Royal Enfield: ನೂತನ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್ ಕುರಿತ ಪ್ರಮುಖಾಂಶಗಳು.. ನಿಮಗೆ ಯಾರು ಹೇಳಲ್ಲ!

ದೇಶದ ಯುವ ಜನತೆಗೆ ನಿಮಿಷ್ಟದ ಬೈಕ್ ಯಾವುದು ಎಂದು ಪ್ರಶ್ನೆ ಮಾಡಿದರೆ, ಅವರಿಂದ ತಕ್ಷಣವೇ ಬರುವ ಒಂದೇ ಒಂದು ಉತ್ತರ ರಾಯಲ್ ಎನ್‌ಫೀಲ್ಡ್ (Royal Enfield) ಮೋಟಾರ್‌ಸೈಕಲ್‌ ಎಂದು.. ಅಷ್ಟರ ಮಟ್ಟಿಗೆ ಕಂಪನಿಯ ಬೈಕ್‌ಗಳು ದೊಡ್ಡಮಟ್ಟದ ಜನಪ್ರಿಯತೆ ಗಳಿಸಿವೆ. ಇತ್ತೀಚೆಗೆ ರಾಯಲ್ ಎನ್‌ಫೀಲ್ಡ್ ಹೊಚ್ಚ ಹೊಸ ಸ್ಕ್ರಾಮ್ 440 (Scram 440) ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಿತ್ತು. ಬನ್ನಿ.. ಈ ಹೊಸ ಬೈಕ್ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಯ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants): ನೂತನ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 (Royal Enfield Scram 440) ಬೈಕ್, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.2.08 ಲಕ್ಷದಿಂದ ರೂ.2.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಟ್ರಯಲ್ & ಫೋರ್ಸ್ ಎಂಬ 2 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

New Royal Enfield Scram 440 Bike Top Things You Should Must Know

ವಿನ್ಯಾಸ (Design): ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಮೋಟಾರ್‌ಸೈಕಲ್‌, ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಟರ್ನ್-ಇಂಡಿಕೇಟರ್‌ಗಳನ್ನು ಒಳಗೊಂಡಿದೆ. ಫೋರ್ಸ್ ಟೀಲ್, ಫೋರ್ಸ್ ಗ್ರೇ, ಫೋರ್ಸ್ ಬ್ಲೂ, ಟ್ರಯಲ್ ಗ್ರೀನ್ ಹಾಗೂ ಟ್ರಯಲ್ ಬ್ಲೂ ಬಣ್ಣಗಳೊಂದಿಗೂ ಸಿಗುತ್ತದೆ.

ಕಾರ್ಯಕ್ಷಮತೆ (Performance): ಈ ಬೈಕ್, 443 ಸಿಸಿ, ಏರ್/ಆಯಿಲ್ ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 25.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

New Royal Enfield Scram 440 Bike Top Things You Should Must Know

ವೈಶಿಷ್ಟ್ಯಗಳು (Features): ನೂತನ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್, ಯುವ ಗ್ರಾಹಕರನ್ನು ಸೆಳೆಯುವ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸಿಂಗಲ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ನಕಲ್ ಗಾರ್ಡ್‌ಗಳನ್ನು ಒಳಗೊಂಡಿದ್ದು, ಅಗಲವಾಗಿರುವ ಹ್ಯಾಂಡಲ್‌ಬಾರ್‌ಗಳು, ಸಿಂಗಲ್-ಪೀಸ್ ಸೀಟ್‌‌ನ್ನು ಹೊಂದಿದೆ. 196 ಕೆಜಿ ತೂಕವಿದ್ದು, 19/17-ಇಂಚಿನ ಸ್ಪೋಕ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಹಾಗೆಯೇ ಡುಯಲ್ ಡಿಸ್ಕ್ ಬ್ರೇಕಿಂಗ್ ಸಿಸ್ಟಮ್‌ನ್ನು ಒಳಗೊಂಡಿದ್ದು, ಡುಯಲ್ ಚಾನೆಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

New Royal Enfield Scram 440 Bike Top Things You Should Must Know

ಇನ್ನು, ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಮೋಟಾರ್‌ಸೈಕಲ್‌ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಬಿಡುಗಡೆಗೊಂಡಿರುವುದು ಯುವ ಗ್ರಾಹಕರಿಗೆ ಖುಷಿ ನೀಡಿದೆ. ಮುಂಬರುವ ದಿನಗಳಲ್ಲಿ ಈ ಬೈಕ್ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಳ್ಳುವ ನೀರಿಕ್ಷೆಯಿದೆ. ಈ ಬೈಕ್‌ಗೆ ಯೆಜ್ಡಿ ಸ್ಕ್ರ್ಯಾಂಬ್ಲರ್ & ಟ್ರಯಂಫ್ ಸ್ಕ್ರ್ಯಾಂಬ್ಲರ್ 400ಎಕ್ಸ್ ಮೋಟಾರ್‌ಸೈಕಲ್‌ಗಳು ಕೂಡ ಪ್ರಬಲವಾದ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, January 26, 2025, 17:12 [IST]
English summary
New royal enfield scram 440 bike top things you should must know
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+