲೆಕ್ಟ್ರಿಕ್ (Ola Electric) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 'ಎಸ್1' ಸರಣಿಯ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟಕುವ ಬೆಲೆಯಲ್ಲಿಯೂ ಸಿಗುತ್ತವೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಕಳೆದ ಫೆಬ್ರವರಿ ತಿಂಗಳಲ್ಲಿ ಕಂಪನಿಯು ತನ್ನ ಮೊಟ್ಟ ಮೊದಲ ಮೋಟಾರ್‌ಸೈಕಲ್ 'ರೋಡ್‌ಸ್ಟರ್ ಎಕ್ಸ್'ನ್ನು ಅದ್ದೂರಿಯಾಗಿಯೂ ಬಿಡುಗಡೆಗೊಳಿಸಿತ್ತು.
ಬಹುನಿರೀಕ್ಷಿತ ಓಲಾ ರೋಡ್‌ಸ್ಟರ್ ಎಕ್ಸ್ (Ola Roadster X) ಎಲೆಕ್ಟ್ರಿಕ್ ಬೈಕ್‌ನ್ನು ಇದೇ 23ರಿಂದ ಗ್ರಾಹಕರಿಗೆ ವಿತರಿಸಲಾಗುತ್ತದೆ ಎಂದು ಕಂಪನಿಯು ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಮಾಹಿತಿ ಹಂಚಿಕೊಂಡಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ದೇಶಾದ್ಯಂತ ನೂತನ ಓಲಾ ರೋಡ್‌ಸ್ಟರ್ ಎಕ್ಸ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ ಡೆಲಿವರಿಯನ್ನು ಹಂತ ಹಂತಹಂತವಾಗಿ ಕಂಪನಿಯು ಶುರು ಮಾಡುವ ನಿರೀಕ್ಷೆಯಿದೆ. ಮೊದಲಿಗೆ ಬೆಂಗಳೂರಿನ ಗ್ರಾಹಕರಿಗೆ ಹೊಸ ಬೈಕ್ ಲಭ್ಯವಾಗಲಿದೆ. ಆ ಬಳಿಕ, ಇತರೆ ನಗರಗಳ ಖರೀದಿದಾರರಿಗಾಗಿ ವಿತರಣೆ ಮಾಡಲಾಗುತ್ತದೆ ಎಂಬ ವಿವರಗಳು ಲಭ್ಯವಾಗಿವೆ.
ಹೊಸ ಓಲಾ ರೋಡ್‌ಸ್ಟರ್ ಎಕ್ಸ್ ಇ-ಬೈಕ್ ಅತಿ ಕಡಿಮೆ ಬೆಲೆಯನ್ನು ಹೊಂದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬ್ಯಾಟರಿ ಪ್ಯಾಕ್‌ಗೆ ಅನುಗುಣವಾಗಿ ರೂ.84,999 ರಿಂದ ರೂ.1.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ 2.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 4.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 117 ಕಿಲೋಮೀಟರ್, 159 ಕಿಲೋಮೀಟರ್ ಹಾಗೂ 200 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ನೂತನ ಓಲಾ ರೋಡ್‌ಸ್ಟರ್ ಎಕ್ಸ್ ಇ-ಬೈಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 4.3-ಇಂಚು ಅಳತೆಯ ಎಲ್‌ಸಿಡಿ ಸೆಗ್ಮೆಂಟ್ ಡಿಸ್‌ಪ್ಲೇ, ಟರ್ನ್- ಬೈ-ಟರ್ನ್ ನ್ಯಾವಿಗೇಶನ್, ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಹಾಗೂ ಒಟಿಎ ಅಪ್‌ಡೇಟ್‌ಗಳನ್ನು ಒಳಗೊಂಡಿದೆ. ಇದರೊಂದಿಗೆ ಇಕೋ, ನಾರ್ಮಲ್ & ಸ್ಪೋರ್ಟ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.
ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಜೊತೆಗೆ ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಒಟ್ಟಾರೆಯಾಗಿ ಇನ್ನೂ ಎರಡು ದಿನಗಳಲ್ಲಿ ಹೊಚ್ಚ ಹೊಸ 'ಓಲಾ ರೋಡ್‌ಸ್ಟರ್ ಎಕ್ಸ್' ಇ-ಬೈಕ್‌ನ ವಿತರಣೆ ಆರಂಭವಾಗಲಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಸಂತಸವನ್ನು ತರಿಸಿದೆ. ಇದು ಹೆಚ್ಚು ಅತ್ಯುತ್ತಮವಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಲಭ್ಯವಿದೆ. ಈ ಹಿನ್ನೆಲೆ, ಮುಂಬರುವ ದಿನಗಳಲ್ಲಿ ಬಹುತೇಕ ಯುವ ಖರೀದಿದಾರರ ಆಯ್ಕೆಯ ದ್ವಿಚಕ್ರ ವಾಹನವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








