Royal Enfield: ಸದ್ದಿಲ್ಲದೇ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಬೈಕ್ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ರಾಯಲ್ ಎನ್‌ಫೀಲ್ಡ್ (Royal Enfield) ಪ್ರೀಮಿಯಂ ಮೋಟಾರ್‌ಸೈಕಲ್ ತಯಾರಿಕೆಗೆ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಬೈಕ್‌ಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವುದರಿಂದ ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇದೀಗ, ಯುವ ಖರೀದಿದಾರರು ಸೆಳೆಯಲು ಕಂಪನಿಯು 'ಸ್ಕ್ರಾಮ್ 440' ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 (Royal Enfield Scram 440) ಬೈಕ್, ಟ್ರಯಲ್ (Trail) ಹಾಗೂ ಫೋರ್ಸ್ (Force) ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಇದರೊಟ್ಟಿಗೆ ಬಜೆಟ್ ಬೆಲೆಯಲ್ಲಿ ಮಾರಾಟಕ್ಕೆ ಬಂದಿದ್ದು, ರೂ.2,08,000 ರಿಂದ ರೂ.2,15,000 ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ.

ನೂತನ ಸ್ಕ್ರಾಮ್ 440 ಮೋಟಾರ್‌ಸೈಕಲ್ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರ ಕಣ್ಣು ಕುಕ್ಕುತ್ತದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು ಹಾಗೂ ಟರ್ನ್ - ಇಂಡಿಕೇಟರ್‌ಗಳನ್ನು ಪಡೆದಿದೆ. ಜೊತೆಗೆ ಫೋರ್ಸ್ ಟೀಲ್, ಫೋರ್ಸ್ ಗ್ರೇ, ಫೋರ್ಸ್ ಬ್ಲೂ, ಟ್ರಯಲ್ ಗ್ರೀನ್ ಮತ್ತು ಟ್ರಯಲ್ ಬ್ಲೂ ಬಣ್ಣಗಳೊಂದಿಗೂ ಗ್ರಾಹಕರ ಖರೀದಿಗೆ ಸಿಗುತ್ತದೆ.
ಈ ಬೈಕ್ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದು 443 ಸಿಸಿ, ಏರ್/ ಆಯಿಲ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6,250 ಆರ್‌ಪಿಎಂನಲ್ಲಿ 25.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,000 ಆರ್‌ಪಿಎಂನಲ್ಲಿ 34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಸದ್ಯಕ್ಕೆ ನೂತನ ಮೋಟಾರ್‌ಸೈಕಲ್‌ನ ಮೈಲೇಜ್ ಕುರಿತಂತೆ ಸ್ಪಷ್ಟವಾದ ವಿವರಗಳು ಲಭ್ಯವಾಗಿಲ್ಲ.

ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ವಿನೂತನವಾಗಿರುವ ಸಿಂಗಲ್ - ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ನಕಲ್ ಗಾರ್ಡ್‌ಗಳನ್ನು ಒಳಗೊಂಡಿದೆ. ಜೊತೆಗೆ ಅಗಲವಾಗಿರುವ ಹ್ಯಾಂಡಲ್‌ಬಾರ್‌ಗಳು, ಸಿಂಗಲ್ ಪೀಸ್ ಸೀಟ್‌ನ್ನು ಪಡೆದಿದೆ. 196 ಕೆಜಿ ತೂಕವಿದ್ದು, 19/17-ಇಂಚಿನ ಸ್ಪೋಕ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.
ನೂತನ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಡುಯಲ್ - ಡಿಸ್ಕ್ ಬ್ರೇಕಿಂಗ್ ಸಿಸ್ಟಮ್‌ನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ತನ್ನದಾಗಿಸಿಕೊಂಡಿದೆ.

ಇನ್ನು, ಈ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 440 ಮೋಟಾರ್‌ಸೈಕಲ್‌ಗೆ ಟ್ರಯಂಫ್ ಸ್ಕ್ರ್ಯಾಂಬ್ಲರ್ 400ಎಕ್ಸ್ ಹಾಗೂ ಯೆಜ್ಡಿ ಸ್ಕ್ರ್ಯಾಂಬ್ಲರ್ ಬೈಕ್‌ಗಳು ನೇರವಾದ ಪ್ರತಿಸ್ಪರ್ಧಿಯಾಗಿವೆ. ಹೊಸ ಬೈಕ್ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬಂದಿದ್ದು, ಹೆಚ್ಚಿನ ಸಂಖ್ಯೆಯ ಯುವಕರ ಆಯ್ಕೆಯ ದ್ವಿಚಕ್ರ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








