Suzuki Access 125: ಲಕ್ಸುರಿ ಲುಕ್.. 2025ರ ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಬಿಡುಗಡೆ.. 81,700 ಬೆಲೆ, ಹೇಗಿದೆ?

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ನವೀಕರಿಸಿದ 2025ರ ನೂತನ ಆಕ್ಸೆಸ್ 125 (Access 125) ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ. ನೂತನ ಸ್ಕೂಟರ್ ಸಾಕಷ್ಟು ಹೊಸತನಗಳಿಗೆ ಸಾಕ್ಷಿಯಾಗಿದೆ. ಬನ್ನಿ.. ಹೊಸ ಸ್ಕೂಟರ್ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

2025ರ ನೂತನ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್, ಬಜೆಟ್ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದು ರೂ. 81,700 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ (Standard), ಸ್ಪೆಷಲ್ (Special) ಹಾಗೂ ರೈಡ್ ಕನೆಕ್ಟ್ ಎಡಿಷನ್ (Ride Connect Edition) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಒಳಗೊಂಡಿದೆ.

New Suzuki Access 125 Launched At Auto Expo 2025 Details

ಹೊಸ ಸ್ಕೂಟರ್ ಒಬಿಡಿ2 (OBD2) ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಿದ 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6,500 ಆರ್‌ಪಿಎಂನಲ್ಲಿ 8.3 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,000 ಆರ್‌ಪಿಎಂನಲ್ಲಿ 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ.

ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಇದು ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಸಾಲಿಡ್ ಐಸ್ ಗ್ರೀನ್ & ಪರ್ಲ್ ಶೈನಿ ಬೀಜ್ ಬಣ್ಣಗಳೊಂದಿಗೂ ಲಭ್ಯವಿದೆ.

New Suzuki Access 125 Launched At Auto Expo 2025 Details

ಈ ಸ್ಕೂಟರ್ ಯುವ ಗ್ರಾಹಕರನ್ನು ಸೆಳೆಯುವ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಡಿಜಿಟಲ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿದೆ. ಇದರೊಟ್ಟಿಗೆ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಪಡೆದಿದೆ. ಇದು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್/ಎಸ್ಎಂಎಸ್ ಅಲರ್ಟ್, ರೈನ್ ಅಲರ್ಟ್ ಮತ್ತು ಕ್ಯಾಲೆಂಡರ್ ಅಲರ್ಟ್‌ನ್ನು ಬೆಂಬಲಿಸುತ್ತದೆ.

ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂದೆ ಡಿಸ್ಕ್ ಹಾಗೂ ಹಿಂದೆ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ ಅಲಾಯ್ ವೀಲ್ ಸೆಟಪ್‌ನ್ನು ಪಡೆದಿದೆ.

New Suzuki Access 125 Launched At Auto Expo 2025 Details

ಸುಜುಕಿ ಇ-ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಕೂಡ ಅನಾವರಣ: ಈ ಹೊಸ ಇ-ಸ್ಕೂಟರ್, ಶಕ್ತಿಯುತವಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ದೊಡ್ಡದಾದ ಅಂಡರ್ ಸೀಟ್ ಸ್ಟೋರೇಜ್, ಟಿಎಫ್‌ಟಿ ಕನ್ಸೋಲ್ ಅನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, January 18, 2025, 15:12 [IST]
English summary
New suzuki access 125 launched at auto expo 2025 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+